Homeಮುಖಪುಟ300 ರೈತರ ಸಾವು: ರೈತ ಹೋರಾಟದ ಇಂದಿನ ಹ್ಯಾಶ್‌ಟ್ಯಾಗ್ #300DeathsAtProtest

300 ರೈತರ ಸಾವು: ರೈತ ಹೋರಾಟದ ಇಂದಿನ ಹ್ಯಾಶ್‌ಟ್ಯಾಗ್ #300DeathsAtProtest

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ಈ ಹೋರಾಟವು 4 ನೇ ತಿಂಗಳನ್ನು ಪೂರೈಸುವತ್ತ ಸಾಗುತ್ತಿದೆ. ಆದರೆ ಇದರಲ್ಲಿ ಇದುವರೆಗೂ ಸುಮಾರು 300 ರೈತರು ಸಾವನ್ನಪ್ಪಿದ್ದಾರೆ ಎಂದು ರೈತ ಒಕ್ಕೂಟ ತಿಳಿಸಿದೆ. ಈ ಹಿನ್ನೆಲೆಯಲ್ಲಿ #300DeathsAtProtest ಹ್ಯಾಶ್‌ಟ್ಯಾಗ್‌ ಬಳಸಿ ಟ್ವೀಟ್ ಮಾಡುವಂತೆ ರೈತ ಒಕ್ಕೂಟ ಮನವಿ ಮಾಡಿದೆ. ಈ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದೆ.

ರೈತ ಹೋರಾಟದ ಇಂದಿನ ಹ್ಯಾಶ್‌ಟ್ಯಾಗ್ #300DeathsAtProtest ಅನ್ನು ಬಳಸಿ ಕಿಸಾನ್ ಏಕ್ತಾ ಮೋರ್ಚ ಟ್ವೀಟ್ ಮಾಡಿದೆ. “ಕೊರೆವ ಚಳಿಯಲ್ಲಿ ರಸ್ತೆಯಲ್ಲಿ ಕುಳಿತಿರುವುದು ಕೇಂದ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮವನ್ನುಂಟುಮಾಡಿಲ್ಲ. ಸರ್ಕಾರಕ್ಕೆ ನಾಚಿಕೆಯಾಗಬೇಕು. ಮನೆಮನೆಗೆ ಹೋಗಿ ಮತ ಕೇಳುವವರು ಹೋರಾಟ ನಿರತ ರೈತರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. 300 ಜನ ರೈತ ಹುತಾತ್ಮರನ್ನು ನೆನೆಯುವ ಸಮಯ ಇದು. ಮತ್ತು ಬಿಜೆಪಿಗೆ ಬೆಂಬಲ ನೀಡುವುದನ್ನು ನಿಲ್ಲಿಸುವ ಸಮಯ” ಎಂದು ಬರೆದುಕೊಂಡಿದೆ.

ರೈತ ಹೋರಾಟದ ಮುಖವಾಣಿಯಾಗಿರುವ ಕಿಸಾನ್ ಏಕ್ತಾ ಮೋರ್ಚಾ ಟ್ವಿಟ್ಟರ್‌, ಫೇಸ್‌ಬುಕ್‌, ಯೂಟ್ಯೂಬ್‌ಗಳಲ್ಲಿ ಪ್ರತಿದಿನವು ಒಂದೊಂದು ಹೋರಾಟದ ಹ್ಯಾಷ್‌ಟ್ಯಾಗ್‌ಗಳನ್ನು ನೀಡಲಾಗುತ್ತದೆ. ಈ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಲು ಕರೆ ನೀಡಲಾಗುತ್ತದೆ. ಅದರಂತೆ ಇಂದು #300DeathsAtProtest ಎಂಬ ಹ್ಯಾಷ್‌ಟ್ಯಾಗ್‌ ನೀಡಿದ್ದಾರೆ.

ಈ ಹ್ಯಾಶ್‌ಟ್ಯಾಗ್ ಬಳಸಿ 66,000 ಕ್ಕೂ ಹೆಚ್ಚು ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಆಮ್ ಆದ್ಮಿ ಪಕ್ಷದ ಸಾಮಾಜಿಕ ಮಾಧ್ಯಮ ವಕ್ತಾರರಾದ ಆರತಿ ಟ್ವೀಟ್ ಮಾಡಿ, ” ರೈತ ಹೋರಾಟಕ್ಕೆ 112 ದಿನಗಳು, 300 ಕ್ಕೂ ಹೆಚ್ಚು ಸಾವುಗಳು… ಆದರೆ ಪ್ರಧಾನಿ ಮೌನವಹಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ರಾಷ್ಟ್ರೀಯ ವಿದ್ಯಾರ್ಥಿಗಳ ಯೂನಿಯನ್ ಆಫ್ ಇಂಡಿಯಾ ಟ್ವೀಟ್ ಮಾಡಿ, “300ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ ನಂತರವೂ ಮೋದಿ ಸರ್ಕಾರ ನಮ್ಮ ರೈತರ ಯಾವುದೇ ಬೇಡಿಕೆಯನ್ನೂ ಸಹ ಈಡೇರಿಸಿಲ್ಲ. ಈ ಸರ್ಕಾರವು ತಮ್ಮ ಸಾಂಸ್ಥಿಕ ಪಾಲುದಾರರ ಬಗ್ಗೆ ಮಾತ್ರ ಯೋಚಿಸುತ್ತದೆ, ಅವರಿಗೆ ನಾಗರಿಕರ ಜೀವನದ ಬಗ್ಗೆ ಕಾಳಜಿಯಿಲ್ಲ” ಎಂದು ರೈತರಿಗೆ ಬೆಂಬಲ ಸೂಚಿಸಿದೆ.

ಇದನ್ನೂ ಓದಿ: ರೈತ ಹೋರಾಟ ಸರ್ಕಾರದ ವಿರುದ್ಧವೂ ಅಲ್ಲ ಕಾಂಗ್ರೆಸ್‌ನ ಪರವೂ ಅಲ್ಲ: ಚುಕ್ಕಿ ನಂಜುಂಡಸ್ವಾಮಿ

ಹೀಗೆ ಸಾವಿರಾರು ಜನ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಮಾ. 26ಕ್ಕೆ ಭಾರತ್ ಬಂದ್: ಹೋಳಿ ದಿನದಂದು ಕೃಷಿ ಕಾನೂನುಗಳ ಪ್ರತಿ ದಹನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...