Homeಕರೋನಾ ತಲ್ಲಣಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

ಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

- Advertisement -
- Advertisement -

ಕಳೆದ ಕೆಲವು ವಾರಗಳಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ, ಕುಂಭಮೇಳದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಭಾನುವಾರ ಉತ್ತರಾಖಂಡ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕುಂಭಮೇಳದ ಸಂದರ್ಭದಲ್ಲಿ ದೇಶಾದ್ಯಂತದ ಯಾತ್ರಾರ್ಥಿಗಳು ಉತ್ತರಾಖಂಡಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ತಿಳಿಸಿದೆ, ಕುಂಭಮೇಳದಲ್ಲಿ ವೈದ್ಯಕೀಯ ಆರೈಕೆ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಗಳನ್ನು ಪರಿಶೀಲಿಸಲು ಹೋಗಿದ್ದ ಉನ್ನತ ಮಟ್ಟದ ತಂಡವು ಕಳವಳ ವ್ಯಕ್ತಪಡಿಸಿದ ನಂತರ ಕೇಂದ್ರ ಈ ಕ್ರಮ ಕೈಗೊಂಡಿದೆ.

“ಕೇಂದ್ರ ತಂಡದ ವರದಿಯ ಪ್ರಕಾರ, ಪ್ರತಿದಿನ 10-20 ಯಾತ್ರಿಕರು ಮತ್ತು 10-20 ಸ್ಥಳೀಯರು ಕೊರೊನಾ ಸೋಂಕಿತರಾಗುತ್ತಿದ್ದಾರೆ ಎಂದು ವರದಿಯಾಗುತ್ತಿದೆ ಎಂದು ಕಾರ್ಯದರ್ಶಿ ತಿಳಿಸಿದ್ದಾರೆ. ಈ ಸೋಂಕಿತರ ಪ್ರಮಾಣವು ಕುಂಭಮೇಳದಲ್ಲಿ ಅತೀ ವೇಗವಾಗಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸಚಿವಾಲಯ ತಿಳಿಸಿದೆ.

ತಂಡದ ವರದಿ ಆಧಾರದ ಮೇಲೆ, ಯಾತ್ರಾರ್ಥಿಗಳು ಮತ್ತು ಸ್ಥಳೀಯ ಜನಸಂಖ್ಯೆಯನ್ನು ಸೂಕ್ತವಾಗಿ ಪರೀಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಐಸಿಎಂಆರ್ ಮಾರ್ಗಸೂಚಿಗಳ ಪ್ರಕಾರ ಕೊರೊನಾ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಲು ಉತ್ತರಾಖಂಡವನ್ನು ಕೋರಲಾಗಿದೆ ಎಂದು ಆರೋಗ್ಯ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಲಸಿಕೆ ಪಡೆದ ಎರಡೇ ದಿನದಲ್ಲಿ ಕೊರೊನಾ ಪಾಸಿಟಿವ್‌ ಆದ ಪಾಕಿಸ್ತಾನ ಪ್ರಧಾನಿ

ಕುಂಭಮೇಳದಲ್ಲಿ ಶುಭ ಸ್ನಾನದ ಮೊದಲು ಮತ್ತು ನಂತರ ಫ್ರಂಟ್ ಲೈನ್ ಕಾರ್ಯಕರ್ತರಿಗೆ ನಿಯಮಿತ ಕೊರೊನಾ ಪರೀಕ್ಷೆ, ಹೆಚ್ಚಿನ ಜನನಿಭೀಡ ಪ್ರದೇಶಗಳಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಉತ್ತರಾಖಂಡ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ಪ್ರಸ್ತುತ ಭಾರತದಲ್ಲಿ 12 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕುಂಭಮೇಳದಲ್ಲಿ ಈ ರಾಜ್ಯಗಳಿಂದಲೂ ಹರಿದ್ವಾರಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿರಬಹುದು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

“ಕುಂಭಮೇಳದಲ್ಲಿ ಶುಭ ಶಾಹಿ ಸ್ನಾನದ ದಿನಗಳ ನಂತರ ಸ್ಥಳೀಯ ಜನಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಗಮನಿಸಲಾಗಿದೆ” ಎಂದು ಆರೋಗ್ಯ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಹರಿದ್ವಾರದಲ್ಲಿ ಪ್ರತಿದಿನ 50,000 ರಾಪಿಡ್ ಆಂಟಿಜೆನ್ ಪರೀಕ್ಷೆಗಳು ಮತ್ತು 5,000 ಆರ್‌ಟಿಪಿಸಿಆರ್ ಪರೀಕ್ಷೆಗಳು ನಡೆಸಲಾಗುತ್ತಿದ್ದು, ಕುಂಭಮೇಳದಲ್ಲಿ ಅಪಾರ ಸಂಖ್ಯೆಯ ಯಾತ್ರಾರ್ಥಿಗಳು ಬರುವ ನಿರೀಕ್ಷೆ ಇರುವುದರಿಂದ ಇದು ಸಾಕಾಗುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಲಾಗಿದೆ. ಪ್ರಸ್ತುತ ಯಾತ್ರಾರ್ಥಿಗಳು ಮತ್ತು ಸ್ಥಳೀಯ ಜನಸಂಖ್ಯೆಯನ್ನು ಸೂಕ್ತವಾಗಿ ಪರೀಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಐಸಿಎಂಆರ್ ಮಾರ್ಗಸೂಚಿಗಳ ಪ್ರಕಾರ ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ಗಮನಾರ್ಹವಾಗಿ ಹೆಚ್ಚಿಸುವ ಅಗತ್ಯವಿದೆ ಎಂದು ಸಚಿವಾಲಯದ  ಟಿಪ್ಪಣಿ ತಿಳಿಸಿದೆ.


ಇದನ್ನೂ ಓದಿ: ಕೇಂದ್ರ ಅನುಮತಿಸಿದರೆ, ದೆಹಲಿಯ ಎಲ್ಲರಿಗೂ 3 ತಿಂಗಳಲ್ಲಿ ಕೊರೊನಾ ಲಸಿಕೆ – ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...