Homeಕರ್ನಾಟಕಕನ್ನಡದ ಹಿರಿಯ ಕವಿ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ (84) ನಿಧನ

ಕನ್ನಡದ ಹಿರಿಯ ಕವಿ ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ (84) ನಿಧನ

- Advertisement -
- Advertisement -

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡದ ಹಿರಿಯ ಸಾಹಿತಿ, ಕವಿ ಡಾ. ನೈಲಾಡಿ ಶಿವರಾಮ ಲಕ್ಷ್ಮೀನಾರಾಯಣ ಭಟ್ಟ (84) ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ.

ಬೆಂಗಳೂರಿನ ಬನಶಂಕರಿಯ ಅವರ ಮನೆಯಲ್ಲಿ ಬೆಳಿಗ್ಗೆ 10.30 ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 11 ಗಂಟೆಗೆ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಲಕ್ಷ್ಮೀನಾಯಾಯಣ ಅವರು, ಕನ್ನಡ ಸಾಹಿತ್ಯ ಲೋಕದಲ್ಲಿ, ‘ಎನ್ನೆಸ್ಸೆಲ್’ ಎಂದೇ ಜನಪ್ರಿಯರಾಗಿದ್ದಾರೆ. ಅವರು ’ಭಾವಗೀತೆ ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ, ಮುಂತಾದ ಹಲವರು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿದ್ದಾರೆ. ಅವರು ಕನ್ನಡ-ಸಂಸ್ಕೃತ-ಇಂಗ್ಲೀಷ್ ಭಾಷೆಗಳಲ್ಲಿ ಕೂಡಾ ಕೃತಿರಚನೆ ಮಾಡಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಫೆ. 26 ರಿಂದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

1936 ಅಕ್ಟೋಬರ್‌ 29 ರಂದು ಶಿವಮೊಗ್ಗೆಯಲ್ಲಿ ಹುಟ್ಟಿದ ಅವರು, ಶಿವಮೊಗ್ಗದಲ್ಲಿ ಇಂಟರ್ ಮೀಡಿಯೆಟ್ ಮುಗಿಸಿ, ಕನ್ನಡ ಎಂ.ಎ. ಆನರ್ಸ್ ಪದವಿ ಮೈಸೂರಿನ ಮಹಾರಾಜ ಕಾಲೇಜ್‌ನಲ್ಲಿ ಗಳಿಸಿದರು. 1965 ರಲ್ಲಿ ಬೆಂಗಳೂರು ವಿಶ್ವವಿಧ್ಯಾಲಯವನ್ನು ಸೇರಿ, ಅಧ್ಯಾಪಕ, ರೀಡರ್, ಪ್ರಾಧ್ಯಾಪಕ, ನಿರ್ದೇಶಕ ಮತ್ತು 1990 ರಲ್ಲಿ ಆರ್ಟ್ ಫ್ಯಾಕಲ್ಟಿ ಡೀನ್ ಆದರು. ಮೈಸೂರು ವಿಶ್ವವಿದ್ಯಾನಿಲಯದ ಪಿಎಚ್ಡಿ ಪದವಿಗೆ ’ಆಧುನಿಕ ಕನ್ನಡ ಕಾವ್ಯ’ ಕುರಿತು ಪ್ರಬಂಧ ಸಾದರಪಡಿಸಿದರು.

ಜಗನ್ನಾಥ ವಿಜಯ, ಮುದ್ರಾಮಂಜೂಷ ಕಾವ್ಯಗಳನ್ನು ರಚಿಸಿದ್ದಾರೆ. ಅವರ ಕಾರ್ಯವನ್ನು ಗುರುತಿಸಿ, ’ಎನ್.ಸಿ.ಆರ್.ಟಿ’ ಸಂಸ್ಥೆಯಿಂದ ಶಿಶು ಸಾಹಿತ್ಯಕ್ಕಾಗಿ ’ಬಾಲಸಾಹಿತ್ಯ ಪುರಸ್ಕಾರ’ ಲಭಿಸಿದೆ. ‘ಯೇಟ್ಸ್’, ’ಶೇಕ್ಸ್ ಪಿಯರ್’, ’ಎಲಿಯಟ್’ ಕವಿಗಳ ತಮ್ಮ ಕೃತಿಗಳಿಗಾಗಿ ಮೂರುಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. 1990 ರಲ್ಲಿ ತಮ್ಮ ಸಮಗ್ರ ಸಾಹಿತ್ಯಕ್ಕೆ ’ಶಿವರಾಮಕಾರಂತ ಪ್ರಶಸ್ತಿ’ಯನ್ನು ಪಡೆದಿದ್ದಾರೆ. ’ರಾಜ್ಯೋತ್ಸವ ಪ್ರಶಸ್ತಿ’, ’ಮಾಸ್ತಿಪ್ರಶಸ್ತಿ’, ವರ್ಧಮಾನ ಪ್ರಶಸ್ತಿ’ಗಳಂತ ಹಲವು ಪ್ರಶಸ್ತಿಗಳು ಅವರಿಗೆ ಸಂದಿದೆ.

ಇದನ್ನೂ ಓದಿ: ‘ಸಣ್ಣ ಪಿಕಾ-ಒಂದುವರೆ ರುಪಾಯಿ’ – ಅಧೀರ್ ಬಿಸ್ವಾಸ್ ಅವರ ನಿರಾಶ್ರಿತ ಆತ್ಮಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...