Homeಮುಖಪುಟಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

- Advertisement -
- Advertisement -

ಇಂದು ದೇಶದ ಬಡವರ ಹಸಿವಿನ ಮೇಲೆ ವ್ಯಾಪಾರ ನಡೆಯುತ್ತಿದೆ. ದೊಡ್ಡ ಬಂಡವಾಳಶಾಹಿಗಳು ರೈತರ ರೊಟ್ಟಿ, ಅನ್ನವನ್ನು ತಮ್ಮ ತಿಜೋರಿಗಳಲ್ಲಿ ಬಂಧಿಸಿಡಲು ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಅವಕಾಶ ಕೊಡಬಾರದು, ಅದಕ್ಕಾಗಿ ರೈತ ಹೋರಾಟ ತೀವ್ರಗೊಳಿಸಬೇಕು ಎಂದು ಬಿಕೆಯು ವಕ್ತಾರ, ರೈತ ಹೋರಾಟಗಾರ ರಾಕೇಶ್ ಟಕಾಯತ್ ಕರೆ ನೀಡಿದರು.

ಶಿವಮೊಗ್ಗದಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ ಅವರು, “ಇದು ನಂಜುಂಡಸ್ವಾಮಿ ಮತ್ತು ಮಹೇಂದ್ರ ಸಿಂಗ್ ಟಿಕಾಯತ್‌ರಂತಹ ನೂರಾರು ಹೋರಾಟಗಾರರ ಕರ್ಮಭೂಮಿ. ಇಪ್ಪತ್ತೈದು ವರ್ಷಗಳ ಹಿಂದೆ ಇದೇ ಮೈದಾನದಲ್ಲಿ ಸಭೆ ನಡೆದಿತ್ತು. ಇಂದು ದೆಹಲಿಯಲ್ಲಿ ಎಲ್ಲಾ ಗಡಿಗಳಲ್ಲಿ ಹೋರಾಟ ನಡೆಯುತ್ತಿದೆ. ಇದು ದೀರ್ಘ ಹೋರಾಟವಾಗಿದೆ. ಇದು ಬೇಗ ಮುಗಿಯುವುದಿಲ್ಲ. ಕರಾಳ ಕಾನೂನುಗಳು ವಾಪಸ್ ಆಗುವವರೆಗೂ ನಿಲ್ಲುವುದಿಲ್ಲ. ಇದು ಕರ್ನಾಟಕದಲ್ಲಿಯೂ ದೊಡ್ಡ ಮಟ್ಟದಲ್ಲಿಯೂ ನಡೆಯುತ್ತದೆ. ರೈತ ಸಂಘ ಮತ್ತು ದಲಿತ ಸಂಘರ್ಷ ಸಮಿತಿ ಈ ಹೋರಾಟವನ್ನು ಮುಂದುವರೆಸಬೇಕೆಂದು ಮನವಿ ಮಾಡುತ್ತೇನೆ” ಎಂದರು.

ಸರ್ಕಾರ ರೈತರನ್ನು ಮೋಸ ಮಾಡಲು ಯತ್ನಿಸುತ್ತಿದೆ. ಸರ್ಕಾರ ರೈತರ ಹಾಲು, ಬೀಜ, ವಿದ್ಯುತ್ ಭೂಮಿಯನ್ನು ಕಿತ್ತುಕೊಳ್ಳುವ ಹುನ್ನಾರ ನಡೆಯುತ್ತಿದೆ. ದೊಡ್ಡ ಕಂಪನಿಗಳು ಬಂದು ನಿಮ್ಮ ಜಮೀನನ್ನು ಗುತ್ತಿಗೆಗೆ ಪಡೆದು ಕೃಷಿ ಮಾಡುತ್ತವೆ. ಕಿಸಾನ್ ಕ್ರೆಡಿಟ್ ಕಾರ್ಡ್ ಎಂಬ ಸಾಲ ಕೊಡುತ್ತಾರೆ. ರೈತರ ಬೆಳೆಗೆ ಬೆಲೆ ಸಿಗದೆ ಸಾಲ ವಾಪಸ್ ಮಾಡದಿದ್ದರೆ ಅವರ ಭೂಮಿ ಕಿತ್ತುಕೊಳ್ಳುತ್ತಾರೆ. ರೈತ ತನ್ನದೇ ಜಮೀನಿನಲ್ಲಿ ಜೀತ ಮಾಡುವ ಕಾಲಬರಲಿದೆ. ಅದನ್ನು ತಡೆಯಲು ನಮ್ಮ ಹೋರಾಟ ನಡೆಯುತ್ತಿದೆ ಎಂದರು.

