Homeಮುಖಪುಟದಾದ್ರ & ನಗರ ಹವೇಲಿ ಸಂಸದನ ಅಸಹಜ ಸಾವು: ತನಿಖೆಗೆ SIT ರಚಿಸಿದ ಮಹಾರಾಷ್ಟ್ರ ಸರ್ಕಾರ‌‌

ದಾದ್ರ & ನಗರ ಹವೇಲಿ ಸಂಸದನ ಅಸಹಜ ಸಾವು: ತನಿಖೆಗೆ SIT ರಚಿಸಿದ ಮಹಾರಾಷ್ಟ್ರ ಸರ್ಕಾರ‌‌

ಮೆರಿನ್ ಡ್ರೈವ್ ಪೊಲೀಸರು ಮಂಗಳವಾರ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಮತ್ತು ಇತರ ಆರು ಜನರ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣವನ್ನು ದಾಖಲಿಸಿದ್ದಾರೆ.

- Advertisement -
- Advertisement -

ಮುಂಬೈನ ದಾದ್ರಾ ಮತ್ತು ನಗರ ಹವೇಲಿಯ ಸಂಸದ ಮೋಹನ್ ಡೆಲ್ಕರ್ ಅವರ ಮರಣದ ಎರಡು ವಾರಗಳ ನಂತರ, ಮೆರಿನ್ ಡ್ರೈವ್ ಪೊಲೀಸರು ಮಂಗಳವಾರ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಮತ್ತು ಇತರ ಆರು ಜನರ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣವನ್ನು ದಾಖಲಿಸಿದ್ದಾರೆ.

ಫೆಬ್ರವರಿ 22 ರಂದು ಮೆರಿನ್ ಡ್ರೈವ್‌ನ ಹೋಟೆಲ್ ಸೀ ಗ್ರೀನ್ ಸೌತ್‌‌‌ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಡೆಲ್ಕರ್ ಪತ್ತೆಯಾಗಿದ್ದರು.

ಅವರು 15 ಪುಟಗಳಷ್ಟು ಡೆತ್‌ ನೋಟ್‌ ಅನ್ನು ಬರೆದಿದ್ದರು, ಇದರಲ್ಲಿ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌ ಹೆಸರನ್ನು ಉಲ್ಲೇಖಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಇದರ ಜೊತೆಗೆ ಪತ್ರದಲ್ಲಿ ಕಲೆಕ್ಟರ್ ಮತ್ತು ಪೊಲೀಸ್ ಅಧೀಕ್ಷಕರನ್ನು ಸಹ ಹೆಸರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಕ್ಷೇತರ ಸಂಸದನ ಅಸಹಜ ಸಾವು: ಡೆತ್‌ನೋಟ್‌ನಲ್ಲಿ ಬಿಜೆಪಿ ನಾಯಕನ ಹೆಸರಿದೆಯೇ?

ಡೆಲ್ಕರ್‌ ಅವರ ಮಗ ಅಭಿನವ್ ಅವರು ಪೊಲೀಸರಿಗೆ ಹೇಳಿಕೆ ನೀಡಿದ ನಂತರ ಈ ಪ್ರಕರಣ ದಾಖಲಿಸಲಾಗಿದೆ.

“ಮುಂಬೈಗೆ ಬಂದು ಮಹಾರಾಷ್ಟ್ರದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿದ್ದು, ನನ್ನ ಕುಟುಂಬಕ್ಕೆ ನ್ಯಾಯ ಒದಗಿಸಲು ಅವರು ಸಹಾಯ ಮಾಡುತ್ತಾರೆ ಎಂದು ಅವರು ನನಗೆ ಭರವಸೆ ನೀಡಿದ್ದಾರೆ” ಎಂದು ಅಭಿನವ್ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದಾಗಿ ಮಂಗಳವಾರ ಸಂಜೆ 5 ಗಂಟೆಗೆ ಮೆರಿನ್ ಡ್ರೈವ್ ಪೊಲೀಸ್ ಠಾಣೆಗೆ ಹೋಗಿ, ಅಲ್ಲಿ ಅವರ ಹೇಳಿಕೆಯನ್ನು ರಾತ್ರಿ 10 ರವರೆಗೆ ಸಹಾಯಕ ಪೊಲೀಸ್ ಆಯುಕ್ತ ಪಾಂಡುರಂಗ್ ಶಿಂಧೆ ದಾಖಲಿಸಿದ್ದಾರೆ ಮತ್ತು ಅಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಸಂಸದನ ಆತ್ಮಹತ್ಯೆಯ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವುದಾಗಿ ಮಹಾರಾಷ್ಟ್ರ ಸರ್ಕಾರ ರಾಜ್ಯ ವಿಧಾನಸಭೆಯಲ್ಲಿ ಘೋಷಿಸಿದ ಕೆಲವೇ ಗಂಟೆಗಳ ನಂತರ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ: ಒಬ್ಬನೇ ಒಬ್ಬ ಪ್ರೇಕ್ಷಕನಿಗೆ ಐವರು ಭಾಷಣಕಾರರು!: ಬಿಜೆಪಿ ಕಾಲೆಳೆದ ಸಂಸದ ಶಶಿ ತರೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...