Homeಮುಖಪುಟಬಂಗಾಳ ಚುನಾವಣೆ: CPI(M) ನಿಂದ ಸ್ಪರ್ಧಿಸಲಿರುವ ಜೆಎನ್‌ಯು ನಾಯಕಿ ‘ಐಶೆ ಘೋಷ್‌’

ಬಂಗಾಳ ಚುನಾವಣೆ: CPI(M) ನಿಂದ ಸ್ಪರ್ಧಿಸಲಿರುವ ಜೆಎನ್‌ಯು ನಾಯಕಿ ‘ಐಶೆ ಘೋಷ್‌’

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು ಹೆಚ್ಚುತ್ತಿದ್ದು ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್‌ನ ಕಿತ್ತಾಟದ ನಡುವೆ ಎಡಪಕ್ಷಗಳು ಮತ್ತು ಕಾಂಗ್ರೆಸ್‌‌ನ ಮೈತ್ರಿ ಕೂಡಾ ಕೂಡಾ ಚುನಾವಣೆಯಲ್ಲಿ ತನ್ನ ಛಾಪು ಮೂಡಿಸುತ್ತಿದೆ. ಎಡಪಕ್ಷಗಳು ಈ ಭಾರಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಜನರಿಗೆ ಮಣೆ ಹಾಕಿವೆ. ಅದರಂತೆ ಜೆಎನ್‌ಯು ವಿದ್ಯಾರ್ಥಿ ಸಂಘದ ನಾಯಕಿ 26 ವರ್ಷದ ಐಶೆ ಘೋಷ್‌ ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಸಿಪಿಐ(ಎಂ) ನಿಂದ ಆಯ್ಕೆಯಾಗಿದ್ದಾರೆ.

ಜೆಎನ್‌ಯುವಿನಲ್ಲಿ ಹಾಸ್ಟೆಲ್ ಫೀಸ್‌ ಹೆಚ್ಚಿಸುವುದರ ವಿರುದ್ದ ನಡೆದ ವಿದ್ಯಾರ್ಥಿ ಹೋರಾಟಕ್ಕೆ ಐಶೆ ಘೋಷ್‌ ನಾಯಕತ್ವ ನೀಡಿದ್ದರು. 2020 ರ ಜನವರಿಯಲ್ಲಿ ಜೆಎನ್‌ಯು ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಅವರ ಮೇಲೆ ಬಲ ಪಂಥೀಯ ವಿದ್ಯಾರ್ಥಿಗಳು ತೀವ್ರ ದಾಳಿ ನಡೆಸಿದ್ದರು.

ಸಿಪಿಐ(ಎಂ) ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾದ(ಎಸ್‌ಎಫ್‌ಐ) ನಾಯಕಿಯು ಆಗಿರುವ ಐಶೆ ಘೋಷ್ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಜಮುರಿಯಾದಿಂದ ಸ್ಪರ್ಧಿಸಲಿದ್ದಾರೆ. ಅವರು ಈ ಜಿಲ್ಲೆಯ ದುರ್ಗಾಪುರದವರಾಗಿದ್ದಾರೆ.

ಇದನ್ನೂ ಓದಿ: ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ವಿಧಾನಸಭಾ ಚುನಾವಣೆಗೆ ಹಲವು ಯುವ ನಾಯಕರನ್ನು ಕಣಕ್ಕಿಳಿಸಿದೆ. ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಶ್ರೀಜನ್ ಭಟ್ಟಾಚಾರ್ಜಿ ಅವರು ಹೂಗ್ಲಿ ಜಿಲ್ಲೆಯ ಸಿಂಗೂರ್ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ.

ಸಿಪಿಐ(ಎಂ) ಯುವಜನ ಸಂಘಟನೆಯಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ)ದ ರಾಜ್ಯ ಅಧ್ಯಕ್ಷೆ ಮಿನಾಕ್ಷಿ ಮುಖರ್ಜಿ ನಂದಿಗ್ರಾಮದಲ್ಲಿ ಸ್ಪರ್ಧಿಸಲಿದ್ದಾರೆ. ಅಲ್ಲಿ ಟಿಎಂಸಿಯಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯಿಂದ ಸುವೆಂದು ಅಧಿಕಾರಿ ಸ್ಪರ್ಧಿಸುತ್ತಿದ್ದಾರೆ. ಸುವೆಂದು ಅವರು ಮಮತಾ ಬ್ಯಾನರ್ಜಿಯ ಆಪ್ತರಾಗಿದ್ದರು, ಇತ್ತೀಚೆಗಷ್ಟೇ ಅವರು ಟಿಎಂಸಿಯಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದರು.

ಅಷ್ಟೇ ಅಲ್ಲದೆ, ಜೆಎನ್‌ಯುನ ಮತ್ತೊಬ್ಬ ವಿದ್ಯಾರ್ಥಿ ನಾಯಕಿ, ದೀಪ್ಸಿತಾ ಧರ್ ಅವರಿಗೂ ಪಶ್ಚಿಮ‌ ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಲು ಸಿಪಿಐ(ಎಂ) ಟಿಕೆಟ್ ನೀಡಿದೆ.

ಆರು ಹಂತಗಳಲ್ಲಿ ಎಡಪಕ್ಷಗಳು ಸ್ಪರ್ಧಿಸಲಿರುವ ಹೆಚ್ಚಿನ ಸ್ಥಾನಗಳ ಹೆಸರನ್ನು ಬಂಗಾಳ ಎಡರಂಗದ ಅಧ್ಯಕ್ಷ ಮತ್ತು ಹಿರಿಯ ಸಿಪಿಐ(ಎಂ) ನಾಯಕ ಬಿಮನ್ ಬೋಸ್ ಬುಧವಾರ ಬಿಡುಗಡೆ ಮಾಡಿದ್ದಾರೆ. ಬಂಗಾಳದ 294 ಸ್ಥಾನಗಳಲ್ಲಿ, ಮೊದಲ ಮತ್ತು ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ 60 ರ ಎಡ ಅಭ್ಯರ್ಥಿಗಳ ಹೆಸರನ್ನು ಕಳೆದ ವಾರ ಘೋಷಿಸಲಾಗಿತ್ತು.

ಇದನ್ನೂ ಓದಿ: ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿ ಕುರಿತು ಅಂಕಿಅಂಶಗಳಿಲ್ಲ: ಕೇಂದ್ರ ಸರ್ಕಾರ

ಈ ಬಾರಿ ಪಶ್ಚಿಮ ಬಂಗಾಳವು ಟಿಎಂಸಿ, ಕಾಂಗ್ರೆಸ್-ಎಡ ಮೈತ್ರಿ ಮತ್ತು ಬಿಜೆಪಿ ಪಕ್ಷಗಳ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.

ಮಮತಾ ಬ್ಯಾನರ್ಜಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿಯು 200 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಮತ್ತು ಎಡಪಂಥೀಯರು ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದು, ಅಬ್ಬಾಸುದ್ದೀನ್ ಸಿದ್ದಿಕಿ ಅವರ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಕೂಡಾ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. “ಕಾಂಗ್ರೆಸ್ ಮತ್ತು ಐಎಸ್ಎಫ್‌ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡುತ್ತವೆ. ಮಾತುಕತೆ ಇನ್ನೂ ನಡೆಯುತ್ತಿದೆ” ಎಂದು ಬೋಸ್ ಹೇಳಿದ್ದಾರೆ.

2016 ರಲ್ಲಿ, ಕಾಂಗ್ರೆಸ್ 44 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಡರಂಗವು 33 ಸ್ಥಾನಗಳನ್ನು ಗಳಿಸಿತ್ತು. ಆಡಳಿತಾರೂಢ ಟಿಎಂಸಿ 211 ಸ್ಥಾನಗಳನ್ನು ಮತ್ತು ಬಿಜೆಪಿ 3 ಸ್ಥಾನಗಳನ್ನು ಗೆದ್ದಿದ್ದವು.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದು ಮತ್ತು ಟಿಎಂಸಿಯ ಸಂಸದ ಸ್ಥಾನವು 22 ಕ್ಕೆ ಇಳಿದಿದೆ. ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿದ್ದರೆ, ಎಡಪಂಥೀಯರು ಒಂದೂ ಸ್ಥಾನವನ್ನು ಗೆದ್ದಿರಲಿಲ್ಲ.

ಇದನ್ನೂ ಓದಿ: ‘ಯಾವ ದಾಳಿಯು ದೃಢತೆಯನ್ನು ಮುರಿಯದು’ – ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

ವಿಡಿಯೋ ನೋಡಿ►► ‘ಲೈಂಗಿಕ ಕಾರ್ಯಕರ್ತರು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...