10 ವರ್ಷದ ಹಿಂದಿನ ಟ್ರ್ಯಾಕ್ಟರ್ ಬಳಸಬಾರದು ಎಂದು ಸರ್ಕಾರ ಹೊಸ ಕಾನೂನು ತಂದಿದೆ. ದೆಹಲಿಯಲ್ಲಿ ಇಂದಿಗೂ 25-30 ಸಾವಿರ ಟ್ರ್ಯಾಕ್ಟರ್‌ಗಳು ಹೋರಾಟದಲ್ಲಿವೆ. ರೈತರು ಪದೇ ಪದೇ ಹೊಸ ವಾಹನ ಖರೀದಿಸಲು ಸಾಧ್ಯವೇ? ಅಲ್ಲದೆ ಸರ್ಕಾರ 26 ಸರ್ಕಾರಿ ಕಂಪನಿಗಳನ್ನು ಮಾರಲು ಸರ್ಕಾರ ಹೊರಟಿದೆ. ಇದು ಬಹಳ ಅಪಾಯಕಾರಿ. ಅವನ್ನು ನಾವು ಉಳಿಸಿಕೊಳ್ಳಬೇಕು. ದೆಹಲಿ ಮಾದರಿಯಲ್ಲಿ ಬೆಂಗಳೂರನ್ನು ನಾಲ್ಕು ದಿಕ್ಕುಗಳಲ್ಲಿ ಸುತ್ತುವರೆಯಿರಿ. ಹೋರಾಟ ಮುನ್ನಡೆಸಿ ಎಂದು ಕರೆ ನೀಡಿದರು.

ಯುವಜನರನ್ನು ಭೂಮಿ ಜೊತೆ ಬೆಸೆಯುವ ಕೆಲಸ ಮಾಡಬೇಕು. ಅವರು ಮಣ್ಣನ್ನು ಮೈಗಂಟಿಸಿಕೊಳ್ಳಬೇಕು. ಅವರು ತಮ್ಮ ಭೂಮಿಯ ಮಣ್ಣನ್ನು ಕೈಲಿಡಿದು ರೈತ ಹೋರಾಟಕ್ಕೆ ಬರಬೇಕು. ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾತನಾಡಿದರೆ ಏನಾಗುತ್ತದೆ ಎಂದು ಸರ್ಕಾರ ಯೋಚಿಸಬೇಕು. ಯುವಜನರು ರೊಚ್ಚಿಗೇಳುವ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಬೇರೆ ಸರ್ಕಾರವಾಗಿದ್ದರೆ ಎಚ್ಚೆತ್ತುಕೊಳ್ಳುತ್ತಿತ್ತು. ಆದರೆ ಈ ಸರ್ಕಾರವನ್ನು ಕಾರ್ಪೊರೇಟ್ ಕುಳಗಳೇ ನಡೆಸುತ್ತಿದ್ದಾರೆ. ಅದನ್ನು ಕಿತ್ತೊಗೆಯುವ ಕೆಲಸ ನಮ್ಮದು ಎಂದರು.

ಸರ್ಕಾರ ದ್ವಂದ್ವ ನೀತಿಯನ್ನು ಅಳವಡಿಸುತ್ತಿದೆ. ಸರ್ಕಾರಿ ನೌಕರರ ಪಿಂಚಣಿ ಕಿತ್ತುಕೊಂಡು ಎಂಪಿ ಎಮ್ಮೆಲ್ಲೆಗಳಿಗೆ ಸೌಲಭ್ಯಗಳನ್ನು ನೀಡುತ್ತಿದೆ. ಪೊಲೀಸರನ್ನು ಸರ್ಕಾರ ಶೋಷಿಸುತ್ತಿದೆ. ರೈತರ ಬೆಳೆಗಳಿಗೆ ಬೆಲೆ ನಿಗಧಿಪಡಿಸಬೇಕಾದವರು ಸರ್ಕಾರವಲ್ಲ, ಬದಲಿಗೆ ರೈತರು. ಆ ದಿನ ಬರುವಂತೆ ಹೋರಾಡೋಣ. ಯಾವಾಗ ಜೈರಾಮ್ ಮತ್ತು ಜೈಭೀಮ್ ಎಂಬ ಎರಡು ಘೋಷಣೆಗಳು ಒಟ್ಟಿಗೆ ಮೊಳಗುತ್ತವೆಯೊ ಆಗ ಜಯ ನಮ್ಮದು. ಅದಕ್ಕೆ ಕಾರ್ಮಿಕರು ಜೊತೆಗೂಡಬೇಕು ಎಂದರು.


ಇದನ್ನೂ ಓದಿ: ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...