Homeಮುಖಪುಟಹತ್ರಾಸ್ ಪ್ರಕರಣ: ಸಂತ್ರಸ್ತ ಕುಟುಂಬ ಮತ್ತು ವಕೀಲರಿಗೆ ನ್ಯಾಯಾಲಯದಲ್ಲೇ ಬೆದರಿಕೆ!

ಹತ್ರಾಸ್ ಪ್ರಕರಣ: ಸಂತ್ರಸ್ತ ಕುಟುಂಬ ಮತ್ತು ವಕೀಲರಿಗೆ ನ್ಯಾಯಾಲಯದಲ್ಲೇ ಬೆದರಿಕೆ!

- Advertisement -
- Advertisement -

ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದ್ದ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೇಲ್ವಿಚಾರಣೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ನ್ಯಾಯಪೀಠ ನಡೆಸುತ್ತಿದೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯಾಲಯದಲ್ಲೇ ಬೆದರಿಕೆ ಹಿನ್ನೆಲೆ, ಸದ್ಯ ಪ್ರಕರಣದ ವಿಚಾರಣೆಯನ್ನು ಪಶ್ಚಿಮ ಯುಪಿ ಜಿಲ್ಲೆಯಿಂದ ಸ್ಥಳಾಂತರಿಸುವ ಬಗ್ಗೆ ಯೋಚಿಸುವುದಾಗಿ ನ್ಯಾಯಪೀಠ ಹೇಳಿದೆ.

ಈ ತಿಂಗಳ ಆರಂಭದಲ್ಲಿ ಹತ್ರಾಸ್ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ವೇಳೆ ಕುಟುಂಬ ಮತ್ತು ಅವರ ವಕೀಲರಿಗೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ಸಹೋದರ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಬೇರೆಡೆಗೆ ಸ್ಥಳಾಂತರಿಸುವ ಕುರಿತು ಕ್ರಮ ಕೈಗೊಳ್ಳುವುದಾಗಿ ನ್ಯಾಯಾಲಯ ತಿಳಿಸಿದೆ.

ಅಲಹಾಬಾದ್ ಹೈಕೋರ್ಟ್‌ನ ಮುಂದೆ ನೀಡಿದ ಅಫಿಡವಿಟ್‌ನಲ್ಲಿ, ಮಾರ್ಚ್ 5 ರಂದು ಹತ್ರಾಸ್ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ವೇಳೆ ಈ ಘಟನೆ ನಡೆದಿದೆ ಎಂದು ಸಂತ್ರಸ್ತೆಯ ಸಹೋದರ ಆರೋಪಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ: ಸಿಎಎ ವಿರೋಧಿ ಮಹಿಳಾ ನಾಯಕಿಯರಿಗೆ ನೋಟಿಸ್!

ಹೈಕೋರ್ಟ್‌ನ ಇಬ್ಬರು ನ್ಯಾಯಾಧೀಶರ ಪೀಠವು ಆಪಾದಿತ ಘಟನೆಯ ವರದಿಯನ್ನು ಕೋರಿದ್ದಾರೆ. ವರದಿ ಬಳಿಕ ವಿಚಾರಣೆಯನ್ನು ತಡೆಹಿಡಿಯಬೇಕೇ ಮತ್ತು ಬೇರೆಡೆಗೆ ವರ್ಗಾಯಿಸಬೇಕೇ ಎಂದು ಪರಿಗಣಿಸುವುದಾಗಿ ಹೇಳಿದರು. “ವಿಚಾರಣೆಯನ್ನು ಜಿಲ್ಲಾ ಹತ್ರಾಸ್‌ನಿಂದ ರಾಜ್ಯದೊಳಕ್ಕೆ ಬೇರೆಡೆಗೆ ವರ್ಗಾಯಿಸಲು” ಸಿಬಿಐ ಅರ್ಜಿಯನ್ನು ಸಲ್ಲಿಸಲು ಉದ್ದೇಶಿಸಿದೆ ಎಂದು ನ್ಯಾಯಪೀಠ ತಿಳಿಸಿದೆ.

