Homeಕರ್ನಾಟಕಸುಲಿಗೆ ಆರೋಪ: ವಿಜಯೇಂದ್ರ ವಿರುದ್ದ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌‌ಗೆ ನೋಟಿಸ್

ಸುಲಿಗೆ ಆರೋಪ: ವಿಜಯೇಂದ್ರ ವಿರುದ್ದ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌‌ಗೆ ನೋಟಿಸ್

- Advertisement -
- Advertisement -

ಸುಲಿಗೆ ಮತ್ತು ಕ್ರಿಮಿನಲ್‌ ಸ೦ಚು ಆರೋಪದಡಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ ಹಾಗೂ ಇತರರ ವಿರುದ್ದ ನೀಡಲಾಗಿದ್ದ ದೂರಿಗೆ ಎಫ್‌ಐಆರ್‌ ದಾಖಲಿಸದ ಪೊಲೀಸ್ ಅಧಿಕಾರಿಗೆ ನೋಡಿಸ್ ನೀಡಲಾಗಿದೆ. ವಿಜಯೇಂದ್ರ ವಿರುದ್ಧ ನೀಡಿದ್ದ ದೂರನ್ನು ಕ್ಲೋಸ್ ಮಾಡಿದ್ದ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರಿಗೆ 65 ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ನೋಟೀಸ್‌ ಜಾರಿಗೊಳಿಸಿದೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಜಸಂಪ (ಜನಾಧಿಕಾರ ಸಂಘರ್ಷ ಪರಿಷತ್) ಸಲ್ಲಿಸಿದ್ದ ದೂರನ್ನು ಪೊಲೀಸರು ವಜಾಗೊಳಿಸಿದ್ದರು. ಹೀಗಾಗಿ ಜಸಂಪ ಪದಾಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ಇನ್ಸ್‌ಪೆಕ್ಟರ್ ವಿರುದ್ದ ನ್ಯಾಯಾಲಯದಲ್ಲಿ ದೂರು

ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಎಪ್ರಿಲ್ 7 ಕ್ಕೆ ಮುಂದೂಡಿದೆ. ಆರೋಪಿಗಳ ವಿರುದ್ದ ಲಂಚ ಆರೋಪವಿದ್ದರೂ ಯಾವುದೆ ದೂರು ದಾಖಲಿಸದೆ ಮುಕ್ತಾಯಗೊಳಿಸಿದ್ದಕ್ಕೆ ಜನಾಧಿಕಾರ ಸಂಘರ್ಷ ಪರಿಷತ್‌ ಮಾರ್ಚ್ 3 ರಂದು ದೂರು ದಾಖಲಿಸಿತ್ತು.

ಶೇಷಾದ್ರಿಪುರಂ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರಿಗೆ ಜನಾಧಿಕಾರ ಸ೦ಘರ್ಷ ಪರಿಷತ್ 2020 ರ ಸೆಪ್ಟ೦ಬರ್‌ 25 ರಂದು ಸುಲಿಗೆ ಮತ್ತು ಕ್ರಿಮಿನಲ್‌ ಸ೦ಚು ಆರೋಪದಡಿಯಲ್ಲಿ ದೂರು ಸಲ್ಲಿಸಿತ್ತು. ನಿಯಮದಂತೆ ಇಂತಹ ದೂರು ಸಲ್ಲಿಕೆಯಾದರೆ, ದೂರು ಸಲ್ಲಿಕೆಯಾದ 24 ಗ೦ಟೆಯೊಳಗೆ ಆರೋಪಿತರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕಾಗುತ್ತದೆ. ಆದರೆ ಠಾಣೆಯ ಇನ್ಸ್‌ಪೆಕ್ಟರ್‌ ಅವರು ಈ ನಿಮಯವನ್ನು ಉಲ್ಲಂಘಿಸಿದ್ದರು.

