Homeಮುಖಪುಟಪ.ಬಂಗಾಳ: ನಾಮಪತ್ರ ಸಲ್ಲಿಸಿ ಹಿಂದಿರುಗುತ್ತಿದ್ದ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ!

ಪ.ಬಂಗಾಳ: ನಾಮಪತ್ರ ಸಲ್ಲಿಸಿ ಹಿಂದಿರುಗುತ್ತಿದ್ದ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ!

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿವರ ಮೇಲೆ ಹಲ್ಲೆ ನಡೆದಿದ್ದು, ಅವರ ಎಡಗಾಲಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿ ಹಿಂದಿರುಗುವಾಗ ಈ ಘಟನೆ ನಡೆದಿದೆ.

ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮ ವಿಧಾನಸಭಾ ಸ್ಥಾನಕ್ಕೆ ಬುಧವಾರ ನಾಮಪತ್ರ ಸಲ್ಲಿಸಿದ ನಂತರ, ಕಾರು ಹತ್ತುವಾಗ 4 ರಿಂದ 5 ಜನರು ನೂಕಾಡಿದ್ದಾರೆ. ಈ ಗಲಭೆಯಲ್ಲಿ ಅವರ ಎಡಗಾಲಿಗೆ ಗಾಯವಾಗಿದೆ. ಈ ವೇಳೆ ಪೊಲೀಸರು ಇರಲಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಳ್ಳಾಟದ ವೇಳೆ ಭದ್ರತಾ ಸಿಬ್ಬಂದಿಗಳು ಮಮತಾ ಬ್ಯಾನರ್ಜಿ ಅವರನ್ನು ಎತ್ತಿ ಕಾರಿನ ಸೀಟಿನಲ್ಲಿ ಕೂರಿಸಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...