Homeಮುಖಪುಟಬಂಗಾಳ: ರ್‍ಯಾಲಿಗಳಲ್ಲಿ ಮಾಸ್ಕ್, ದೈಹಿಕ ಅಂತರ ಕಡ್ಡಾಯಗೊಳಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ

ಬಂಗಾಳ: ರ್‍ಯಾಲಿಗಳಲ್ಲಿ ಮಾಸ್ಕ್, ದೈಹಿಕ ಅಂತರ ಕಡ್ಡಾಯಗೊಳಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ

- Advertisement -
- Advertisement -

ಕೊರೊನಾ ಎರಡನೇ ಅಲೆಯ ಬಗ್ಗೆ ಆರೋಗ್ಯ ತಜ್ಞರಿಂದ ಎಚ್ಚರಿಸಿರುವ ಪಶ್ಚಿಮ ಬಂಗಾಳ ಸರ್ಕಾರ ರಾಜಕೀಯ ರ್‍ಯಾಲಿಗಳಲ್ಲಿ ಮಾಸ್ಕ್‌‌ ಧರಿಸಲು ಮತ್ತು ದೈಹಿಕ ಅಂತರವನ್ನು ಕಡ್ಡಾಯಗೊಳಿಸುವಂತೆ ಎಲ್ಲಾ ಜಿಲ್ಲಾ ಆಡಳಿತಗಳಿಗೆ ಸೋಮವಾರ ನಿರ್ದೇಶನ ನೀಡಿದೆ.

ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ, ಜಿಲ್ಲಾ ನ್ಯಾಯಾಧೀಶರು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ, ಬಂಗಾಳದ ಕೊರೊನಾ ಪರಿಸ್ಥಿತಿಯ ಬಗ್ಗೆ ಮತ್ತು ಚುನಾವಣೆಯ ಮಧ್ಯೆ ಅದರ ಹರಡುವಿಕೆಯನ್ನು ನಿಯಂತ್ರಿಸುವ ಸಿದ್ಧತೆಯ ಬಗ್ಗೆ ಚರ್ಚಿಸಲಾಯಿತು.

“ಚುನಾವಣೆಗಳು ಹತ್ತಿರದಲ್ಲಿವೆ, 30 ವಿಧಾನಸಭಾ ಕ್ಷೇತ್ರಗಳಲ್ಲಿ ಇನ್ನು ಕೆಲವೇ ದಿನಗಳಲ್ಲಿ (ಮಾರ್ಚ್ 27 ರಂದು) ಚುಣಾವಣೆ ನಡೆಯುತ್ತವೆ. ಈ ಸಮಯದಲ್ಲಿ ಕೊರೊನಾ ಸಂಖ್ಯೆಯಲ್ಲಿನ ಈ ಹಠಾತ್ ಏರಿಕೆ ಆತಂಕದ ವಿಷಯವಾಗಿದೆ” ಎಂದು ಸಭೆಯಲ್ಲಿ ಭಾಗವಹಿಸಿದ ಹಿರಿಯ ಅಧಿಕಾರಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೇರಳ ನಾಮಪತ್ರ ವಿವಾದ- ಬಿಜೆಪಿ ಅಭ್ಯರ್ಥಿಗಳ ಮನವಿ ಹೈಕೋರ್ಟ್‌ನಲ್ಲೂ ತಿರಸ್ಕೃತ

ರೋಗ ತಡೆಗಟ್ಟುವುದು ಹಾಗೂ ಜನರು ಮೂಲಭೂತ ನೈರ್ಮಲ್ಯ ನಿಯಮಗಳನ್ನು ಅನುಸರಿಸುತ್ತಾರೆಯೆ ಎಂದು ಖಚಿತಪಡಿಸಿಕೊಳ್ಳಲು ಮುಖ್ಯ ಕಾರ್ಯದರ್ಶಿ ಎಲ್ಲಾ ಜಿಲ್ಲಾಧಿಕಾರಿ ಮತ್ತು ಎಸ್ಪಿಗಳನ್ನು ಕೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಿಎಪಿಎಫ್ ಸಿಬ್ಬಂದಿ, ಬೂತ್ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಕಾರ್ಯಕರ್ತರು ಸಾಂಕ್ರಮಿಕಕ್ಕೆ ಬಲಿಯಾಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಸಭೆಯಲ್ಲಿ ಗೃಹ ಕಾರ್ಯದರ್ಶಿ ಎಚ್‌.ಕೆ. ದ್ವೀದೇವಿ, ಡಿಜಿಪಿ ನೀರಜ್ ನಾಯನ್ ಮತ್ತು ರಾಜ್ಯ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...