ಇದನ್ನೂ ಓದಿ: ಸಿಎಂ ಮಗ ವಿಜಯೇಂದ್ರ ಮೇಲೆ FIR ದಾಖಲಿಸದ ‌‌DCP ವಿರುದ್ದ ದೂರು ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ದೆಹಲಿಯಲ್ಲಿ ರೈಲು ಸಂಚಾರ ರದ್ದು, ಭಾರೀ ಪ್ರಮಾಣದ ಭದ್ರತಾ ಸಿಬ್ಬಂದಿ ನಿಯೋಜನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಯಾವುದೇ ಗುಂಪು ಸೇರುವುದನ್ನು ಕಾನೂನುಬಾಹಿರವೆಂದು ಘೋಷಿಸಿದ್ದಾರೆ. ಅಕ್ಟೋಬರ್ 10 ರಂದು ಬೆಳಿಗ್ಗೆ 4 ರಿಂದ ಮಧ್ಯಾಹ್ನ 2 ರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್ ದಾಖಲಿಸಲು ಕೇರಳ ಹೈಕೋರ್ಟ್ ಆದೇಶ

ಕೊಚ್ಚಿ: ಕೇರಳದ ಸಿಎಂಆರ್‌ಎಲ್ (ಕೊಚ್ಚಿನ್ ಮಿನರಲ್ಸ್ ಆ್ಯಂಡ್ ರೂಟೈಲ್ ಲಿಮಿಟೆಡ್) ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿರುವ ವರದಿಯ ಆಧಾರದ ಮೇಲೆ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರರ...

ಎಲಾನ್ ಮಸ್ಕ್ – ರಾಹುಲ್ ಗಾಂಧಿ ಟ್ವೀಟ್ ಸಂವಾದ: ಭಾರತದ ಕಾರ್ಪೊರೇಟ್ ಏಕಸ್ವಾಮ್ಯ ಹಾಗೂ ಸ್ಟಾರ್‌ಲಿಂಕ್ ಲೈಸೆನ್ಸ್ ವಿಚಾರ ಜಾಗತಿಕ ಚರ್ಚೆಗೆ!

ಸಾಮಾಜಿಕ ಜಾಲತಾಣ 'ಎಕ್ಸ್' (X) ನಲ್ಲಿ ವಿಶ್ವದ ಖ್ಯಾತ ಉದ್ಯಮಿ ಎಲಾನ್ ಮಸ್ಕ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ನಡೆದ ಸಂಭಾಷಣೆಯು ದೇಶದ ರಾಜಕೀಯ ಮತ್ತು ಆರ್ಥಿಕ...

ಉತ್ತರ ಪ್ರದೇಶ| ಎಫ್‌ಐಆರ್ ದಾಖಲಿಸಲು ದಲಿತ ಮಹಿಳೆಗೆ ಸಹಾಯ; ತಾಯಿ-ಮಗಳ ಮೇಲೆ ಹಲ್ಲೆ

ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲೆಯ ಜಗತ್‌ಪುರ ಪ್ರದೇಶದಲ್ಲಿ, ಮಹಿಳೆಯೊಬ್ಬರು ಹಾಗೂ ಅವರ 12 ವರ್ಷದ ಮಗಳ ಮೇಲೆ ಬುಧವಾರ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಗ್ರಾಮದ ಪ್ರಧಾನ್ ಹಾಗೂ ಆತನ ಇಬ್ಬರು ಪುತ್ರರ...

‘ವೋಟ್ ಚೋರಿ ಆಗುತ್ತಿದೆ ಎಂಬುದಕ್ಕೆ ಮೂರು ಸಾಕ್ಷಿಗಳಿವೆ; ಮೋದಿ-ಶಾ ಉತ್ತರಿಸಲಿ’: ಬೆಂಗಳೂರಿನಲ್ಲಿ ಧ್ರುವ್ ರಾಠೀ ಆಗ್ರಹ 

ಬೆಂಗಳೂರು: “ವೋಟ್ ಚೋರಿ ಆಗುತ್ತಿದೆ ಎನ್ನುವುದಕ್ಕೆ ನಾನು ಮೂರು ಸಾಕ್ಷಿಗಳನ್ನು ನೀಡುತ್ತೇನೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಉತ್ತರಿಸಬೇಕು” ಎಂದು ಜರ್ಮನಿಯಲ್ಲಿ ವಾಸವಿರುವ ಖ್ಯಾತ ಭಾರತೀಯ ಯೂಟ್ಯೂಬರ್, ವೀಡಿಯೊ...

