HomeಮುಖಪುಟBreaking - ತಾಜ್‌ ಮಹಲ್‌ಗೆ ಬಾಂಬ್ ಬೆದರಿಕೆ: ಪ್ರವಾಸಿಗರ ಸ್ಥಳಾಂತರ!

Breaking – ತಾಜ್‌ ಮಹಲ್‌ಗೆ ಬಾಂಬ್ ಬೆದರಿಕೆ: ಪ್ರವಾಸಿಗರ ಸ್ಥಳಾಂತರ!

- Advertisement -
- Advertisement -

ವಿಶ್ವ ಪ್ರಸಿದ್ಧ ತಾಜ್ ಮಹಲ್‌ಗೆ ಬಾಂಬ್ ದಾಳಿ ಬೆದರಿಕೆ ಬಂದಿದೆ ಎಂದು ಹೇಳಲಾಗುತ್ತಿದ್ದು, ಈ ಕಾರಣಕ್ಕಾಗಿ ಪ್ರವಾಸಿಗರನ್ನು ಸ್ಥಳಾಂತರಿಸಿ ತಾಜ್‌ ಮಹಲ್‌ ಅನ್ನು ಮುಚ್ಚಲಾಗಿದೆ.

ಬಾಂಬ್ ಬೆದರಿಕೆಯ ಬಗ್ಗೆ ಉತ್ತರ ಪ್ರದೇಶ ಪೊಲೀಸರಿಗೆ ಕರೆ ಬಂದ ನಂತರ ಆಗ್ರಾದಲ್ಲಿರುವ ತಾಜ್ ಮಹಲ್ ಅನ್ನು ಮುಚ್ಚಲಾಗಿದ್ದು, ಪ್ರವಾಸಿಗರನ್ನು ಬೆಳಿಗ್ಗೆ ಸ್ಥಳಾಂತರಿಸಲಾಗಿದೆ. ಪೊಲೀಸ್ ಸಹಾಯವಾಣಿಗೆ ಕರೆ ಬಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ 2020ರ ಮಾರ್ಚ್ 17 ರಿಂದ ಆರು ತಿಂಗಳ ಕಾಲ ಪ್ರಸಿದ್ಧ ಪ್ರವಾಸಿ ತಾಣಕ್ಕೆ ಪ್ರವಾಸಿಗರು ಭೇಟಿ ನೀಡುವುದನ್ನು ನಿಷೇಧಿಸಲಾಗಿತ್ತು. ನಂತರ 2020ರ ಸೆಪ್ಟಂಬರ್‌ನಲ್ಲಿ ಕಟ್ಟುನಿಟ್ಟಾದ ಕೊರೊನಾ ಮಾರ್ಗಸೂಚಿಗಳೊಂದಿಗೆ ಪ್ರವಾಸಿಗರಿಗೆ ಮುಕ್ತ ಅವಕಾಶ ನೀಡಲಾಗಿತ್ತು.

ಬಾಂಬ್ ಬೆದರಿಕೆ ಕರೆ ಬಂದ ನಂತರ ಅಧಿಕಾರಿಗಳು ಆವರಣವನ್ನು ಶೋಧಿಸಿದರು. ಆದರೆ ಈ ವರೆಗೂ ಯಾವುದೆ ಬಾಂಬ್ ಪತ್ತೆಯಾಗಿಲ್ಲ. ಕರೆ ಮಾಡಿದವರನ್ನು ಪತ್ತೆ ಹಚ್ಚಲು ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

“ಇಂದು ಬೆಳಿಗ್ಗೆ, ಅಪರಿಚಿತ ವ್ಯಕ್ತಿಯೊಬ್ಬರು ಉತ್ತರಪ್ರದೇಶದ 112 ಸಹಾಯವಾಣಿಗೆ ಕರೆ ಮಾಡಿ ತಾಜ್ ಮಹಲ್‌ನಲ್ಲಿ ಬಾಂಬ್ ಸ್ಫೋಟ ಸಂಭವಿಸಲಿದೆ ಎಂದು ಹೇಳಿದರು. ತಕ್ಷಣ ನಮ್ಮ ಬಾಂಬ್ ಸ್ಕ್ವಾಡ್ ಮತ್ತು ಇತರ ತಂಡಗಳು ಆವರಣದಲ್ಲಿ ಸಂಪೂರ್ಣ ಶೋಧ ನಡೆಸಿದರು. ಇಲ್ಲಿಯವರೆಗೆ ಅಂತಹ ವಸ್ತು ಪತ್ತೆಯಾದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ” ಎಂದು ಆಗ್ರಾದ ಇನ್ಸ್‌ಪೆಕ್ಟರ್ ಜನರಲ್ ಎ ಸತೀಶ್ ಗಣೇಶ್ ಹೇಳಿದರು.

ಸುದ್ದಿ ಅಪ್‌ಡೇಟ್ ಆಗಲಿದೆ.


ಇದನ್ನೂ ಓದಿ: ಪೆಟ್ರೋಲ್‌ ಬಂಕ್‌ಗಳಲ್ಲಿರುವ ಮೋದಿ ಭಾವಚಿತ್ರವನ್ನು ಶೀಘ್ರವೇ ತೆರವುಗೊಳಿಸಿ: ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...