Homeಮುಖಪುಟಸಿಂಘು ಗಡಿಯಲ್ಲಿ ಬಂಧನವಾಗಿದ್ದ ಕಾರ್ಮಿಕ ಹೋರಾಟಗಾರ ಶಿವಕುಮಾರ್‌ಗೆ ಜಾಮೀನು

ಸಿಂಘು ಗಡಿಯಲ್ಲಿ ಬಂಧನವಾಗಿದ್ದ ಕಾರ್ಮಿಕ ಹೋರಾಟಗಾರ ಶಿವಕುಮಾರ್‌ಗೆ ಜಾಮೀನು

ಎಫ್‌ಐಆರ್‌ಗಳಲ್ಲಿ ಶಿವ ಕುಮಾರ್‌ ಹೆಸರಿಲ್ಲದಿದ್ದರೂ ಸಹ ನೊದೀಪ್ ಕೌರ್‌ ಬಂಧಿಸಿದ ನಾಲ್ಕು ದಿನಗಳ ನಂತರ ಪೊಲೀಸರು ಕುಂಡ್ಲಿಯ ಪಕ್ಕದ ಸಿಂಘು ಗಡಿಯಿಂದ ಶಿವಕುಮಾರ್‌ರವರನ್ನು ಸಹ ಬಂಧಿಸಿದ್ದರು.

- Advertisement -
- Advertisement -

ಜನವರಿ 16 ರಂದು ದೆಹಲಿಯ ಸಿಂಘು ಗಡಿಯ ರೈತರ ಪ್ರತಿಭಟನಾ ಸ್ಥಳದಿಂದ ಬಂಧಿಸಲ್ಪಟ್ಟ 24 ವರ್ಷದ ದಲಿತ ಕಾರ್ಮಿಕ ಸಂಘಟಕರಾದ ಶಿವಕುಮಾರ್ ಅವರಿಗೆ ಸೋನಿಪತ್ ನ್ಯಾಯಾಲಯವು ಜಾಮೀನು ನೀಡಿದೆ.

ಶಿವಕುಮಾರ್‌ರವರ ಸಹ ಕಾರ್ಯಕರ್ತೆ ದಲಿತ ನೊದೀಪ್ ಕೌರ್ (25) ಅವರನ್ನು ಬಂಧಿಸಿದಾಗ ಎಫ್‌ಐಆರ್‌ನಲ್ಲಿ ಶಿವಕುಮಾರ್‌ರವರನ್ನು ಹೆಸರಿಸಿಲ್ಲ. ಆದರೆ ನೊದೀಪ್ ಕೌರ್ ಬಂಧನದ ನಂತರ ಅವರ ಮೇಲೆ ಜನವರಿ 12 ರಂದು ಎಫ್ಐಆರ್ ಸಲ್ಲಿಸಿದ್ದು, ಕೊಲೆ ಯತ್ನ ಮತ್ತು ಸುಲಿಗೆ ಸೇರಿದಂತೆ 11 ಅಪರಾಧಗಳನ್ನು ಪಟ್ಟಿ ಮಾಡಲಾಗಿದೆ.

ಭೂಹೀನ ದಲಿತ ಕೃಷಿ ಕೆಲಸಗಾರ ಮತ್ತು ಅರೆಕಾಲಿಕ ಭದ್ರತಾ ಸಿಬ್ಬಂದಿಯ ಮಗ ಶಿವಕುಮಾರ್ ಅವರು 2016 ರಲ್ಲಿ ಸೋನಿಪತ್‌ನಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ-ಉಪಕರಣಗಳನ್ನು ನಿರ್ವಹಿಸುವ ತರಬೇತಿಯಲ್ಲಿ ಪದವಿ ಪಡೆದರು. ಕುಂಡ್ಲಿಯಲ್ಲಿ ಎಲ್‌ಇಡಿ ದೀಪಗಳು ಮತ್ತು ವಾಹನ ಭಾಗಗಳನ್ನು ತಯಾರಿಸುವ ಕಾರ್ಖಾನೆಗಳಲ್ಲಿ ಎರಡು ವರ್ಷ ಕೆಲಸ ಮಾಡಿದರು. 2018 ರಲ್ಲಿ ಮಜ್ದೂರ್ ಅಧಿಕಾರ ಸಂಘಟನ್ (ಎಂಎಎಸ್) ಸೇರಿದರು.

ಇದನ್ನೂ ಓದಿ: ದಲಿತ ಕಾರ್ಮಿಕ ಮುಖಂಡ ಶಿವಕುಮಾರ್‌ಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ: ವೈದ್ಯರ ವರದಿ

ರೈತ ಪ್ರತಿಭಟನೆಯನ್ನು ಬೆಂಬಲಿಸಿ ಕುಂಡ್ಲಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯ ಕಾರ್ಮಿಕರ ಗುಂಪಿನೊಂದಿಗೆ ನೊದೀಪ್ ಕೌರ್ ಸಿಂಘು ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಅವರು, ಕಾರ್ಮಿಕರು ಸಹ ರೈತರಂತೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾರ್ಮಿಕರು ಕಾರ್ಖಾನೆಯ ಮಾಲಿಕರಿಂದ ಶೋಷಣೆಗೆ ಒಳಗಾಗಿದ್ದಾರೆ, ಅವರ ವೇತನವನ್ನು ತಡೆಹಿಡಿಯಲಾಗಿದೆ ಮತ್ತು ಅವರನ್ನು ಉದ್ಯೋಗಗಳಿಂದ ಕಿತ್ತು ಎಸೆಯಲಾಗಿದೆ ಎಂದು ಆರೋಪಿಸಿದ್ದರು. ಆ ನಂತರ ಅವರನ್ನು ಬಂಧಿಸಲಾಗಿತ್ತು.

ಎಫ್‌ಐಆರ್‌ಗಳಲ್ಲಿ ಶಿವ ಕುಮಾರ್‌ ಹೆಸರಿಲ್ಲದಿದ್ದರೂ ಸಹ ನೊದೀಪ್ ಕೌರ್‌ ಬಂಧಿಸಿದ ನಾಲ್ಕು ದಿನಗಳ ನಂತರ ಪೊಲೀಸರು ಕುಂಡ್ಲಿಯ ಪಕ್ಕದ ಸಿಂಘು ಗಡಿಯಿಂದ ಶಿವಕುಮಾರ್‌ರವರನ್ನು ಸಹ ಬಂಧಿಸಿದ್ದರು.


ಇದನ್ನೂ ಓದಿ: ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...