Homeಚಳವಳಿಭಗತ್ ಸಿಂಗ್ ಹುತಾತ್ಮ ದಿನ: ದೆಹಲಿಯ ಗಡಿಗಳಲ್ಲಿ ನೆರೆಯಲಿದ್ದಾರೆ ಯುವಜನರ ದಂಡು!

ಭಗತ್ ಸಿಂಗ್ ಹುತಾತ್ಮ ದಿನ: ದೆಹಲಿಯ ಗಡಿಗಳಲ್ಲಿ ನೆರೆಯಲಿದ್ದಾರೆ ಯುವಜನರ ದಂಡು!

- Advertisement -
- Advertisement -

ಮಂಗಳವಾರ (ಮಾರ್ಚ್ 23) ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖದೇವ್ ಅವರ ಹುತಾತ್ಮ ದಿನದಂದು ರೈತ ಹೋರಾಟ ನಡೆಯುತ್ತಿರುವ ದೆಹಲಿಯ ಗಡಿಗಳಲ್ಲಿ ಯುವಜನರ ಬೃಹತ್ ಸಮಾವೇಶಗಳು ನಡೆಯಲಿವೆ. ದೇಶದಾದ್ಯಂತದ ಯುವಜನರು ದೆಹಲಿಯ ಪ್ರತಿಭಟನಾ ಸ್ಥಳಗಳನ್ನು ತಲುಪುತ್ತಿದ್ದು, ಬೆಳಿಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸಮಾವೇಶಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಪ್ರಸ್ತುತಪಡಿಸಲಾಗುವುದು, ಅಲ್ಲಿ ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖದೇವ್ ಅವರ ವಿಚಾರಗಳನ್ನು ಪ್ರಸ್ತುತ ಪಡಿಸಲಾಗುವುದು. ಈ ಹುತಾತ್ಮ ದಿನವನ್ನು ರೈತರಿಗೆ ಸಮರ್ಪಿಸಲಾಗುವುದು, ಇದರಲ್ಲಿ ರೈತರು ಮತ್ತು ಕಾರ್ಮಿಕರ ಶೋಷಣೆಯ ಬಗ್ಗೆ ಭಗತ್ ಸಿಂಗ್ ಅವರ ಅಭಿಪ್ರಾಯಗಳನ್ನು ತೋರಿಸಲಾಗುವುದು ಮತ್ತು ಆಂದೋಲನವನ್ನು ಮತ್ತಷ್ಟು ಬಲಪಡಿಸಲಾಗುತ್ತದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಖಟ್ಕಾಡ್ ಕಲನ್, ಹಿಸಾರ್ ಮತ್ತು ಮಥುರಾದಿಂದ ಪಾದ ಯಾತ್ರೆಗಳು ದೆಹಲಿಯ ಗಡಿಯನ್ನು ತಲುಪುತ್ತಿವೆ. ಈ ಯಾತ್ರೆಗಳಿಗೆ ಭಾರಿ ಸಾರ್ವಜನಿಕ ಬೆಂಬಲ ಸಿಗುತ್ತಿದೆ. ಮಾರ್ಚ್ 26 ರ ಸಂಪೂರ್ಣ ಭಾರತ್ ಬಂದ್ ಸಂದೇಶಗಳನ್ನು ಈ ಯಾತ್ರೆಗಳ ಮೂಲಕ ಸಾರ್ವಜನಿಕರಿಗೆ ರವಾನಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ‘ಬಾಂಬೆ ತಂಡ’ದ ಶಾಸಕರ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ: ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

ಬಿಜೆಪಿ ಸರ್ಕಾರ ತನ್ನ ವೈಫಲ್ಯವನ್ನು ರೈತರ ಮೇಲೆ ಹೇರಲು ಬಯಸುತ್ತಿದೆ. ವಾಸ್ತವವಾಗಿ, ರೈತರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಬದಲು, ಅನಾನುಕೂಲತೆಯನ್ನು ಸೃಷ್ಟಿಸಿ ರೈತರನ್ನು ದೂಷಿಸುತ್ತಿದ್ದಾರೆ. ಸಂಧಾನ ಮಾತುಕತೆಯನ್ನು ರೈತರು ನಿಗದಿಪಡಿಸಬೇಕು ಎಂದು ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ. ರೈತ ಮುಖಂಡರು ಮಾತುಕತೆಗೆ ಸಂಪೂರ್ಣವಾಗಿ ಸಿದ್ಧರಾಗಿದ್ದಾರೆ. ಆದರೆ, ಸರಿಯಾದ ವಾತಾವರಣದಲ್ಲಿ ಸಂವಾದದ ಪ್ರಸ್ತಾಪವನ್ನು ಸರ್ಕಾರ ಕಳುಹಿಸಬೇಕು ಎಂದು ನಾವು ಮತ್ತೆ ಸ್ಪಷ್ಟಪಡಿಸುತ್ತೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಕರ್ನಾಟಕದ ರಾಜಧಾನಿಯಾದ ಬೆಂಗಳೂರಿನಲ್ಲಿ ವಿಧಾನಸೌಧ ಚಲೋ ರ್‍ಯಾಲಿ ನಡೆದಿದೆ, ಇದರಲ್ಲಿ ಸಮುಕ್ತ ಕಿಸಾನ್ ಮೋರ್ಚಾದ ನಾಯಕರು ಭಾಗವಹಿಸಿದ್ದರು. ರಾಜ್ಯದ ಕೃಷಿ ಸಚಿವರು ರೈತರನ್ನು ಭೇಟಿಯಾಗಿ ಅವರಿಂದ ಮನವಿ ಪತ್ರವನ್ನು ಸ್ವೀಕರಿಸಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಎಸ್‌ಕೆಎಂ ತಿಳಿಸಿದೆ.

ಸೋಮವಾರ ನಡೆದ ವಿಧಾನಸೌಧ ಚಲೋ ರ್‍ಯಾಲಿಯಲ್ಲಿ, ದೆಹಲಿಯ ರೈತ ಹೋರಾಟ ಮುನ್ನಡೆಸುತ್ತಿರುವ  ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಕಾರ್ಯದರ್ಶಿ ಯುದುವೀರ್ ಸಿಂಗ್, ಸಂಯುಕ್ತ ಕಿಸಾನ್ ಮೋರ್ಚಾದ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಕುಲ್‌ಬೀರ್‌ ಸಿಂಗ್, ರಾಜ್ಯದ ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್, ನಟ ಚೇತನ್ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...