Homeಮುಖಪುಟದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

- Advertisement -
- Advertisement -

ಉತ್ತರಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ನಡೆದ ಕ್ರೂರ ಹಲ್ಲೆಯನ್ನು ಲಕ್ಷಾಂತರ ಜನರು ಖಂಡಿಸಿದ್ದಾರೆ. ‘ಸಾರಿ ಆಸಿಫ್’ ಹ್ಯಾಷ್‌ಟ್ಯಾಗ್‌ ಬಳಸಿ ಟ್ವಿಟರ್‌ನಲ್ಲಿ ಕ್ಷಮೆ ಕೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಇಂಟು ಟ್ವಿಟರ್‌ನಲ್ಲಿ #SorryAsif ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್‌ ಆಗಿದೆ. ಅದೇ ಸಮಯದಲ್ಲಿ 96 ವರ್ಷದ ಹಿಂದೆ ಡಾ.ಬಿ.ಆರ್ ಅಂಬೇಡ್ಕರ್‌ರವರು ನಡೆಸಿದ ಚೌಡಾರ್ ಕೆರೆ ಹೋರಾಟವನ್ನು ನೆಟ್ಟಿಗರು ನೆನಪಿಸಿಕೊಂಡಿದ್ದಾರೆ. “ನೀರು ಕುಡಿಯುವುದಕ್ಕಾಗಿನ ಸಂಘರ್ಷ ಬಹಳ ಹಿಂದಿನದ್ದು” ಎಂಬ ಶೀರ್ಷಿಕೆಯೊಂದಿಗೆ ಅಂಬೇಡ್ಕರ್ ಆಸಿಫ್‌ನನ್ನು ಸಂತೈಸುತ್ತಿರುವ ಕಾರ್ಟೂನ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ನಾನೊಬ್ಬ ಹಿಂದೂ ಬ್ರಾಹ್ಮಣ. ಆದರೆ ಅನ್ಯಧರ್ಮೀಯರು ನೀರು ಕುಡಿದ ಕಾರಣಕ್ಕೆ ಅವರ ಮೇಲೆ ಹಲ್ಲೆಗಳಾಗುವುದಾದರೆ ನಾನು ಇನ್ನು ಮುಂದೆ ನನ್ನ ಜೀವಮಾನವಿಡಿ ಅಂತಹ ದೇವಾಸ್ಥಾನಗಳಿಗೆ ಹೋಗುವುದಿಲ್ಲ” ಎಂದು ಮುಕುಲ್ ಚತುರ್ವೇದಿ ಎಂಬುವವರು ಟ್ವೀಟ್ ಮಾಡಿದ್ದಾರೆ.

“ನೀರು ಕುಡಿಯಲು ದೇವಸ್ಥಾನಕ್ಕೆ ಹೋಗಿದ್ದಕ್ಕಾಗಿ ಮುಸ್ಲಿಂ ಬಾಲಕನನ್ನು ಥಳಿಸಲಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ ನೀರು ಅಥವಾ ಆಹಾರದ ಅಗತ್ಯವಿರುವ ಪ್ರತಿಯೊಬ್ಬರಿಗೂ (ಅವರ ಧರ್ಮವನ್ನು ಲೆಕ್ಕಿಸದೆ) ಮಸೀದಿಗಳನ್ನು ತೆರೆಯುವುದಾಗಿದೆ. ಈ ದ್ವೇಷ ಮತ್ತು ಕತ್ತಲೆಯ ವಿರುದ್ಧ ನಾವು ಹೋರಾಡುವ ಬೇರೆ ದಾರಿ ನನಗೆ ತಿಳಿದಿಲ್ಲ” ಎಂದು ಖ್ಯಾತ ಪತ್ರಕರ್ತೆ ಅರ್ಫ ಖಾನುಂ ಶೆರ್ವಾನಿ ಟ್ವೀಟ್ ಮಾಡಿದ್ದಾರೆ.

“ನಿನಗಾದ ಅನ್ಯಾಯಕ್ಕೆ ಮಾತ್ರವಲ್ಲದೆ ದೇಶದಲ್ಲಿ ವರದಿಯಾಗದ ಅಸಂಖ್ಯಾತದ ಅನ್ಯಾಯಗಳಿಗೆ ಕ್ಷಮೆ ಯಾಚಿಸುತ್ತಿದ್ದೇನೆ. ಇಂದಿನ ನಮ್ಮ ಸಮಾಜದ ಪರಿಸ್ಥಿತಿ ಕಂಡು ನಾಚಿಕೆಯಾಗುತ್ತಿದೆ. ಈ ದ್ವೇಷದಿಂದ ತುಂಬಿದ ವಿಭಜಕ ಶಕ್ತಿಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳುತ್ತೇನೆ” ಎಂದು ಯುವಹಲ್ಲಾಬೋಲ್ ಆಂದೋಲನದ ಮುಖಂಡ ಅನುಪಮ್ ತಿಳಿಸಿದ್ದಾರೆ.

“ಟ್ವಿಟರ್‌ನಲ್ಲಿ ಸಾರಿ ಆಸಿಫ್ ಟ್ರೆಂಡ್‌ ಆಗುತ್ತಿದೆ. ಅಂದರೆ ದ್ವೇಷಿಸುವವರಿಗಿಂತ ಪ್ರೀತಿಸುವವರ ಸಂಖ್ಯೆ ಹೆಚ್ಚು ಎಂಬುದು ಆಗ ಮಗುವಿಗೆ ಗೊತ್ತಾಗಲಿ. ಜೊತೆಗೆ ಅಮಾನವೀಯವಾಗಿ ಥಳಿಸಿದ ಶೃಂಗಿ ನಂದನ್‌ ಯಾದವ್ ಎಂಬ ಹುಡುಗನಿಗೂ ಸಹ ಹೇಗೆ ಹಿಂದುತ್ವವಾದಿ ಶಕ್ತಿಗಳು ತನ್ನನ್ನು ದಾರಿ ತಪ್ಪಿಸಿದವು ಮತ್ತು ದ್ವೇಷಿಸುವುದರಿಂದ ಯಾವುದೇ ಲಾಭವಿಲ್ಲ ಎಂಬುದು ಅರಿವಾಗಲಿ” ಎಂದು ರಿಫತ್ ಜಾವೇದ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಬಹಳಷ್ಟು ಜನ ಹಿಂದೂ ಮುಸ್ಲಿಂ ಬಾಲಕರು ಮತ್ತು ಯುವಕರು ಕೂಡಿ ಬಾಳುವ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ನಿಮ್ಮ ದ್ವೇಷಕ್ಕಿಂತ ನಮ್ಮ ಪ್ರೀತಿ ದೊಡ್ಡದು ಎಂದು ಸಾರಿದ್ದಾರೆ.

ನಿನ್ನೆ ದೇವಸ್ಥಾನದಲ್ಲಿ ನೀರು ಕುಡಿದಿದ್ದಕ್ಕಾಗಿ ಆಸಿಫ್ ಎಂಬ ಬಾಲಕನ ಮೇಲೆ ಶೃಂಗಿ ನಂದನ್ ಯಾದವ್ ಎಂಬ ವ್ಯಕ್ತಿಯು ಕ್ರೂರವಾಗಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ವರದಿಯಾಗಿತ್ತು. ಆ ವಿಡಿಯೋ ವೈರಲ್ ಆದ ನಂತರ ಗಾಜಿಯಾಬಾದ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.


ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...