Homeಮುಖಪುಟಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

ಕಮಲ್ ಹಾಸನ್ ಪಕ್ಷದ ಉಪಾಧ್ಯಕ್ಷನಾಗಿ APJ ಅಬ್ದುಲ್ ಕಲಾಂ ಅವರ ಸಲಹೆಗಾರ!

ಆಡಳಿತಾರೂಢ ಬಿಜೆಪಿ ಸರ್ಕಾರ ನೀಡಿದ ಅಡೆತಡೆಗಳಿಂದಾಗಿ ತಾವು ಪ್ರಾರಂಭಿಸಿದ ಅಬ್ದುಲ್ ಕಲಾಂ ವಿಷನ್ ಇಂಡಿಯಾ ಪಕ್ಷವನ್ನು ನೋಂದಾಯಿಸಲು ಸಹ ಸಾಧ್ಯವಾಗಲಿಲ್ಲ ಎಂದು ಪೊನ್ರಾಜ್ ಹೇಳಿದ್ದಾರೆ.

- Advertisement -
- Advertisement -

ಪಂಚರಾಜ್ಯಗಳ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರುತ್ತಿದೆ. ಅದರಲ್ಲೂ ಈ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆ ವಿಶೇಷವಾಗಿ ಗಮನ ಸೆಳೆದಿದೆ. ರಾಷ್ಟ್ರೀಯ ಪಕ್ಷಗಳ ಜೊತೆಗೆ ನಟ ಕಮಲ್ ಹಾಸನ್ ಅವರ ನೂತನ ಪಕ್ಷ ಮಕ್ಕಳ್ ನೀಧಿ ಮಯ್ಯಂ ಸಹ ಅದೃಷ್ಟ ಪರೀಕ್ಷೆಗೆ ಇಳಿದಿದೆ.

ಬುಧವಾರ (ಮಾರ್ಚ್ 3) ವಿ. ಪೊನ್ರಾಜ್ ಎಂಬುವವರು ಮಕ್ಕಳ್ ನೀಧಿ ಮಯ್ಯಂ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ವಿ. ಪೊನ್ರಾಜ್ ದಿವಂಗತ ಮಾಜಿ ರಾಷ್ಟ್ರಪತಿ ಎ.ಪಿ.ಜೆ ಅಬ್ದುಲ್ ಕಲಾಂ ಅವರಿಗೆ ವೈಜ್ಞಾನಿಕ ಸಲಹೆಗಾರರಾಗಿದ್ದವರು.

ಚೆನ್ನೈನ ಅಲ್ಪಾರ್‌ಪೇಟ್‌ನಲ್ಲಿ ನಡೆದ ಸಭೆಯಲ್ಲಿ ಪೊನ್ರಾಜ್ ಅವರನ್ನು ಪರಿಚಯಿಸಿದ ಪಕ್ಷದ ಅಧ್ಯಕ್ಷ, ನಟ ಕಮಲ್ ಹಾಸನ್ ಅವರು ಡಾ.ಆರ್.ಮಹೇಂದ್ರನ್ ಅವರೊಂದಿಗೆ ಪೊನ್ರಾಜ್ ಕೂಡ ಪಕ್ಷದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಮುರುಘಾ ಮಠದ ಅಧಿಕಾರಿಯ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಬಯಲಿಗೆಳೆದ ಪತ್ರಕರ್ತನ ವಿರುದ್ಧ ಎಫ್‌ಐಆರ್!

“ದೇಶಕ್ಕಾಗಿ ಅಬ್ದುಲ್ ಕಲಾಂ ಅವರ ದೃಷ್ಟಿಕೋನವನ್ನು ನಿಜವಾಗಿಸುವ ಯಾರೊಂದಿಗಾದರೂ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಕಮಲ್ ಹಾಸನ್ ಅವರಿಂದ ಕರೆ ಬಂದಾಗ, ನಾನು ಪಕ್ಷಕ್ಕೆ ಸೇರಲು ನಿರ್ಧರಿಸಿದೆ. ಕಮಲ್ ಹಾಸನ್ ಅವರ ಸಮರ್ಥ ನಾಯಕತ್ವದಲ್ಲಿ ಅಬ್ದುಲ್ ಕಲಾಂ ಅವರ ಕನಸುಗಳನ್ನು ನನಸು ಮಾಡುವ  ವಿಶ್ವಾಸವಿದೆ ”ಎಂದು ಪೊನ್ರಾಜ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ವೈಫಲ್ಯಗಳ ಪ್ರಚಾರ: 100 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಿಂದ ’ಜನಧ್ವನಿ’ ಜಾಥಾ

ರಾಜಕೀಯ ನೀತಿಗಳನ್ನು ರೂಪಿಸುವಲ್ಲಿ ನಟ ರಜನಿಕಾಂತ್ ಅವರೊಂದಿಗೆ ಒಂದೆರಡು ವರ್ಷಗಳಿಂದ ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಪೊನ್ರಾಜ್ ಹೇಳಿದ್ದಾರೆ. ಆದರೆ ಅವರಿಗೆ ಆರೋಗ್ಯದ ತೊಂದರೆಗಳಿಂದಾಗಿ ಅವರ ಪಕ್ಷ ಘೋಷಣೆಯಾಗಲಿಲ್ಲ ಎಂದಿದ್ದಾರೆ.

ಆಡಳಿತಾರೂಢ ಬಿಜೆಪಿ ಸರ್ಕಾರವು ನೀಡಿದ ಅಡೆತಡೆಗಳಿಂದಾಗಿ ತಾನು ಪ್ರಾರಂಭಿಸಿದ ಅಬ್ದುಲ್ ಕಲಾಂ ವಿಷನ್ ಇಂಡಿಯಾ ಪಕ್ಷವನ್ನು ನೋಂದಾಯಿಸಲು ಸಹ ಸಾಧ್ಯವಾಗಲಿಲ್ಲ ಎಂದು ಪೊನ್ರಾಜ್ ಹೇಳಿದ್ದಾರೆ. ಎಲ್ಲಾ ಯುವಕರು ಮತ್ತು ಮಾಜಿ ರಾಷ್ಟ್ರಪತಿಗಳ ಹೆಸರಿನಲ್ಲಿ ಕಲ್ಯಾಣ ಕ್ಲಬ್‌ಗಳನ್ನು ನಡೆಸುತ್ತಿರುವವರು ತಮಿಳುನಾಡಿನ ಬದಲಾವಣೆಗಾಗಿ ಪಕ್ಷಕ್ಕೆ ಸೇರ್ಪಡೆಯಾಗಿ ಕೆಲಸ ಮಾಡಬೇಕೆಂದು ಪೊನ್ರಾಜ್ ಮನವಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಈ ಬಾರಿ ಘಟಾನುಘಟಿಗಳು ಕಣಕ್ಕಿಳಿಯುವ ಸಾಧ್ಯತೆಗಳಿವೆ. ನಟಿ ಖುಷ್ಬೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದು, ಇತ್ತ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.  ನಟ ಕಮಲ್‌ ಹಾಸನ್, ರಜನಿಕಾಂತ್‌ ಮತ್ತು ಶರತ್ ಕುಮಾರ್‌ ಬೆಂಬಲ ಕೇಳಿದ್ದು, ಚುನಾವಣೆಗೆ ಬಣ್ಣದ ಲೋಕದ ಟಚ್ ನೀಡುತ್ತಿದ್ದಾರೆ.


ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...