ಉತ್ತರ ಪ್ರದೇಶದಲ್ಲಿ ಅಪರಾಧ ಪ್ರಕರಣಗಳು, ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ರಾಜಕೀಯ ನಾಯಕರುಗಳು ಮತ್ತು ಅವರ ಸಹಚರರ ದ್ವೇಷ ಕೊಳಕುತನಕ್ಕೆ ಅಪ್ರಾಪ್ತ ಬಾಲಕಿಯೊಬ್ಬಳು ಸಾಮೂಹಿಕ ಅತ್ಯಾಚಾರಕ್ಕೆ ಬಲಿಯಾಗಿರುವ ಘಟನೆ ವರದಿಯಾಗಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯದ ಅಭ್ಯರ್ಥಿಯ 16 ವರ್ಷದ ಬಾಲಕಿಯನ್ನು ಪ್ರತಿಸ್ಫರ್ಧಿ ಗುಂಪಿನ ನಾಲ್ವರು ಯುವಕರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಉತ್ತರ ಪ್ರದೇಶದ ಲಕ್ನೋದಿಂದ ಕೇವಲ 40 ಕಿಲೋಮೀಟರ್ ದೂರವಿರುವ ಬರಾಬಂಕಿ ಜಿಲ್ಲೆಯ ಜೈದ್‌ಪುರ ವಲಯದಲ್ಲಿ ಈ ದಾರುಣ ಘಟನೆ ನಡೆದಿದೆ.
ಬರಾಬಂಕಿ ಜಿಲ್ಲೆಯ ಜೈದ್‌ಪುರ ಪ್ರದೇಶದಿಂದ ಪಂಚಾಯಿತಿ ಅಧ್ಯಕ್ಷ ಸ್ಥಾನದಿಂದ ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಬಾಲಕಿ ತಂದೆಯನ್ನು ಒತ್ತಾಯಿಸಿದ್ದರು. ಆದರೆ ಅವರು ಹಿಂದೆ ಸರಿಯುವುದಿಲ್ಲ ಎಂದಿದ್ದರು. ಈ ಕಾರಣದಿಂದ ಅಪ್ರಾಪ್ತೆ ಕಾಲೇಜಿಗೆ ಹೋಗುವಾಗ ಪ್ರತಿಸ್ಪರ್ಧಿ ಪಕ್ಷದವರ ಸಹಚರರು ಆಕೆಯನ್ನು ಅಪಹರಿಸಿ, ಅತ್ಯಾಚಾರವೆಸಗಿದ್ದಾರೆ.
ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ
ಈ ಮೊದಲು, ಸಂತ್ರಸ್ತೆಯ ತಂದೆಗೆ ಹಣದ ಆಮಿಷ ಒಡ್ಡಿದ್ದರು. ಆದರೆ ಅವರ ಆಮಿಷಕ್ಕೆ ಮಣಿಯಲು ಅವರು ನಿರಾಕರಿಸಿದಾಗ, ಪ್ರತಿಸ್ಪರ್ಧಿಗಳು ತಕ್ಕ ಪಾಠ ಕಲಿಸುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.
ಸಾಮೂಹಿಕ ಅತ್ಯಾಚಾರದ ಬಳಿಕ, ಸಂತ್ರಸ್ತೆಯ ತಂದೆ ಸ್ಪರ್ಧೆಯಿಂದ ಹಿಂದೆ ಸರಿಯದಿದ್ದರೆ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಅಕೆಯನ್ನು ಮನೆಯ ಬಳಿ ಬಿಟ್ಟು ಹೋಗಿದ್ದಾರೆ. ಈ ಘಟನೆಯ ಬಗ್ಗೆ ಆಕೆ ತನ್ನ ಪೋಷಕರಿಗೆ ತಿಳಿಸಿದ ಬಳಿಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೈದ್‌ಪುರ ಪೊಲೀಸ್ ಠಾಣೆಯಲ್ಲಿ ಸಚಿನ್ ವರ್ಮಾ, ಲಾಲ್ಜಿ ವರ್ಮಾ, ಆಕಾಶ್ ವರ್ಮಾ ಮತ್ತು ಶಿವಂ ವರ್ಮಾ ವಿರುದ್ಧ ಎಫ್ಐಆರ್ ದಾಖಲಿಸಿಲಾಗಿದೆ. ಎಫ್ಐಆರ್‌ನಲ್ಲಿ ಹೆಸರಿಸಲಾದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಾವು ಅವರ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದೇವೆ” ಎಂದು ಬರಾಬಂಕಿ ಪೊಲೀಸ್ ಅಧೀಕ್ಷಕ ಮನೋಜ್ ಕುಮಾರ್ ಪಾಂಡೆ ಹೇಳಿದ್ದಾರೆ.
ಜೊತೆಗೆ ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರದ ಹಿಂದಿನ ಮತದಾನದ ಪೈಪೋಟಿ ಆರೋಪಗಳ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಗೋರಖ್‌ಪುರದಲ್ಲಿ ಬಿಎಸ್‌ಪಿ ಅಭ್ಯರ್ಥಿಯೊಬ್ಬರು ಚುನಾವಣಾ ಪ್ರಚಾರ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಅವರನ್ನು ಗುಂಡಿಕ್ಕಿ ಕೊಂದಿದ್ದರು. ಮೃತನಿಗೆ ಪ್ರತಿಸ್ಪರ್ಧಿಗಳು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಎಚ್ಚರಿಕೆ ನೀಡಿದ್ದರು. ಅವರು ನಿರಾಕರಿಸಿದಾಗ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.
ಇದನ್ನೂ ಓದಿ: ಉತ್ತರ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಮರಣದಂಡನೆ



ಉತ್ತರ ಪ್ರದೇಶ ಅಪರಾಧಿಗಳ ಸ್ವರ್ಗವಾಗಿದೆ.
ಉತ್ತರ ಪ್ರದೇಶದಲ್ಲಿ ಶ್ರೀ ರಾಮನಿಗೆ ದೇವಾಲಯ ಕಟ್ಟುವ ಮೊದಲು ಸ್ತ್ರೀಯರನ್ನು ಕಾಪಾಡಿ……
ಸ್ವಯಂ ಘೋಷಿತ ದೇಶ ಪ್ರೇಮಿಗಳೆ…..