ದೇಶದಾದ್ಯಂತ ಬಹುತೇಕ ರಾಜಕಾರಣಿಗಳು ಕೊರೊನಾ ಲಸಿಕೆ ಹಾಕಿಸಿಕೊಂಡಿರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ತಮ್ಮ ಮತಕ್ಷೇತ್ರ ಹಿರೇಕೆರೂರಿನಲ್ಲಿರುವ ಮನೆಯಲ್ಲಿ ಸರ್ಕಾರಿ ವೈದ್ಯರಿಂದ ಕೋವಿಡ್ ಲಸಿಕೆ ಪಡೆದುಕೊಂಡಿರುವ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಸಚಿವರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ನಿಯಮದ ಪ್ರಕಾರ ಕೊರೊನಾ ಲಸಿಕೆಯನ್ನು ಆಸ್ಪತ್ರೆಗಳಲ್ಲೆ ಪಡೆದುಕೊಳ್ಳಬೇಕು. ಆದರೆ, ಸಚಿವ ಬಿ.ಸಿ.ಪಾಟೀಲ್ ತಮ್ಮ ನಿವಾಸಕ್ಕೆ ಸರ್ಕಾರಿ ವೈದ್ಯರನ್ನು ಕರೆಸಿ ಲಸಿಕೆ ಪಡೆದುಕೊಂಡಿರುವ ಬಗ್ಗೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಈ ಸಂಬಂಧ ಕೇಂದ್ರ ಸರಕಾರವು ವರದಿ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.
ಪ್ರಧಾನಿ ನರೇಂದ್ರ ಮೋದಿಯೆ ಆಸ್ಪತ್ರೆಗೆ ತೆರಳಿ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಆದರೆ, ತಾವು ವೈದ್ಯರನ್ನು ಮನೆಗೆ ಕರೆದುಕೊಂಡು ಲಸಿಕೆ ಪಡೆದುಕೊಂಡಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಬಿಜೆಪಿ ಸಚಿವನ ವಿರುದ್ದ ಲೈಂಗಿಕ ದೌರ್ಜನ್ಯದ ಆರೋಪ: ರಾಜೀನಾಮೆಗೆ ಹೆಚ್ಚಿದ ಒತ್ತಡ
Why vaccination at home ?
Our beloved PM @narendramodi ji took vaccine at hospital. pic.twitter.com/7iDinjEd3Q— Sateesh B Gyaranagoudar (@sateesh_ctm) March 2, 2021
ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು


