ವಿಧಾನಸಭಾ ಚುನಾವಣೆಯ ಮೊದಲ ಹಂತವು ಇನ್ನೇನು 10 ದಿನಗಳಲ್ಲಿ ಪ್ರಾರಂಭವಾಗುವುದರೊಂದಿಗೆ, ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳಲ್ಲಿ ಚುನಾವಣಾ ಪ್ರಚಾರಗಳು ಬಿಸಿಯೇರುತ್ತಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಮೊದಲ ಹಂತದ ಚುನಾವಣೆ ಮಾರ್ಚ್ 27 ರಂದು ನಡೆಯಲಿದೆ; ಇದರ ನಂತರ ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಮತದಾನ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಕೇರಳದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಪಿ.ಸಿ. ಥಾಮಸ್ ನಾಯಕತ್ವದ ಕೇರಳ ಕಾಂಗ್ರೆಸ್ ಬಣವು ಬುಧವಾರ ಹೊಬಂದಿದೆ. ಈ ಬಣವು ಕಾಂಗ್ರೆಸ್ ನೇತೃತ್ವದ ಯುಡಿಎಫ್‌ನ ಭಾಗವಾಗಿರುವ ಪಿ.ಜೆ. ಜೋಸೆಫ್ ನೇತೃತ್ವದ ಬಣದೊಂದಿಗೆ ವಿಲೀನಗೊಳ್ಳುವ ನಿರೀಕ್ಷೆಯಿದೆ. ಮುಂಬರುವ ಚುನಾವಣೆಯ ಸ್ಥಾನ ಹಂಚಿಕೆಯಲ್ಲಿ ಎನ್‌ಡಿಎ ಮೈತ್ರಿಯು ತಮ್ಮ ಪಕ್ಷವನ್ನು ನಿರ್ಲಕ್ಷಿಸಲಾಗಿದೆ ಎಂದು ಥಾಮಸ್ ಆರೋಪಿಸಿದ್ದಾರೆ.
ಇದನ್ನೂ ಓದಿ: ‘ಖಂಡಿತವಾಗಿಯೂ LDF’- ಕೇರಳ ಚುನಾವಣೆಗೆ ಎಡಪಕ್ಷಗಳ ಘೋಷವಾಕ್ಯ
ಈ ಮಧ್ಯೆ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಮ್ಮ ಕ್ಷೇತ್ರದ ಧರ್ಮಡಂನಲ್ಲಿ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಎಡಪಕ್ಷಗಳು “ಖಂಡಿತವಾಗಿ, ಎಲ್‌ಡಿಎಫ್” ಎಂಬ ಘೋಷವಾಕ್ಯದ ಅಡಿಯಲ್ಲಿ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿಯ ವಿರುದ್ದ ಕಾಂಗ್ರೆಸ್ ಇನ್ನೂ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದ. ಬಿಜೆಪಿ ತನ್ನ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆಯಾದರೂ ಅವರಿನ್ನೂ ಪ್ರಚಾರಕಾರ್ಯ ಪ್ರಾರಂಭಿಸಿಲ್ಲ.
ತಮಿಳುನಾಡು ಚುನಾವಣೆಗೆ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ವಿಡುತಲೈ ಚಿರತೈಗಲ್ ಕಚ್ಚಿ (ವಿಸಿಕೆ) ಅಧ್ಯಕ್ಷ ಥೋಲ್ ತಿರುಮಾವಾಲವನ್, “ಬಿಜೆಪಿಗೆ ಯಾವುದೇ ನೆಲೆ ರಾಜ್ಯದಲ್ಲಿ ಸಿಗುವುದಿಲ್ಲ. ಇಲ್ಲಿನ ಜನ ಜೀವನದಲ್ಲಿ ಅವರಿಗೆ ಯಾವುದೆ ಪಾಲು ಸಿಗಲ್ಲ. ಅವರು ಕೇವಲ ಧರ್ಮ ಮತ್ತು ದೇವರ ಬಗ್ಗೆ ಮಾತ್ರ ಮಾತನಾಡುತ್ತಾರೆ, ಇದು ಅವರಿಗೆ ಸಹಾಯವಾಗುವುದಿಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ


