Homeಮುಖಪುಟರಾಹುಲ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ನಕಾರ

ರಾಹುಲ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅಟಾರ್ನಿ ಜನರಲ್ ನಕಾರ

ಬಿಜೆಪಿ ತನ್ನ ಜನರನ್ನು ದೇಶದ ಕಾನೂನು ವ್ಯವಸ್ಥೆಯ ಸಂಸ್ಥೆಗಳಲ್ಲಿ ಸೇರಿಸಿಕೊಳ್ಳುತ್ತಿದೆ ಎಂಬುದು ಬಹಳ ಸ್ಪಷ್ಟವಾಗಿದೆ ಎಂದು ಸಂದರ್ಶನದಲ್ಲಿ ರಾಹುಲ್ ಹೇಳಿದ್ದರು.

- Advertisement -
- Advertisement -

ರಾಹುಲ್ ಗಾಂಧಿ ವಿರುದ್ಧ ನ್ಯಾಯಾಂಗ ನಿಂದನೆ (ಕಂಟೆಂಪ್ಟ್ ಆಫ್ ಕೋರ್ಟ್) ಮೊಕದ್ದಮೆ ಹೂಡಲು ಕೇಳಿದ್ದ ವಕೀಲರೊಬ್ಬರ ಮನವಿಯನ್ನು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ತಿರಸ್ಕರಿಸಿದ್ದಾರೆ. ನ್ಯಾಯಾಂಗದ ಕುರಿತ ರಾಹುಲ್ ಗಾಂಧಿಯವರ ಹೇಳಿಕೆಗಳು ‘ತುಂಬ ಅಸ್ಪಷ್ಟ’ವಾಗಿದ್ದು, ಜನರ ದೃಷ್ಟಿಯಲ್ಲಿ ಸಂಸ್ಥೆಯ ಘನತೆಯನ್ನು ಕಡಿಮೆ ಮಾಡುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ರಾಹುಲ್ ಗಾಂಧಿ ನ್ಯಾಯಾಂಗದ ಕುರಿತು ನೀಡಿದ ಹೇಳಿಕೆಗಳ ವಿರುದ್ದ ಸುಪ್ರೀಂ ಕೋರ್ಟ್ನಲ್ಲಿ ಕಂಟೆಂಪ್ಟ್ ಆಫ್ ಕೋರ್ಟ್ ಪ್ರಕರಣವನ್ನು ಪ್ರಾರಂಭಿಸಲು ವಕೀಲ ವಿನೀತ್ ಜಿಂದಾಲ್ ಅವರು ಅಟಾರ್ನಿ ಜನರಲ್ ಅವರ ಒಪ್ಪಿಗೆ ಕೋರಿದ್ದರು. ಖಾಸಗಿ ವ್ಯಕ್ತಿಯೊಬ್ಬರು ಸಲ್ಲಿಸಿದ ಯಾವುದೇ ಕಂಟೆಂಪ್ಟ್ ಪ್ರಕರಣವನ್ನು ಸುಪ್ರೀಂ ಕೋರ್ಟ್ ಆಲಿಸುವ ಮೊದಲು ಅಟಾರ್ನಿ ಜನರಲ್‌ರವರ ಅನುಮತಿಯ ಅಗತ್ಯವಿರುತ್ತದೆ.

“ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಲು ಶೇಕಡಾ 100 ರಷ್ಟು ಸ್ವಾತಂತ್ರ‍್ಯವನ್ನು ಹೊಂದಿರುವ ಕಾನೂನು ವ್ಯವಸ್ಥೆಯನ್ನು ಈ ದೇಶ ಹೊಂದಿದೆ. ಬಿಜೆಪಿ ತನ್ನ ಜನರನ್ನು ದೇಶದ ಈ ಎಲ್ಲಾ ಸಂಸ್ಥೆಗಳಲ್ಲಿ ಸೇರಿಸಿಕೊಳ್ಳುತ್ತಿದೆ ಎಂಬುದು ಬಹಳ ಸ್ಪಷ್ಟವಾಗಿದೆ. ಇದು ಪಕ್ಕಾ. ಅವರು ಈ ದೇಶದ ಸಾಂಸ್ಥಿಕ ಚೌಕಟ್ಟನ್ನು ಕಿತ್ತುಕೊಳ್ಳುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ತಮ್ಮ ಸಂದರ್ಶನದಲ್ಲಿ ಉಲ್ಲೇಖಿಸಿದ್ದರು.

