Homeಚಳವಳಿಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ?: ಇಂದಿನಿಂದ ರಾಜ್ಯದಲ್ಲಿ ಆಂದೋಲನ

ಸ್ವಾಮಿನಾಥನ್ ವರದಿ ಪ್ರಕಾರ ರೈತರಿಗೆ ಒಂದೂವರೆ ಪಟ್ಟು ಬೆಲೆ ಸಿಗಬೇಕು. ಆದರೆ, ಒಂದೂವರೆ ಪಟ್ಟು ಇರಲಿ, ಎಂಎಸ್‌ಪಿ ಸಹ ಸಿಗುತ್ತಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನಗಳನ್ನು ರದ್ದುಗೊಳಿಸಬೇಕೆಂದು ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ದೇಶದ ರೈತರ ಗಮನ ಸೆಳೆದಿದ್ದಾರೆ. ಪ್ರಧಾನಿಗಳು ಸಂಸತ್ತಿನಲ್ಲಿ ಮಾತನಾಡುತ್ತ ಎಂಎಸ್‌ಪಿ ಹಿಂದೆಯೂ ಇತ್ತು, ಈಗಲೂ ಇದೆ ಮತ್ತು ಮುಂದೆಯೂ ಇರಲಿದೆ ಎಂದು ಘೋಷಿಸಿದ್ದರು. ಆದರೆ ರೈತ ಹೋರಾಟಗಾರರು ಆ ಹೇಳಿಕೆ ಸುಳ್ಳು ಎಂದು ಆಕ್ರೋಶಪಡಿಸಿ, ಪ್ರಧಾನಿಗಳೇ ಎಂಎಸ್‌ಪಿ ಎಲ್ಲಿದೆ ತೋರಿಸಿ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ರಾಜ್ಯದಲ್ಲಿಯೂ ಈಗ ಬೆಂಬಲ ಬೆಲೆ ಕೊಡಿಸಿ ಆಂದೋಲನ ಆರಂಭವಾಗಿದ್ದು, ಸ್ವರಾಜ್ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್ ಚಾಲನೆ ನೀಡಿದ್ದಾರೆ.

ರಾಜ್ಯದಲ್ಲಿ ಬೆಳೆಯಲಾಗುವ ಬೆಳೆಗಳಲ್ಲಿ ಯಾವ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಇದೆ. ಯಾವುದಕ್ಕೆ ಎಷ್ಟು ಎಂಎಸ್‌ಪಿ ಸಿಗುತ್ತಿದೆ ಎಂಬ ಮಾಹಿತಿಯೇ ಅನೇಕ ರೈತರಿಗೆ ಇಲ್ಲ. ಕೃಷಿ ಕಾನೂನುಗಳ ವಿರುದ್ಧದ ಹೋರಾಟದ ಜೊತೆಗೆ ಎಂಎಸ್‌ಪಿ ಬಗ್ಗೆ ತೀವ್ರ ಚರ್ಚೆಯನ್ನು ಹುಟ್ಟು ಹಾಕಿರುವುದು ಈ ರೈತ ಹೋರಾಟವೇ. ಇದರಿಂದ ರಾಜ್ಯದಲ್ಲಿ ಎಂಎಸ್‌ಪಿ ಬಗ್ಗೆ ಚರ್ಚೆ ನಡೆಯುತ್ತಿದೆ.

ರಾಜ್ಯದಲ್ಲಿ ಮೂರು ದಿನಗಳ ಕಾಲ ಮಾರ್ಚ್ 5 ರಿಂದ 7ರ ವರೆಗೆ ’ಬೆಂಬಲ ಬೆಲೆ ಕೊಡಿಸಿ’ ಆಂದೋಲನ ನಡೆಯಲಿದೆ. ಗುಲ್ಬರ್ಗಾದಲ್ಲಿ ಮಾರ್ಚ್ 5, ಬಳ್ಳಾರಿ ಮಾರ್ಚ್ 6, ಶಿವಮೊಗ್ಗ, ಸಾಗರದಲ್ಲಿ ಮಾರ್ಚ್7 ಆಂದೋಲನ ನಡೆಯುತ್ತಿದ್ದು, ಅಂದೇ ಬೆಂಗಳೂರಿನಲ್ಲಿ ಈ ಆಂದೋಲನದ ಪತ್ರಿಕಾಗೋಷ್ಠಿ ನಡೆಯಲಿದೆ.

ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಮಾರ್ಚ್ 2 ರಂದು ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ರೈತ ಮುಖಂಡರು ಮಾಹಿತಿ ನೀಡಿದ್ದರು. ಕರ್ನಾಟಕದ ರೈತರು ಎಂಎಸ್‌ಪಿಗಿಂತ ಕನಿಷ್ಠ ಒಂದು ಸಾವಿರ ಕಡಿಮೆ ಬೆಲೆ ಪಡೆಯುತ್ತಿದ್ದಾರೆ. ಹೀಗಾಗಿ ಮಾರ್ಚ್ 5 ರಿಂದ ಕರ್ನಾಟಕದಲ್ಲಿ ‘ಎಂಎಸ್‌ಪಿ ದಿಲಾವ್’ ಆಂದೋಲನವನ್ನು ಪ್ರಾರಂಭಿಸಲಾಗುವುದು.  ಬೆಳೆಗಳಿಗೆ ಎಂಎಸ್‌ಪಿ ಖಾತ್ರಿಪಡಿಸಿಕೊಡುವಂತೆ ಪ್ರಧಾನಮಂತ್ರಿ ಅವರನ್ನು ಒತ್ತಾಯಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಯೋಗೇಂದ್ರ ಯಾದವ್ ತಿಳಿಸಿದ್ದರು.

