Homeಮುಖಪುಟ'ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ': ಯೋಗಿ ಆದಿತ್ಯನಾಥ್!

‘ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ’: ಯೋಗಿ ಆದಿತ್ಯನಾಥ್!

"ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು" ಎಂದು ಅವರು ಎಚ್ಚರಿಸಿದ್ದಾರೆ.

- Advertisement -
- Advertisement -

ಜಾಗತಿಕ ವೇದಿಕೆಯಲ್ಲಿ ಭಾರತದ ಸಂಪ್ರದಾಯಕ್ಕೆ ಮಾನ್ಯತೆ ಪಡೆಯಲು ಜಾತ್ಯತೀತತೆಯು ದೊಡ್ಡ ಬೆದರಿಕೆಯಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಹೇಳಿದ್ದಾರೆ.

“ತಮ್ಮ ಲಾಭಕ್ಕಾಗಿ ಜನರನ್ನು ದಾರಿ ತಪ್ಪಿಸುವ ಮತ್ತು ದೇಶಕ್ಕೆ ದ್ರೋಹ ಮಾಡುವವರನ್ನು ಸುಮ್ಮನೆ ಬಿಡಲಾಗದು” ಎಂದು ಅವರು ಎಚ್ಚರಿಸಿದ್ದಾರೆ. ಕ್ಷುಲ್ಲಕ, ಸಣ್ಣ ಕೋಮು ವಿವಾದಗಳಲ್ಲಿ ಸಿಲುಕುವ ಮೂಲಕ ರಾಷ್ಟ್ರದ ಸಾಮರಸ್ಯ ಮನೋಭಾವವನ್ನು ಕಳೆದುಕೊಳ್ಳದಂತೆ ಅವರು ಜನರನ್ನು ಕೋರಿದರು. ಅಲ್ಪ ಮೊತ್ತದ ಹಣಕ್ಕಾಗಿ ಭಾರತದ ಬಗ್ಗೆ ಸುಳ್ಳು ಪ್ರಚಾರವನ್ನು ಮಾಡುತ್ತಿರುವ ಜನರು ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದರು.

ಅಯೋಧ್ಯ ಸಂಶೋಧನಾ ಸಂಸ್ಥೆ ಸಿದ್ಧಪಡಿಸಿದ ಇ-ಪುಸ್ತಕವಾದ ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯ ಬಿಡುಗಡೆ ಸಂದರ್ಭದಲ್ಲಿ ಮಾತನಾಡುತ್ತಾ, “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವು ರಾಮಾಯಣದ ಗ್ಲೋಬಲ್ ಎನ್‌ಸೈಕ್ಲೋಪೀಡಿಯಾವನ್ನು ಹೆಚ್ಚು ವಿಶೇಷಗೊಳಿಸಿದೆ” ಎಂದು ಅವರು ಹೇಳಿದರು.

ಕಾಂಬೋಡಿಯಾ ಭೇಟಿಯ ಸಮಯದಲ್ಲಿ ಅಂಕೋರ್ ವಾಟ್ ದೇವಸ್ಥಾನದಲ್ಲಿ ದೊರೆತ ಬೌದ್ಧ ಮಾರ್ಗದರ್ಶಿಯೊಬ್ಬರ ಕಥೆಯನ್ನು ವಿವರಿಸಿದ ಆದಿತ್ಯನಾಥ್, ಹಿಂದೂ ಸಂಸ್ಕೃತಿಯನ್ನು ಪ್ರಶ್ನಿಸುವವರ ಮೇಲೆ ವಾಗ್ದಾಳಿ ನಡೆಸಿದರು. “ದೇವಾಲಯದ ಗೈಡ್ ಬೌದ್ಧನಾಗಿದ್ದ, ಆತ ಬೌದ್ಧಧರ್ಮ ಹಿಂದೂ ಧರ್ಮದಿಂದ ಹುಟ್ಟಿಕೊಂಡಿದೆ ಎಂದು ಒಪ್ಪಿಕೊಳ್ಳುವಷ್ಟು ವಿಶ್ವಾಸವಿದೆ ಎಂದು ಹೇಳಿದ” ಎಂದು ಯೋಗಿ ತಿಳಿಸಿದರು.

