Homeಮುಖಪುಟತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

ತಮಿಳುನಾಡು: ಚುನಾವಣಾ ಪ್ರಚಾರದ ವೇಳೆ ಜನರ ಬಟ್ಟೆ ಒಗೆದ ಎಐಎಡಿಎಂಕೆ ಅಭ್ಯರ್ಥಿ

- Advertisement -
- Advertisement -

ತಮಿಳುನಾಡು ಚುನಾವಣಾ ದಿನ ದಿನಕ್ಕೂ ರಂಗೇರುತ್ತಿದೆ. ಸಿನಿಮಾ ತಾರೆಯರಿಂದ, ಐಪಿಎಸ್ ಅಧಿಕಾರಿಗಳಿಂದ ಕುತೂಹಲ ಗಳಿಸಿಕೊಂಡಿರುವ ಚುನಾವಣೆಗೆ ಹೊಸ ಹೊಸ ಚುನಾವಣಾ ತಂತ್ರಗಳು ಸೇರಿಕೊಳ್ಳುತ್ತಿವೆ. ಈಗ ಎಐಎಡಿಎಂಕೆ ಅಭ್ಯರ್ಥಿಯೊಬ್ಬರು ಮತದಾರರ ಬಟ್ಟೆ ಒಗೆಯುವ ಮೂಲಕ ಸುದ್ದಿಯಾಗಿದ್ದಾರೆ.

ನಾಗಪಟ್ಟಣಂ ವಿಧಾನಸಭಾ ಕ್ಷೇತ್ರದ ಎಐಎಡಿಎಂಕೆ ಅಭ್ಯರ್ಥಿ ತಂಗಾ ಕಾತಿರಾವನ್, ಚುನಾವಣಾ ಪ್ರಚಾರದಲ್ಲಿ ಮಹಿಳೆಯೊಬ್ಬರ ಬಟ್ಟೆಗಳನ್ನು ತೊಳೆದು ಕೊಟ್ಟಿದ್ದಾರೆ. ಈ ಮೂಲಕ ತಮ್ಮ ಪ್ರಣಾಳಿಕೆಯಲ್ಲಿರುವ ವಾಷಿಂಗ್ ಮಷಿನ್ ಕೊಡುವ ಭರವಸೆಯನ್ನು ನೆನಪಿಸಿದ್ದಾರೆ.

ಎಐಎಡಿಎಂಕೆ ಅಭ್ಯರ್ಥಿ ತಂಗಾ ಕಾತಿರಾವನ್ ನಾಗೋರ್ ಬಳಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದರು. ಪಕ್ಷದ ಕಾರ್ಯಕರ್ತರು ವಂಡಿಪೆಟ್ಟೈನಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾಗ, ಒಬ್ಬ ಮಹಿಳೆ ತನ್ನ ಕುಟುಂಬ ಸದಸ್ಯರ ಬಟ್ಟೆ ಒಗೆಯುವುದನ್ನು ನೋಡಿದ ಕಾತಿ‌ರಾವನ್ ಮಹಿಳೆಯ ಬಳಿ ತಾವು ಬಟ್ಟೆ ಒಗೆದುಕೊಡುವುದಾಗಿ ತಿಳಿಸಿದ್ದಾರೆ. ಮೊದಲಿಗೆ ಬೇಡ ಎಂದ ಮಹಿಳೆ ನಂತರ ಕೆಲವು ಬಟ್ಟೆಗಳನ್ನು ಒಗೆಯಲು ನೀಡಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆಗೆ ಬಿಜೆಪಿ ಫೈನಲ್ ಲಿಸ್ಟ್ ಬಿಡುಗಡೆ: ಮಿಥುನ್ ಚಕ್ರವರ್ತಿಗೆ ಟಿಕೆಟ್ ಇಲ್ಲ!

ಅಭ್ಯರ್ಥಿ ಕಾತಿರಾವನ್ ಕೆಲವು ನಿಮಿಷಗಳ ಕಾಲ ಬಟ್ಟೆ ತೊಳೆದಿದ್ದಾರೆ. ನಂತರ ಬಟ್ಟೆ ಪಕ್ಕದಲ್ಲಿ ಇದ್ದ ಕೆಲವು ಪಾತ್ರೆಗಳನ್ನು ತೊಡೆದು ಇಟ್ಟಿದ್ದಾರೆ. ಕಾತಿರಾವನ್ ಕೆಲಸ ನೋಡಿ ಸ್ಥಳೀಯ ನಿವಾಸಿಗಳು ಆಶ್ಚರ್ಯಪಟ್ಟಿದ್ದಾರೆ. ಜೊತೆಗೆ ಗಾಬರಿ ಕೂಡ ಆಗಿದ್ದಾರೆ ಎಂದು ವರದಿಯಾಗಿದೆ.

ಬಟ್ಟೆ ತೊಳೆದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾತಿರಾವನ್, “ನಮ್ಮ ಅಮ್ಮನ ಸರ್ಕಾರವು ಮತ್ತೆ ಅಧಿಕಾರಕ್ಕೆ ಬಂದ ನಂತರ ಬಟ್ಟೆಗಳನ್ನು ತೊಳೆಯುವ ಯಂತ್ರಗಳನ್ನು ನೀಡುವ ಭರವಸೆ ನೀಡಿದ್ದೇವೆ. ಮಹಿಳೆಯರು ಮತ್ತು ಗೃಹಿಣಿಯರಿಗೆ ವಾಷಿಂಗ್ ಮಷಿನ್‌ಗಳನ್ನು ನೀಡಲಾಗುತ್ತದೆ. ಇದನ್ನೂ ಸೂಚಿಸಲು ಮತ್ತು ಸಾಬೀತು ಪಡಿಸಲು ನಾನು ಬಟ್ಟೆಯನ್ನು ತೊಳೆದಿದ್ದೇನೆ” ಎಂದಿದ್ದಾರೆ.

50 ವರ್ಷದ ಎಐಎಡಿಎಂಕೆ ಅಭ್ಯರ್ಥಿ ಕಾತಿರಾವನ್, ನಾಗಪಟ್ಟಣಂ ಪಟ್ಟಣ ಕಾರ್ಯದರ್ಶಿಯಾಗಿದ್ದಾರೆ. ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಪಕ್ಷಕ್ಕಾಗಿ ಅವರು ಮಾಡಿರುವ ಕೆಲಸವನ್ನು ಗುರುತಿಸಿ ಈ ಬಾರಿ ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.

ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಏಪ್ರಿಲ್ 6ರಂದು ಮತದಾನವನ್ನು ನಡೆಸುವುದಾಗಿ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ.  ಮೇ 2ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ದಲಿತ ಆರ್‌ಟಿಐ ಕಾರ್ಯಕರ್ತನ ಹತ್ಯೆ ವಿರೋಧಿಸಿ ಪ್ರತಿಭಟನೆ: ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...