Homeಮುಖಪುಟಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: ನನ್ನ ಅನುಯಾಯಿ ಸೂಕ್ತ ಉತ್ತರ ನೀಡಿದ್ದಾನೆ ಎಂದ ಸ್ವಾಮೀಜಿ

ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: ನನ್ನ ಅನುಯಾಯಿ ಸೂಕ್ತ ಉತ್ತರ ನೀಡಿದ್ದಾನೆ ಎಂದ ಸ್ವಾಮೀಜಿ

ನಾವು ದೇವಾಲಯದ ದ್ವಾರದ ಹೊರಗೆ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಇಲ್ಲಿ ಪ್ರವೇಶಿಸಲು ಅನುಮತಿ ಇಲ್ಲ ಎಂದು ಸೂಚನಾ ಫಲಕ ಹಾಕಿದ್ದೇವೆ. ಇದು ಈ ಪ್ರದೇಶದ ಎಲ್ಲರಿಗೂ ತಿಳಿದಿದೆ. ಆದರೂ ಈ ಹುಡುಗ ನೀರು ಕುಡಿಯುವ ನೆಪದಲ್ಲಿ ಪ್ರವೇಶಿಸಿದ್ದಾನೆ

- Advertisement -
- Advertisement -

ಮಾರ್ಚ್ 12 ರಂದು ಗಾಜಿಯಾಬಾದ್‌ನ ದಾಸನ ದೇವಿ ಮಂದಿರದ ಬಳಿ ಅಪ್ರಾಪ್ತ ಮುಸ್ಲಿಂ ಬಾಲಕನನ್ನು ಭೀಕರವಾಗಿ ಥಳಿಸಿದ್ದು ದೇಶಾದ್ಯಂತ ಆಘಾತವನ್ನುಂಟು ಮಾಡಿದೆ. ಆದರೆ ದೇವಾಲಯದ ಕಟ್ಟಾ ಹಿಂದುತ್ವವಾದಿ ನಾಯಕ ಯತಿ ನರಸಿಂಗಾನಂದ್ ಸರಸ್ವತಿ ತಮ್ಮ ಅನುಯಾಯಿ ಮಾಡಿದ ಕೃತ್ಯವನ್ನು ಹೊಗಳಿದ್ದಾರೆ. ’ಅತಿಕ್ರಮಣಕಾರನಿಗೆ ಸೂಕ್ತ ಉತ್ತರ ನೀಡಿದ್ದಾರೆ’ ಎಂದು ಆರೋಪಿ ಶೃಂಗಿ ನಂದನ್ ಯಾದವ್‌ನನ್ನು ಶ್ಲಾಘಿಸಿದ್ದಾರೆ.

ಅಪ್ರಾಪ್ತ ಬಾಲಕನ ಮೇಲೆ ನಡೆದ ಕ್ರೂರ ಹಲ್ಲೆಗೆ ಪ್ರತಿಕ್ರಿಯಿಸಿರುವ ಯತಿ ನರಸಿಂಗಾನಂದ್ ಸರಸ್ವತಿ, ಹಲ್ಲೆ ಮಾಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಅನುಯಾಯಿಗಳು ತಾನು ನೀಡಿದ ತರಬೇತಿಯನ್ನು ಪಾಲಿಸಿದ್ದಾರೆ ಎಂದಿದ್ದಾರೆ.

ಫೆಬ್ರವರಿ 2020 ರ ದೆಹಲಿ ಗಲಭೆಯಲ್ಲಿಯು ಸರಸ್ವತಿ ಮುಸ್ಲಿಮರ ವಿರುದ್ಧ ಹಿಂದೂ ಸಮುದಾಯದವರಲ್ಲಿ ಪದೇ ಪದೇ ಜನಾಂಗೀಯ ದ್ವೇಷ ಬಿತ್ತಿದ್ದರು, ಇದರಿಂದಾಗಿ 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ಆರೋಪಿ ಶೃಂಗಿ ನಂದನ್ ಯಾದವ್ ಬಾಲಕನನ್ನು ಥಳಿಸಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋದಲ್ಲಿ ಆ ಮಗುವಿಗೆ ತನ್ನ ಹೆಸರನ್ನು ಕೇಳುತ್ತಿರುವುದು ಕಂಡುಬಂದಿದೆ. ಅದಕ್ಕೆ ಮಗು ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಾಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದೆ. ಅದಕ್ಕೆ ಕುಪಿತಗೊಂಡ ಆರೋಪಿ ಅಮಾನು‍ಷವಾಗಿ ಥಳಿಸಿದ್ದಾನೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿರುವುದನ್ನು ಕಾಣಬಹುದು.

ಆರೋಪಿ ಶೃಂಗಿ ನಂದನ್ ಯಾದವ್ ಸರಸ್ವತಿಯ ಅನುಯಾಯಿಯಾಗಿದ್ದು, ಬಾಲಕನ ಮೇಲೆ ಹಲ್ಲೆ ನಡೆಸಿದ್ದನ್ನು ಸೋಷಿಯಲ್ ಮೀಡಿಯಾದಲ್ಲಿ ಬಲಪಂಥೀಯ ಗುಂಪುಗಳು ಹೊಗಳಿವೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸರಸ್ವತಿ, “ಒಂದು ನಿರ್ದಿಷ್ಟ ಅಲ್ಪಸಂಖ್ಯಾತ ಸಮುದಾಯದ ಅತಿಕ್ರಮಣದಾರರಿಗೆ ಸೂಕ್ತ ಉತ್ತರವನ್ನು ನೀಡಲು ನಾನು ನನ್ನ ಅನುಯಾಯಿಗಳಿಗೆ ಉತ್ತಮ ತರಬೇತಿ ನೀಡಿದ್ದೇನೆ.  ಶುಕ್ರವಾರ (ಮಾರ್ಚ್ 12) ಅವರು ನನ್ನ ಸೂಚನೆಗಳನ್ನು ಅನುಸರಿಸಿಯೇ ಮಾಡಿದ್ದಾರೆ’ ಎಂದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಉಲ್ಲೆಖಿಸಿದೆ.

“ನಾವು ದೇವಾಲಯದ ದ್ವಾರದ ಹೊರಗೆ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಇಲ್ಲಿ ಪ್ರವೇಶಿಸಲು ಅನುಮತಿ ಇಲ್ಲ ಎಂದು ಸೂಚನಾ ಫಲಕ ಹಾಕಿದ್ದೇವೆ. ಇದು ಈ ಪ್ರದೇಶದ ಎಲ್ಲರಿಗೂ ತಿಳಿದಿದೆ. ಆದರೂ ಈ ಹುಡುಗ ನೀರು ಕುಡಿಯುವ ನೆಪದಲ್ಲಿ ಪ್ರವೇಶಿಸಿದ್ದಾನೆ” ಎಂದಿದ್ದಾರೆ.

ಪ್ರಕರಣದಲ್ಲಿ ಶೃಂಗಿ ನಂದನ್ ಯಾದವ್ ಮತ್ತು ಸರಸ್ವತಿಯ ಇನ್ನೊಬ್ಬ ಅನುಯಾಯಿಯನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕ ತನ್ನ ಮನೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಬಾಲಕನ ತಲೆ, ತೋಳು ಮತ್ತು ತೊಡೆಗೆ ಎಕ್ಸರೆ ಮಾಡಲಾಗಿದ್ದು, ಇಡೀ ರಾತ್ರಿ ನೋವಿನಿಂದ ನರಳುತ್ತಾನೆ ಎಂದು ಬಾಲಕನ ತಂದೆ ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...