Homeಮುಖಪುಟಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಜಯ ಗಳಿಸಿದ ಜಗನ್ ಪಕ್ಷ

ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಜಯ ಗಳಿಸಿದ ಜಗನ್ ಪಕ್ಷ

ಪುರಸಭೆ ಚುನಾವಣೆಯಲ್ಲಿ ವೈಎಸ್ಆರ್‌ಸಿಯ ಗೆಲುವು ಸುಮಾರು ಎರಡು ವರ್ಷಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಮತ್ತು ಕಳೆದ ತಿಂಗಳು ನಡೆದ ಪಂಚಾಯತ್ ಚುನಾವಣೆಗಳಲ್ಲಿ ತನ್ನದೆ ಪಕ್ಷದ ಗೆಲುವನ್ನು ಮೀರಿಸಿದೆ.

- Advertisement -
- Advertisement -

ಆಂಧ್ರಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ಜಗನ್ ಮೋಹನ್‌ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್‌ ಪಕ್ಷ ಭರ್ಜರಿ ಜಯ ಗಳಿಸಿದೆ. 75 ಪುರಸಭೆಗಳಲ್ಲಿ 74 ರಲ್ಲಿ ಜಯಗಳಿಸಿದೆ. ಎಲ್ಲಾ 12 ಮಹಾನಗರ ಪಾಲಿಕೆಗಳಲ್ಲಿಯೂ ಜಯಭೇರಿ ಬಾರಿಸಿದೆ.

ವಿಶಾಖಪಟ್ಟಣಂ, ವಿಜಯವಾಡ ಮತ್ತು ಗುಂಟೂರು ನಗರಗಳಲ್ಲಿ ಪ್ರಮುಖ ವಿರೋಧ ಪಕ್ಷವಾದ ತೆಲುಗು ದೇಶಂ ಪಕ್ಷಕ್ಕೆ (ಟಿಡಿಪಿ) ದೊಡ್ಡ ಹಿನ್ನೆಡೆಯಾಗಿದೆ. ವಿರೋಧ ಪಕ್ಷ ಟಿಡಿಪಿ ಅನೇಕ ಕಡೆಗಳಲ್ಲಿ ಎರಡು ಅಂಕಿಗಳನ್ನು ದಾಟಲು ಸಹ ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ.

ಟಿಡಿಪಿ, ತಾಡಿಪತ್ರಿ ಮತ್ತು ಮೈದುಕೂರ್‌ನಲ್ಲಿ ಬಹುಮತದ ವಾರ್ಡ್‌ಗಳನ್ನು ಗೆದ್ದಿದ್ದರೂ ಕೂಡ, ವೈಎಸ್‌ಆರ್‌ಸಿ ಈ ಎರಡು ಕಡೆಗಳಲ್ಲಿ ಅಧ್ಯಕ್ಷರ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಜನಸೇನೆ-ಬಿಜೆಪಿ ಮೈತ್ರಿಗೆ ಯಾವುದೇ ಸ್ಥಾನ ಲಭಿಸಿಲ್ಲ.

ಇದನ್ನೂ ಓದಿ: ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ: ಜಗನ್ ಪಕ್ಷಕ್ಕೆ ಭಾರೀ ಮುನ್ನಡೆ

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿಯು ವೈಎಸ್‌ಆರ್‌ಸಿಯ ಗೆಲುವು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ವಿಜಯಕ್ಕೆ ನಾಂದಿ ಹಾಡಿದೆ ಎನ್ನಲಾಗುತ್ತಿದೆ. ಈ ಬಾರಿಯ ಕಾರ್ಪೋರೇಷನ್‌ ಎಲೆಕ್ಷನ್‌ ಅನ್ನು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಗಂಭೀರವಾಗಿ ಪರಿಗಣಿಸಿದರು. ನಗರ ಪ್ರದೇಶದಲ್ಲಿ ತಾವಿನ್ನು ಪ್ರಭಾವ ಹೊಂದಿದ್ದೇನೆ ಎಂಬುದನ್ನು ಸಾಬೀತು ಪಡಿಸಲು ಈ ಬಾರಿ ಪ್ರಯತ್ನಿಸಿದ್ದರು. ಚಂದ್ರಬಾಬು ನಾಯ್ಡು ಮತ್ತು ಅವರ ಪುತ್ರ ಲೋಕೇಶ್ ರಾಜ್ಯದ ಎಲ್ಲಾ ಪ್ರಮುಖ ನಗರಗಳು ಮತ್ತು ಪಟ್ಟಣಗಳಲ್ಲಿ ಈ ಬಾರಿ ಭಾರಿ ಪ್ರಚಾರ ನಡೆಸಿದ್ದರು.

ಪುರಸಭೆ ಚುನಾವಣೆಯಲ್ಲಿ ವೈಎಸ್ಆರ್‌ಸಿಯ ಅದ್ಭುತ ಗೆಲುವು ಸುಮಾರು ಎರಡು ವರ್ಷಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಮತ್ತು ಕಳೆದ ತಿಂಗಳು ನಡೆದ ಪಂಚಾಯತ್ ಚುನಾವಣೆಗಳಲ್ಲಿ ತನ್ನದೆ ಪಕ್ಷದ ಗೆಲುವನ್ನು ಮೀರಿಸಿದೆ.

2019 ರ ಚುನಾವಣೆಯಲ್ಲಿ ವೈಎಸ್‌ಆರ್‌ಸಿ, ವಿಧಾನಸಭೆಯಲ್ಲಿ ಸುಮಾರು ಶೇಕಡಾ 85 ರಷ್ಟು ಸ್ಥಾನಗಳನ್ನು ಗೆದ್ದಿತ್ತು. ಪಕ್ಷೇತರ ಆಧಾರದ ಮೇಲೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡಾ 83 ರಷ್ಟು ಪಂಚಾಯಿತಿಗಳಲ್ಲಿ ಗೆಲುವು ಪಡೆದುಕೊಂಡಿತ್ತು. ಈಗ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶೇಕಡಾ 100ರಷ್ಟು ಗೆಲುವು ಪಡೆದಿದೆ.

ವಿಶೇಷವೆಂದರೆ ಈ ಬಾರಿ ಚುನಾವಣೆಯಲ್ಲಿ ಜಗನ್‌ ಮೋಹನ್‌ ರೆಡ್ಡಿ ಪ್ರಚಾರ ನಡೆಸಿಲ್ಲ ಎಂಬುದು. ತಾವು ಎಲ್ಲಾ ವರ್ಗದ ಜನರಿಗಾಗಿ ಮಾಡಿರುವ ಕಲ್ಯಾಣ ಕಾರ್ಯಕ್ರಮಗಳು, ತಾನು ನೀಡಿದ್ದ ಭರವಸೆಗಳನ್ನು ಉಳಿಸಿಕೊಂಡಿದ್ದೇನೆ ಎಂಬ ವಿಶ್ವಾಸದಲ್ಲಿ ಜಗನ್‌ ಸುಮ್ಮನಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...