Homeಮುಖಪುಟಪಾಕಿಸ್ತಾನಿ ಏಜೆಂಟರಿಗೆ ಗೌಪ್ಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಸೈನಿಕನ ಬಂಧನ

ಪಾಕಿಸ್ತಾನಿ ಏಜೆಂಟರಿಗೆ ಗೌಪ್ಯ ಮಾಹಿತಿ ಸೋರಿಕೆ ಮಾಡುತ್ತಿದ್ದ ಸೈನಿಕನ ಬಂಧನ

- Advertisement -
- Advertisement -

ಪಾಕಿಸ್ತಾನದ ಏಜೆಂಟರಿಗೆ ಬೇಹುಗಾರಿಕೆ ಮತ್ತು ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ರಾಜಸ್ಥಾನ್ ಪೊಲೀಸರ ಗುಪ್ತಚರ ವಿಭಾಗವು 22 ವರ್ಷದ ಸೇನಾ ಸಿಬ್ಬಂದಿಯನ್ನು ಬಂಧಿಸಿದೆ. ಆರೋಪಿಯನ್ನು ಸಿಕಾರ್ ಜಿಲ್ಲೆಯ ಆಕಾಶ್ ಮೆಹ್ರಿಯಾ ಎಂದು ಗುರುತಿಸಲಾಗಿದ್ದು, ಪಾಕಿಸ್ತಾನದ ಮಹಿಳಾ ಏಜೆಂಟರಿಗೆ ಮಾಹಿತಿ ನೀಡುತ್ತಿದ್ದರು ಎಂದು ವರದಿಯಾಗಿದೆ.

ರಾಜಸ್ಥಾನದ ಪೊಲೀಸರ ಪ್ರಕಾರ, ಪಾಕಿಸ್ತಾನದ ಏಜೆಂಟರು ಫೇಸ್‌ಬುಕ್ ಮೂಲಕ ಆಕಾಶ್ ಅವರೊಂದಿಗೆ ಸ್ನೇಹ ಬೆಳೆಸಿದ್ದರು. ಸಿಕ್ಕಿಂನಲ್ಲಿ ಸೇವೆಯಲ್ಲಿದ್ದ ಆಕಾಶ್ ರಜಾ ದಿನಗಳನ್ನು ಕಳೆಯಲು ತನ್ನ ಊರಿಗೆ ತೆರಲಿದ್ದಾಗ ಜೈಪುರದಲ್ಲಿ ಬಂಧಿಸಿದ ಗುಪ್ತಚರ ವಿಭಾಗಗಳು ವಿಚಾರಣೆ ನಡೆಸಿವೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ರಾಜಸ್ಥಾನದ ಸಿಕಾರ್ ಜಿಲ್ಲೆಯ ಲಕ್ಷ್ಮನ್‌ಗರ್‌ ತಹಸಿಲ್ ಮೂಲದ ಸೇನಾ ಸಿಬ್ಬಂದಿಯಾದ ಆಕಾಶ್ ಅವರನ್ನು ರಾಜಸ್ಥಾನ ಸಿಐಡಿಯ ರಾಜ್ಯ ಘಟಕದ ವಿಶೇಷ ಶಾಖೆ ಬಂಧಿಸಿದೆ.

ಇಂಟರ್‌ರ್ನೆಟ್‌‌ನಲ್ಲಿ ನಕಲಿ ಗುರುತುಗಳ ಮೂಲಕ ಮೆಹ್ರಿಯಾರೊಂದಿಗೆ ಸಂಪರ್ಕ ಸಾಧಿಸಿದ್ದ ಪಾಕಿಸ್ತಾನಿ ಏಜೆಂಟರಿಗೆ, ಸೇನಾ ಕಾರ್ಯತಂತ್ರದ ಮಾಹಿತಿಯನ್ನು ಆಕಾಶ್ ಪೂರೈಸುತ್ತಿದ್ದರು ಎಂದು ಪೊಲೀಸರ ಗುಪ್ತಚರ ವಿಭಾಗ ಹೇಳಿದೆ.

ಫೇಸ್‌ಬುಕ್‌ನಲ್ಲಿ ಬಂದಿದ್ದ ಸೇಹಿತರ ಕೋರಿಕೆಯನ್ನು ಸ್ವೀಕರಿಸಿದ್ದ ಆಕಾಶ್, ತಮ್ಮ ಫೋನ್ ಮೂಲಕ ಸೈನ್ಯದ ಕಾರ್ಯತಂತ್ರದ ಬಗ್ಗೆ ಮಾಹಿತಿಯನ್ನು ಪೂರೈಸುತ್ತಿದ್ದರು. ಈ ಮೂಲಕ ಪಾಕಿಸ್ತಾನದ ಮಹಿಳಾ ಏಜೆಂಟರೊಂದಿಗೆ ಚಾಟ್‌ಗಳಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆಕಾಶ್ ಸೆಪ್ಟೆಂಬರ್ 2018 ರಲ್ಲಿ ಭಾರತೀಯ ಸೇನೆಯಲ್ಲಿ ಸೇರಿದ್ದು, 2019 ರಲ್ಲಿ ತಮ್ಮ ತರಬೇತಿಯನ್ನು ಪೂರ್ಣಗೊಳಿಸಿದ್ದರು. ಅವರನ್ನು ಸಿಕ್ಕಿಂನಲ್ಲಿ ನೇಮಿಸಲಾಗಿತ್ತು.

ಇದನ್ನೂ ಓದಿ: ಟಿಕೆಟ್‌ ನಿರಾಕರಣೆ: ತಲೆ ಬೋಳಿಸಿಕೊಂಡ ಕೇರಳ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...