Homeಕರ್ನಾಟಕ'ಹಸಿ ಕಸ - ಒಣ ಕಸ ಬೇರ್ಪಡಿಸಿ ಕೊಡಿ' ಎಂದ ಪೌರ ಕಾರ್ಮಿಕನ ಮೇಲೆ ಹಲ್ಲೆ:...

‘ಹಸಿ ಕಸ – ಒಣ ಕಸ ಬೇರ್ಪಡಿಸಿ ಕೊಡಿ’ ಎಂದ ಪೌರ ಕಾರ್ಮಿಕನ ಮೇಲೆ ಹಲ್ಲೆ: ಇಬ್ಬರ ಬಂಧನ

- Advertisement -
- Advertisement -

ಒಣ ಕಸ ಮತ್ತು ಹಸಿ ಕಸವನ್ನು ಬೇರ್ಪಡಿಸಿ ಕೊಡಿ ಎಂದು ಕೇಳಿದ ಪೌರ ಕಾರ್ಮಿಕರೊಬ್ಬರ ಮೇಲೆ ಹಲ್ಲೆ ನಡೆದಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಕಸ ವಿಲೇವಾರಿಗೆ ಸಂಬಂಧಿಸಿದಂತೆ ನಗರ ಸಭೆಯ ಪೌರ ಕಾರ್ಮಿಕರೊಬ್ಬರ ಮೇಲೆ ಹಲ್ಲೆ ಮಾಡಿರುವ ಪ್ರಕರಣದಲ್ಲಿ ನೇಜಾರಿನ ಇಸ್ಮಾಯಿಲ್ (55) ಹಾಗೂ ಹೂಡೆಯ ಸುಹೈಲ್ (28) ಎಂಬುವವರನ್ನು ಬಂಧಿಸಲಾಗಿದೆ.

ಬಾಗಲಕೋಟೆ ಮೂಲದ ನಿಟ್ಟೂರು ನಿವಾಸಿ ಸಂಜು ಮಾದಾರ್ (26) ಹಲ್ಲೆಗೊಳಗಾದ ಪೌರ ಕಾರ್ಮಿಕ. ಸಂಜು ಇತರ ಪೌರ ಕಾರ್ಮಿಕರೊಂದಿಗೆ ಕಸ ಸಂಗ್ರಹಿಸಲು ತೆರಳಿದ್ದರು. ಈ ವೇಳೆ ಸಿಟಿ ಬಸ್ ಸ್ಟಾಂಡ್ ಸಮೀಪದ ಆಸ್ಮಾ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಹಸಿ ಮತ್ತು ಒಣ ಕಸ ಬೆರೆಸಿರುವುದನ್ನು ಸಂಜು ಪ್ರಶ್ನಿಸಿದ್ದರು. ಈ ವೇಳೆ ಪೌರ ಕಾರ್ಮಿಕರು ಮತ್ತು ಅಂಗಡಿಯವರ ನಡುವೆ ವಾಗ್ವಾದ ನಡೆದಿದೆ. ನಂತರ ಇಸ್ಮಾಯಿಲ್ ಮತ್ತು ಸುಹೈಲ್ ಇಬ್ಬರು ಸಂಜುವಿಗೆ ಬೈದಿದ್ದು ಮಾತ್ರವಲ್ಲದೆ ಹಲ್ಲೆ ನಡೆಸಿದ್ದಾರೆ. ಇಷ್ಟೇ ಅಲ್ಲದೆ ನಗರ ಸಭೆಯ ಅಧಿಕಾರಿಗಳು ಬಂದ ವೇಳೆ ಅವರ ಎದುರಲ್ಲೇ ಸಂಜುವಿನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ವಿಡಿಯೊ | ಪೌರ ಕಾರ್ಮಿಕರಿಗೆ ಹೂವು, ನೋಟಿನ ಹಾರ ಹಾಕಿದ ಪಂಜಾಬಿಗರು

ಸಂಜು ನೀಡಿದ ದೂರಿನ ಆಧಾರದ ಮೇಲೆ, ಉಡುಪಿ ಪೊಲೀಸರು ಇವರಿಬ್ಬರನ್ನು ಬಂಧಿಸಿದ್ದಾರೆ. ಇವರ ಮೇಲೆ ಐಪಿಸಿ ಸೆಕ್ಷನ್ 323, 504, 506 ಮತ್ತು 34 ರ ಅಡಿಯಲ್ಲಿ ಹಾಗೂ ಎಸ್‌ಸಿ ಎಸ್‌ಟಿ ಕಾಯ್ದೆ 1989 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

“ಇಬ್ಬರನ್ನು ಬಂಧಿಸಲಾಗಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು” ಎಂದು ಉಡುಪಿ ಪಟ್ಟಣ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಕಾನೂನು ಮತ್ತು ಸುವ್ಯವಸ್ಥೆ) ಶಕ್ತಿವೇಲು ತಿಳಿಸಿದ್ದಾರೆ.

ನಗರವನ್ನು ಸ್ವಚ್ಚಗೊಳಿಸುವ ಸಲುವಾಗಿ ವ್ಯವಸ್ಥಿತ ಯೋಜನೆ ರೂಪಿಸುವ ನಿಟ್ಟಿನಲ್ಲಿ ಪ್ರತೀ ಅಂಗಡಿ, ಮನೆಗಳಿಗೆ ಹಸಿ ಕಸ, ಒಣ ಕಸ ಎಂದು ವಿಂಗಡಿಸಿ ನೀಡುವಂತೆ ನಗರಸಭೆ ಅನೇಕ ಬಾರಿ ಮನವಿ ಮಾಡಿಕೊಂಡಿದೆ. ಅದಕ್ಕಾಗಿ ವ್ಯವಸ್ಥೆ ಮಾಡಿಕೊಟ್ಟಿದೆ. ಇದನ್ನು ಪಾಲಿಸಿದ ಪೌರ ಕಾರ್ಮಿಕರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಈ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...