ನ್ಯಾಯಾಲಯವು ತನ್ನ ಆದೇಶದಲ್ಲಿ ಈ ಅಫಿಡವಿಟ್‌ನ ವಿಷಯಗಳನ್ನು ವಿವರವಾಗಿ ವಿವರಿಸಿದೆ. ಇದರಲ್ಲಿ ಸಂತ್ರಸ್ತೆಯ ಕುಟುಂಬದ ಪ್ರಮುಖ ಸಲಹೆಗಾರದ ಸೀಮಾ ಕುಶ್ವಾಹಾ  ಬೆದರಿಕೆ ಹಾಕಲಾಗಿದೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ ಎಂದು ತಿಳಿಸಿದೆ.

“ತರುಣ್ ಹರಿ ಶರ್ಮಾ ಎಂಬ ವಕೀಲರು ನ್ಯಾಯಾಲಯದ ಕೋಣೆಗೆ ನುಗ್ಗಿ ಅರ್ಜಿದಾರರ ಮತ್ತು ದೂರುದಾರರ ಪರ ವಕೀಲರ ಮೇಲೆ ಆರೋಪ ಹೊರಿಸಿ, ಕೂಗುತ್ತಾ ಮತ್ತು ಬೆದರಿಕೆ ಹಾಕಿದ್ದಾನೆ. ಹಾಗಾಗಿ ಹತ್ರಾಸ್ ಜಿಲ್ಲಾ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರು ವಿಚಾರಣೆ ನಿಲ್ಲಿಸಿದ್ದಾರೆ” ಎಂದು ಅಫಿಡವಿಟ್ನಲ್ಲಿ ತಿಳಿಸಲಾಗಿದೆ. ಜೊತೆಗೆ ಆ ವ್ಯಕ್ತಿ ಮದ್ಯದ ಪ್ರಭಾವಕ್ಕೆ ಒಳಗಾಗಿದ್ದಾನೆ ಎಂಬುದು ಸ್ಪಷ್ಟವಾಗಿದೆ” ಎಂದು ಹೇಳಿದೆ.

“ವಕೀಲರು ಸೇರಿದಂತೆ ಜನರ ದೊಡ್ಡ ಗುಂಪು ನ್ಯಾಯಾಲಯದ ಕೋಣೆಗೆ ಪ್ರವೇಶಿಸಿ ಅರ್ಜಿದಾರರನ್ನು ಮತ್ತು ದೂರುದಾರರ ಸಲಹೆಗಾರರನ್ನು ಸುತ್ತುವರಿದು ಅವರಿಗೆ ಬೆದರಿಕೆ ಹಾಕಿದೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಅಲಹಾಬಾದ್ ಹೈಕೋರ್ಟ್ ಈ ಪ್ರಕರಣವನ್ನು ಏಪ್ರಿಲ್ 7 ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ. “ಯಾವುದೇ ಅಡೆತಡೆಗಳಿಲ್ಲದೆ ವಿಚಾರಣೆಯನ್ನು ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ನ್ಯಾಯಾಲಯದ ಮುಂದೆ ನಡೆಸಲು ಅವಕಾಶವಿದೆಯೇ” ಎಂದು ಖಚಿತಪಡಿಸಿಕೊಳ್ಳಲು ಹತ್ರಾಸ್ ಜಿಲ್ಲಾ ನ್ಯಾಯಾಧೀಶರನ್ನು ಕೇಳಿದೆ.

ಸೆಪ್ಟೆಂಬರ್ 14 ರಂದು ಹತ್ರಾಸ್‌ನಲ್ಲಿ ಮೇಲ್ಜಾತಿ ಸಮುದಾಯದವರು ಎಂದು ಕರೆಯಲ್ಪಡುವ ನಾಲ್ವರು ವ್ಯಕ್ತಿಗಳು, ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದರು. ಸಂತ್ರಸ್ತೆ ಅಂತ್ಯಸಂಸ್ಕಾರವನ್ನು ಪೊಲೀಸರು ಸಂತ್ರಸ್ತ ಕುಟುಂಬದ ಒಪ್ಪಿಗೆ ಇಲ್ಲದೇ ಸೆಪ್ಟೆಂಬರ್ 30 ರಂದು ತನ್ನ ಮನೆಯ ಬಳಿ ಅಂತ್ಯಕ್ರಿಯೆ ಮಾಡಲಾಯಿತು ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ಹತ್ರಾಸ್: ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆಗೈದಿದ್ದಾರೆ ಎಂದು ಸಿಬಿಐ ಚಾರ್ಜ್‌ಶೀಟ್‌ – ವಕೀಲರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...