ಇಡೀ ದೇಶದ ರೈತ ಚಳವಳಿಗಳು ರೈತರ ಬೆಳೆಗೆ ವೈಜ್ಞಾನಿಕವಾಗಿ ಬೆಲೆ ನಿಗದಿ ಮಾಡಿ, ನಮ್ಮ ದುಡಿಮೆಗೆ ನ್ಯಾಯಯುತ ಫಲ ಸಿಗುವಂತೆ ಮಾಡಿ, ರೈತರ ಬೆಳೆಗೆ ನ್ಯಾಯಯುತ ಬೆಲೆ ಬೇಕು ಎಂದು ಆಗ್ರಹಿಸುತ್ತಾ ಬಂದಿದ್ದಾರೆ. ದೆಹಲಿ ಮತ್ತು ದೇಶದಾದ್ಯಂತ ಇಂದು ನಡೆಯುತ್ತಿರುವ ಹೋರಾಟದ ಪ್ರಮುಖ ಹಕ್ಕೊತ್ತಾಯಗಳಲ್ಲಿ ಅದೂ ಒಂದಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್, ಬಿಜ್ನೋರ್‌ ಗಳಲ್ಲಿ ಬೃಹತ್ ಮಹಾಪಂಚಾಯತ್: ಸರ್ಕಾರದ ವಿರುದ್ಧ ರೈತರ ಗುಡುಗು

ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಟ ಬೆಂಬಲ ಬೆಲೆ ನಿಗದಿ ಮಾಡಿ ಅದನ್ನು ಕಾಯ್ದೆ ಮಾಡಬೇಕು. ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ವ್ಯಾಪಾರ ಮಾಡುವುದು ಅಪರಾಧ ಎಂದು ಘೋಷಿಸಿ, ಕನಿಷ್ಟ ಆ ದರವನ್ನು ಎಲ್ಲಾ ವ್ಯಾಪಾರಿಗಳೂ ಕೊಡಲೇಬೇಕು ಎಂಬ ಕಾನೂನು ಮಾಡಬೇಕು. ಖಾಸಗಿ ವ್ಯಾಪಾರಿಗಳು ಕೊಡದಿದ್ದರೆ ಸರ್ಕಾರ ಮುಂದೆ ನಿಂತು ರೈತರ ಬೆಳೆ ಖರೀದಿಸಿ, ಮಾರುಕಟೆ ಗೆ ವಿತರಿಸಬೇಕು. ವಾಸ್ತವದಲ್ಲಿ ಸ್ವಾಮಿನಾಥನ್ ವರದಿ ಆಧರಿಸಿ ರೈತರ ಎಲ್ಲಾ ಬೆಳೆಗಳಿಗೂ ಬೆಲೆ ನಿಗದಿ ಮಾಡಿ ಎಂದು ಕೇಳುತ್ತಿದ್ದೇವೆ ಎಂದು ರೈತ ಸಂಘಟನೆ ಹೇಳಿದೆ.

ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಎಲ್ಲಾ ರಾಜಕೀಯ ಪಕ್ಷಗಳೂ ಚುನಾವಣೆ ಸಂದರ್ಭದಲ್ಲಿ ಹೇಳಿದರೂ ಅಧಿಕಾರಕ್ಕೆ ಬಂದ ಕೂಡಲೇ ಹೇಳೇ ಇಲ್ಲವೇನೋ ಎಂಬಂತೆ ಮುಖ ತಿರುಗಿಸುತ್ತಿದ್ದಾರೆ. ಸ್ವಾಮಿನಾಥನ್ ವರದಿ ಪ್ರಕಾರ ರೈತರಿಗೆ ಒಂದೂವರೆ ಪಟ್ಟು ಬೆಲೆ ಸಿಗಬೇಕು. ಆದರೆ, ಒಂದೂವರೆ ಪಟ್ಟು ಇರಲಿ, ಇವರು ಒಪ್ಪಿರುವ ಕನಿಷ್ಟ ಬೆಂಬಲ ಬೆಲೆಯನ್ನೂ ರೈತರಿಗೆ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಹೋರಾಟ ನಡೆಸುತ್ತಿರುವ ರೈತರು ಸೃಷ್ಟಿಸಿರುವ ಒತ್ತಡದ ಪರಿಣಾಮವಾಗಿ ಪ್ರಧಾನಿಗಳು ಕೊನೆಗೂ ಎಂಎಸ್‌ಪಿ ಬಗ್ಗೆ ಮಾತನಾಡಿದ್ದಾರೆ. ಆದರೆ, ಎಂಎಸ್‌ಪಿ ಥಾ, ಹೈ, ರಹೇಗಾ ಎಂದಿದ್ದಾರೆ. ಅಂದರೆ ಕನಿಷ್ಟ ಬೆಂಬಲ ಬೆಲೆ ಇತ್ತು, ಇದೆ, ಇರುತ್ತೆ ಎಂದು ಅರ್ಥ. ಪ್ರಧಾನಿಯವರ ಈ ಮಾತಿಗೆ ಪ್ರತಿಕ್ರಿಯೆಯಾಗಿ, 400 ಕ್ಕೂ ಹೆಚ್ಚು ರೈತ ಸಂಘಟನೆಗಳನ್ನು ಒಳಗೊಂಡಿರುವ ಸಂಯುಕ್ತ ಕಿಸಾನ ಮೋರ್ಚಾ ಎಂಎಸ್‌ಪಿ ಕೊಡಿಸಿ ಆಂದೋಲನ ಪ್ರಾರಂಭಿಸಿದೆ. ಈ ಆಂದೋಲನ ಕರ್ನಾಟಕದಿಂದ ಆರಂಭವಾಗಲಿದೆ ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...