“ರಾಮಾಯಣ ಮತ್ತು ಮಹಾಭಾರತದ ಕಥೆಗಳು ನಮಗೆ ಉತ್ತಮವಾದ ಜೀವನದ ಪಾಠಗಳನ್ನು ಹೇಳಿಕೊಡುವುದಲ್ಲದೆ, ಭಾರತೀಯ ಗಡಿಗಳ ವಿಸ್ತರಣೆಯ ಬಗ್ಗೆಯೂ ಸಾಕಷ್ಟು ಹೇಳುತ್ತವೆ. ನಮ್ಮ ಮಹಾಕಾವ್ಯ, ಹಿಂದೂ ಸಾಹಿತ್ಯದ ಈ ಕಥೆಗಳು ಉತ್ತಮ ಭಾರತವನ್ನು ರೂಪಿಸಲು ನಮಗೆ ಸಹಾಯ ಮಾಡುತ್ತವೆ. 1947 ಕ್ಕಿಂತ ಮೊದಲು ಪಾಕಿಸ್ತಾನವು ಭಾರತದ ಒಂದು ಭಾಗವಾಗಿತ್ತು ಮತ್ತು ಮರ್ಯಾದಾ ಪುರುಷೋತ್ತಮ ಭಗವಾನ್ ಶ್ರೀ ರಾಮ ತಮ್ಮ ಸಹೋದರನ ಮಗನನ್ನು ಪಾಕಿಸ್ತಾನದ ಆಡಳಿತಗಾರರನ್ನಾಗಿ ಮಾಡುವ ಮೂಲಕ ಭಾರತದ ಗಡಿಯನ್ನು ವಿಸ್ತರಿಸಿದ್ದರು” ಎಂದು ಅವರು ಹೇಳಿದರು. ಅಯೋಧ್ಯೆಯಲ್ಲಿ ಶ್ರೀರಾಮನ ಅಸ್ತಿತ್ವದ ಬಗ್ಗೆ ಇನ್ನೂ ಕೆಲವು ಜನರು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ. ಆದರೆ ಐತಿಹಾಸಿಕ ಸಂಗತಿಗಳನ್ನು ನಿರಾಕರಿಸಲಾಗುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ‘ಖೇಲಾ ಹೋಬೆ’ಗೆ ‘ಖೇಲ್ ಖತಂ’ ಎಂದ ಪ್ರಧಾನಿ: ‘ಉಜ್ವಲಾ-ಜುಮ್ಲಾ’ ಎಂದು ದಾಳಿ ಮಾಡಿದ ದೀದಿ

ರಾಮಾಯಣ, ರಾಮ ಮತ್ತು ಭಾರತದ ಬಗ್ಗೆ ಪೂಜ್ಯ ಭಾವನೆ ಇರುವ ಜನರು ವಿಶ್ವಕೋಶದ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಮುಖ್ಯಮಂತ್ರಿ ಆಗ್ರಹಿಸಿದರು. ವಿಜ್ಞಾನ ಮತ್ತು ಆಧ್ಯಾತ್ಮಿಕತೆಯ ಕುರಿತು ಗೊತ್ತಿರದ ಅಂಶಗಳನ್ನು ಪರಿಚಯಿಸುವ ಕಾರಣ ವಿಶ್ವಕೋಶವು ಜನರನ್ನು ಅಯೋಧ್ಯೆಗೆ ಭೇಟಿ ನೀಡಲು ಪ್ರೇರೇಪಿಸುತ್ತದೆ ಎಂದು ಅವರು ಹೇಳಿದರು.

ಸಪ್ತ ಪುರಿಯ ಏಳು ಪವಿತ್ರ ನಗರಗಳಿವೆ. ಇವುಗಳನ್ನು ಪವಿತ್ರ ಹಿಂದೂ ತೀರ್ಥಗಳೆಂದು ಪರಿಗಣಿಸಲಾಗಿದೆ. ಇವುಗಳಲ್ಲಿ ಅಯೋಧ್ಯೆ, ಮಥುರಾ ಮತ್ತು ಕಾಶಿ ಉತ್ತರ ಪ್ರದೇಶದ ವ್ಯಾಪ್ತಿಯಲ್ಲಿವೆ. ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಸಂಸ್ಕೃತಿ ಇಲಾಖೆಯಿಂದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂಬುದು ನಮಗೆ ಹೆಮ್ಮೆಯ ವಿಷಯ. ರಾಮ್‌ಲೀಲಾವನ್ನು ಪ್ರಪಂಚದಾದ್ಯಂತ ಪ್ರದರ್ಶಿಸಲು ನಾವು ಪ್ರಯತ್ನಿಸುತ್ತೇವೆ.

ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯನ್ನು ಇಂಗ್ಲಿಷ್ ಭಾಷೆಯಲ್ಲಿ ಬಿಡುಗಡೆ ಮಾಡಲಾಗಿದ್ದು, ಇದನ್ನು ಖರಗ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿನ್ಯಾಸಗೊಳಿಸಿದೆ. ಹಿಂದಿ ಮತ್ತು ತಮಿಳು ಭಾಷೆಗಳಲ್ಲಿ ಮೊದಲ ಆವೃತ್ತಿ ಮುಂಬರುವ ತಿಂಗಳಲ್ಲಿ ಪ್ರಕಟವಾಗಲಿದೆ. ರಾಮಾಯಣ ವಿಶ್ವಕೋಶವನ್ನು 200 ಕ್ಕೂ ಹೆಚ್ಚು ಸಂಪುಟಗಳಲ್ಲಿ ಪ್ರಕಟಿಸುವ ಯೋಜನೆ ಇದೆ ಎಂದು ರಾಜ್ಯ ಮಾಹಿತಿ ವಿಭಾಗದ ನಿರ್ದೇಶಕ ಶಿಶಿರ್ ಸಿಂಗ್ ಹೇಳಿದ್ದಾರೆ. ಇದಕ್ಕಾಗಿ ಅಯೋಧ್ಯ ಸಂಶೋಧನಾ ಸಂಸ್ಥೆ ದೇಶ ಮತ್ತು ವಿಶ್ವದಾದ್ಯಂತ ಸಂಪಾದಕರು ಮತ್ತು ಸಲಹೆಗಾರರ ಮಂಡಳಿಯನ್ನು ಸ್ಥಾಪಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗ್ಲೋಬಲ್ ರಾಮಾಯಣ ಎನ್‌ಸೈಕ್ಲೋಪೀಡಿಯಾದ ಮೊದಲ ಆವೃತ್ತಿಯೊಂದಿಗೆ ರಾಮಾಯಣದ ಪ್ರಕಟಣೆಯನ್ನು ಒಡಿಯಾ, ಮಲಯಾಳಂ, ಉರ್ದು ಮತ್ತು ಅಸ್ಸಾಮಿ ಭಾಷೆಗಳಲ್ಲಿಯೂ ಬಿಡುಗಡೆ ಮಾಡಲಾಗುತ್ತಿದೆ.

ಉತ್ತರ ಪ್ರದೇಶದ ಸಂಸ್ಕೃತಿ ಇಲಾಖೆ, ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ, ವಿಶ್ವದ ಹಲವಾರು ದೇಶಗಳಿಂದ ರಾಮಾಯಣದ ಸ್ಪಷ್ಟವಾದ ಮತ್ತು ಅಸ್ಪಷ್ಟ ಪರಂಪರೆಯನ್ನು ಒಟ್ಟುಗೂಡಿಸುವ ಮೂಲಕ ಈ ಮೆಗಾ ಯೋಜನೆಯಲ್ಲಿ ತೊಡಗಿಸಿಕೊಂಡಿದೆ.


ಇದನ್ನೂ ಓದಿ: ಇಂದು ಬಂಗಾಳಕ್ಕೆ ಸರ್ಕಾರ ಹೋಗಿದೆ, ಮಾರ್ಚ್ 13ಕ್ಕೆ ನಾವು ಹೋಗುತ್ತೇವೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Sir nange Ramayana Mahabharata bekagilla moodanambikeyannu naanu oppalare ekendare idu vygnanika Yuga illi moodanabikege Jaga illa Indian Constitution idre saaku ee Ramayana Mahabharata bekagilla jai bheem

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...