Homeಕರ್ನಾಟಕಕಾಂಗ್ರೆಸ್ ಸೇರಲಿರುವ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್

ಕಾಂಗ್ರೆಸ್ ಸೇರಲಿರುವ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್

- Advertisement -
- Advertisement -

ಜೆಡಿಎಸ್‌ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರುತ್ತೇನೆ ಎಂದು ಹೇಳಿರುವ ಮಾಜಿ ಶಾಸಕ ಮಧು ಬಂಗಾರಪ್ಪ ಇಂದು ಮತ್ತೊಂದು ಬ್ರೇಕಿಂಗ್ ನ್ಯೂಸ್ ನೀಡಿದ್ದಾರೆ. ನಟ ಶಿವರಾಜ್‌ಕುಮಾರ್‌ ಪತ್ನಿ ಗೀತಾ ಶಿವರಾಜ್‌ಕುಮಾರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಸೊರಬ ಮಾಜಿ ಶಾಸಕ, ನಾನು ನನ್ನ ಅಕ್ಕ ಇಬ್ಬರೂ ಕಾಂಗ್ರೆಸ್ ಸೇರುತ್ತೇವೆ. ಅವರು ಈಗಾಗಲೇ ಸೇರಿದ್ದಾರೆ ಎಂದೆ ಅಂದುಕೊಳ್ಳಿ ಎಂದಿದ್ದಾರೆ.

ಈ ಕುರಿತು ಈಗಾಗಲೇ ಅವರ ಜೊತೆಗೂ ಹಲವು ಸುತ್ತಿನ ಮಾತುಕತೆ ನಡೆದಿದ್ದು ಅವರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಲು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಸೊರಬ ಮಾಜಿ ಶಾಸಕ ಮಧು ಬಂಗಾರಪ್ಪ ಗುರುವಾರ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪಕ್ಷ ಸೇರುವ ಕುರಿತು ಚರ್ಚಿಸಿದ್ದರು. ದೊಡ್ಡ ಸಮಾವೇಶ ಮಾಡಿ, ಏಪ್ರೀಲ್‌ನಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂದಿದ್ದರು.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರರಾದ ಕುಮಾರ್ ಬಂಗಾರಪ್ಪ ಬಿಜೆಪಿಯಲ್ಲಿದ್ದಾರೆ. ಅವರು ಪ್ರಸ್ತುತ ಸೊರಬ ಕ್ಷೇತ್ರದ ಶಾಸಕರು. ಆದರೆ, ಗೀತಾ ಶಿವರಾಜ್‌ಕುಮಾರ್ ಮೊದಲಿನಿಂದಲೂ ರಾಜಕೀಯವಾಗಿ ಮಧು ಬಂಗಾರಪ್ಪ ಜೊತೆ ಗುರುತಿಸಿಕೊಂಡಿದ್ದಾರೆ.

2014ರಲ್ಲಿ ಸೋತಿದ್ದರು

ಗೀತಾ ಶಿವರಾಜ್ ಕುಮಾರ್ ಈ ಹಿಂದೆ ಜೆಡಿಎಸ್ ಅಭ್ಯರ್ಥಿಯಾಗಿ 2014ರಲ್ಲಿ ಶಿವಮೊಗ್ಗದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಸೋಲು ಕಂಡಿದ್ದರು. ಈಗ ಮಧು ಬಂಗಾರಪ್ಪ ಕಾಂಗ್ರೆಸ್ ಸೇರಲಿದ್ದು, ಗೀತಾ ಶಿವರಾಜ್ ಕುಮಾರ್ ಸಹ ಪಕ್ಷಕ್ಕೆ ಸೇರಲಿದ್ದಾರೆ. ಈಗಾಗಲೇ ಎರಡು ಬಾರಿ ಡಿ.ಕೆ.ಶಿವಕುಮಾರ್‌, ಗೀತಾ ಶಿವರಾಜ್‌ಕುಮಾರ್‌ ಜೊತೆಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...