‘ಪ್ರಜೆಗಳನ್ನು ಕೊಲ್ಲಲು ಸಾಧ್ಯವಿಲ್ಲ, ಅದಕ್ಕಾಗಿಯೇ ವೋಟುಗಳನ್ನು ತೆಗೆದಿದ್ದಾರೆ’: ಚುನಾವಣಾ ಆಯೋಗದ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ 

ಬೆಂಗಳೂರು: “ಆದಿವಾಸಿಗಳು, ಬಡವರು ಮತ್ತು ಮುಸ್ಲಿಮರ ವೋಟುಗಳನ್ನು ತೆಗೆದಿದ್ದಾರೆ. ಪ್ರಜೆಗಳನ್ನು ಕೊಲ್ಲುವುದಕ್ಕೆ ಸಾಧ್ಯವಿಲ್ಲ, ಅದಕ್ಕೇ ಅವರ ವೋಟುಗಳನ್ನು ತೆಗೆದಿದ್ದಾರೆ” ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ...

‘ಮತದಾನದ ಹಕ್ಕು ಉಳಿದರೆ ಮಾತ್ರ ದೇಶ ಉಳಿಯುತ್ತದೆ’: ಬೆಂಗಳೂರಿನಲ್ಲಿ SIR ವಿರುದ್ಧ ಅಭಿಜಿತ್ ದೀಪ್ಕೆ ವಾಗ್ದಾಳಿ

ಬೆಂಗಳೂರು: “ದೇಶ ಉಳಿಯುವುದು ವೋಟ್ ಉಳಿದರೆ ಮಾತ್ರ. ಮತ ಹೋದರೆ ಎಲ್ಲವನ್ನೂ ಮರೆತಂತೆ ಆಗುತ್ತದೆ. ನಮ್ಮ ಹೋರಾಟ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗಷ್ಟೇ ಅಲ್ಲ, SIR ಪ್ರಕ್ರಿಯೆಯನ್ನೇ ರದ್ದುಪಡಿಸುವವರೆಗೆ ಹೋರಾಟ ಮುಂದುವರಿಯಲಿದೆ” ಎಂದು...

ಎಸ್ಐಆರ್ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ‘ಜನತಾ ನ್ಯಾಯಾಲಯ’ ಸಮಾವೇಶಕ್ಕೆ ಚಾಲನೆ 

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಕ್ಟೋಬರ್ 8ರಂದು ಬೃಹತ್ ಪ್ರತಿಭಟನೆ ಹಾಗೂ ‘ಜನತಾ ನ್ಯಾಯಾಲಯ’ ಸಮಾವೇಶ ನಡೆಯಿತು. ಚುನಾವಣಾ ಆಯೋಗದ ಮುಖ್ಯ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ ಹೋರಾಟ ನಿಲ್ಲದು: ಸಿಇಸಿ ವಿರುದ್ಧ ದೀರ್ಘ ಆಂದೋಲನದ ಎಚ್ಚರಿಕೆ; ಅ.10ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ವಿದ್ಯಾರ್ಥಿ ಸಂಘಟನೆಗಳು ಹಾಗೂ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಘೋಷಿಸಿವೆ. ಚುನಾವಣಾ ವ್ಯವಸ್ಥೆಯಲ್ಲಿ ಸಮಗ್ರ ಬದಲಾವಣೆ...

ರಾಹುಲ್ ಗಾಂಧಿ ಚಿಕನ್ ರೋಲ್ ತಿಂದರೂ ಕಷ್ಟ ಈ ಬಲಪಂಥೀಯರಿಗೆ

ಹಿಂದೊಮ್ಮೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೀನು ತಿಂದು ಧರ್ಮಸ್ಥಳದ ದೇವಸ್ಥಾನ ಪ್ರವೇಶ ಮಾಡಿದ್ದರು ಎಂಬುದನ್ನು ವಿವಾದವಾಗಿ ಮಾಡಿದ್ದ ಇದೇ ಬಲಪಂಥೀಯರು, ಗೋದಿ ಮೀಡಿಯಾಗಳು, ಈಗ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ  ಚಿಕನ್ ರೋಲ್...