Homeಮುಖಪುಟ2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

2020 ರಲ್ಲಿ ಭಾರತದ ಬಡವರ ಸಂಖ್ಯೆ ದುಪ್ಪಟ್ಟು! ಮಧ್ಯಮ ವರ್ಗದ ಸಂಖ್ಯೆಯಲ್ಲೂ ಕುಸಿತ!

- Advertisement -
- Advertisement -

ಸಾಂಕ್ರಾಮಿಕ ರೋಗ ಕೊರೊನಾ ಕಾರಣದಿಂದ ಉಂಟಾದ ಆರ್ಥಿಕ ಹಿಂಜರಿತದಿಂದಾಗಿ ಭಾರತದ ಮಧ್ಯಮ ವರ್ಗವು 2020 ರಲ್ಲಿ ಮೂರನೇ ಒಂದು ಭಾಗದಷ್ಟು ಕುಗ್ಗಿದೆ. ದೇಶದ ಬಡವರ ಸಂಖ್ಯೆ ದ್ವಿಗುಣಗೊಂಡಿದೆ ಎಂದು ವಾಷಿಂಗ್ಟನ್ ಮೂಲದ ಪ್ಯೂ ರಿಸರ್ಚ್ ಸಂಸ್ಥೆಯ ವರದಿ ತಿಳಿಸಿದೆ ಎಂದು ಟೆಲಿಗ್ರಾಫ್ ಆನ್‌ಲೈನ್ ವರದಿ ಮಾಡಿದೆ.

ವಾಷಿಂಗ್ಟನ್ ಮೂಲದ ಎನ್‌ಜಿಒ ಪ್ಯೂ ರಿಸರ್ಚ್ ಗುರುವಾರ ಬಿಡುಗಡೆ ಮಾಡಿರುವ ತನ್ನ ವರದಿಯಲ್ಲಿ ಕೊರೊನಾ ಸಾಂಕ್ರಾಮಿಕದಿಂದಾಗಿ ಆರ್ಥಿಕ ಹಿಂಜರಿತ ಹೆಚ್ಚಾಗಿದ್ದು ಬಡವರ ಸಂಖ್ಯೆಗೆ ದುಪ್ಪಟ್ಟುಗೊಳ್ಳಲು ಕಾರಣ ಎಂದು ಉಲ್ಲೇಖಿಸಿದೆ.

ಆರ್ಥಿಕ ಕುಸಿತದ ಪರಿಣಾಮವಾಗಿ, ಭಾರತದ ಮಧ್ಯಮ ವರ್ಗವು ಯಾವುದೇ ಸಾಂಕ್ರಾಮಿಕ ರೋಗಗಳಿಲ್ಲದಿದ್ದರೆ ಅದು ತಲುಪಬಹುದಾದ ಸಂಖ್ಯೆಯಿಂದ 32 ಮಿಲಿಯನ್ಂತಲೂ ಕಡಿಮೆಯಾಗಿದೆ (ದೈನಂದಿನ ಆದಾಯವು 725 ರಿಂದ 1,450 ರೂಪಾಯಿ ಇರುವ ವರ್ಗ).

ಸಾಂಕ್ರಾಮಿಕ ರೋಗದ ಮೊದಲು, 2020 ರಲ್ಲಿ ಭಾರತದಲ್ಲಿ 99 ಮಿಲಿಯನ್ ಜನರು ಮಧ್ಯಮ ವರ್ಗಕ್ಕೆ ಸೇರಿದವರು ಎಂದು ಅಂದಾಜಿಸಲಾಗಿದೆ. ಪ್ಯೂ ವರದಿ ಪ್ರಕಾರ, ಈ ಸಂಖ್ಯೆ ಈಗ 66 ಮಿಲಿಯನ್ ಹತ್ತಿರದಲ್ಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ಕೊರೊನಾ ಪ್ರೇರಿತ ಆರ್ಥಿಕ ಹಿಂಜರಿತದಿಂದಾಗಿ ಭಾರತದಲ್ಲಿ ಬಡವರ ಸಂಖ್ಯೆ (ದೈನಂದಿನ ಆದಾಯ 145 ರೂ. ಅಥವಾ ಅದಕ್ಕಿಂತ ಕಡಿಮೆ) 75 ಮಿಲಿಯನ್‌ಗೆ ಏರಿಕೆಯಾಗಿದೆ ಎಂದು ಅಂದಾಜಿಸಲಾಗಿದೆ. ಇದು ಬಡತನದ ಜಾಗತಿಕ ಹೆಚ್ಚಳದ ಶೇಕಡಾ 60 ರಷ್ಟಿದೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸಕ್ಕೆ ಬೇಡಿಕೆ ಈಗ ಎಂದಿಗಿಂತ ಹೆಚ್ಚಾಗಿದೆ ಎಂದು ವರದಿ ಹೇಳುತ್ತದೆ. ಭಾರತದಲ್ಲಿ ಬಡವರ ಸಂಖ್ಯೆ 134 ಮಿಲಿಯನ್ ತಲುಪುವ ನಿರೀಕ್ಷೆಯಿದೆ. ಇದು ಆರ್ಥಿಕ ಹಿಂಜರಿತದ ಮೊದಲು ಅಂದಾಜು ಮಾಡಲಾದ 59 ದಶಲಕ್ಷಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ ಎಮದು ವರದಿ ತಿಳಿಸಿದೆ.

ಭಾರತ ಮತ್ತು ಚೀನಾ ಒಟ್ಟಾಗಿ ವಿಶ್ವದ ಜನಸಂಖ್ಯೆಯ ಮೂರನೇ ಒಂದು ಭಾಗವನ್ನು ಹೊಂದಿರುವುದರಿಂದ, ಪ್ಯೂ ರಿಸರ್ಚ್ ಎರಡೂ ದೇಶಗಳನ್ನು ಒಟ್ಟಿಗೆ ಅಧ್ಯಯನ ಮಾಡಿದೆ. ಭಾರತವು ಆಳವಾದ ಆರ್ಥಿಕ ಹಿಂಜರಿತದಲ್ಲಿ ಮುಳುಗಿತು. ಆದರೆ ಚೀನಾವು ಆರ್ಥಿಕ ಸಂಕುಚಿತತೆಯನ್ನು ತಡೆಯಲು ಸಾಧ್ಯವಾಯಿತು ಎಂದು ವರದಿ ವಿವರಿಸಿದೆ.

ಸಾಂಕ್ರಾಮಿಕ ರೋಗದ ಮೊದಲು, ವಿಶ್ವಬ್ಯಾಂಕ್ 2020 ರಲ್ಲಿ ಭಾರತದಲ್ಲಿ ನೈಜ ಜಿಡಿಪಿಯಲ್ಲಿ (ಶೇ. 5.8) ಮತ್ತು ಚೀನಾದಲ್ಲಿ (ಶೇ. 5.9) ಬಹುತೇಕ ಸಮಾನ ಬೆಳವಣಿಗೆಯನ್ನು ಅಂದಾಜಿಸಿತ್ತು.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...