ಕಾಂಗ್ರೆಸ್ ಮುಖಂಡ ನ್ಯಾಯಾಂಗವನ್ನು ಅವಮಾನಿಸಿದ್ದಾರೆ ಮತ್ತು ಈ ಟೀಕೆಗಳಿಂದ ಅದರ ಘನತೆಯನ್ನು ಕಡಿಮೆ ಮಾಡಿದ್ದಾರೆ ಎಂದು ವಕೀಲ ವಿನೀತ್ ಜಿಂದಾಲ್ ಆರೋಪಿಸಿದ್ದರು.
ಆದರೆ, ಸರ್ಕಾರದ ಉನ್ನತ ವಕೀಲರು ಇದನ್ನು ಒಪ್ಪಲಿಲ್ಲ. ರಾಹುಲ್ ಗಾಂಧಿ ಅವರು ನ್ಯಾಯಾಂಗದ ಬಗ್ಗೆ “ಸಾಮಾನ್ಯ” ಹೇಳಿಕೆ ನೀಡಿದ್ದಾರೆ ಮತ್ತು ನಿರ್ದಿಷ್ಟವಾಗಿ ಸುಪ್ರೀಂ ಕೋರ್ಟ್ ಅಥವಾ ನ್ಯಾಯಾಧೀಶರನ್ನು ಉಲ್ಲೇಖಿಸಿಲ್ಲ ಎಂದು ಹೇಳಿದರು.

“ನನ್ನ ಒಪ್ಪಿಗೆ ನೀಡುವ ಪ್ರಶ್ನೆಯು ಉದ್ಭವಿಸುವುದಿಲ್ಲ. ಯಾವುದೇ ಸಂದರ್ಭದಲ್ಲಿ, ಈಗ ಉಲ್ಲೇಖಿಸಿರುವ ಹೇಳಿಕೆಗಳು ಸಾರ್ವಜನಿಕರ ದೃಷ್ಟಿಯಲ್ಲಿ ಸಂಸ್ಥೆಯ ಅಧಿಕಾರವನ್ನು ಕಡಿಮೆ ಮಾಡಿವೆ ಎಂದು ಹೇಳಲು ತುಂಬಾ ಅಸ್ಪಷ್ಟವಾಗಿವೆ ಎಂದು ನಾನು ಭಾವಿಸುತ್ತೇನೆ” ಎಂದು ಅಟಾರ್ನಿ ಜನರಲ್ ಹೇಳಿದರು.


ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ ಶಿವಮೊಗ್ಗದಲ್ಲಿ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಯುಡಿಎಫ್ ಸರ್ಕಾರದಲ್ಲಿ ಭಿನ್ನಮತದ ಹೊಗೆ: ಸಿಎಂ ಸತೀಶನ್ ಏಕಪಕ್ಷೀಯ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರ ಅಸಮಾಧಾನ

ಕೇರಳದಲ್ಲಿ ವಿ.ಡಿ. ಸತೀಶನ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸರ್ಕಾರ ಅಧಿಕಾರಕ್ಕೆ ಬಂದು ಕೇವಲ ನಾಲ್ಕು ತಿಂಗಳು ಕಳೆಯುವುದರೊಳಗೇ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷದೊಳಗೆ ಭಿನ್ನಮತ ತೀವ್ರಗೊಳ್ಳುತ್ತಿರುವ ಲಕ್ಷಣಗಳು ಗೋಚರಿಸಿವೆ. ಉನ್ನತ...

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ: ದೆಹಲಿ ಪೊಲೀಸರಿಂದ 3 ಪ್ರಕರಣ ದಾಖಲು; 1 ಸಾವಿರ ಜನ ವಶಕ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿದ್ಯಾರ್ಥಿ ಸಂಘಟನೆಗಳು, ರಾಜಕೀಯ ಪಕ್ಷಗಳು...

ರಾಜ್ಯದ ಬರ ಪರಿಹಾರಕ್ಕೆ 3,705 ಕೋಟಿ ರೂ. ನೀಡಲು ಕೇಂದ್ರಕ್ಕೆ ಮನವಿ: ಸಿಎಂ

ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯಿಂದಾಗಿ ಕಂಗಾಲಾಗಿರುವ ರೈತರು ಮತ್ತು ಜನಸಾಮಾನ್ಯರ ನೆರವಿಗೆ ಧಾವಿಸಲು ಕೇಂದ್ರ ಸರ್ಕಾರ ತಕ್ಷಣವೇ ಎನ್‌ಡಿಆರ್‌ಎಫ್ (NDRF) ಮಾನದಂಡಗಳನ್ವಯ 3,705.30 ಕೋಟಿ ರೂಪಾಯಿ ಪರಿಹಾರ ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಡಿ.ಕೆ....

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅ.10 ರಂದು ಪ್ರತಿಭಟನೆ; ದೆಹಲಿಗೆ ಆಗಮಿಸುವಂತೆ ಸಿಜೆಪಿ ಕರೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ರಾಜೀನಾಮೆ ನೀಡದಿದ್ದರೆ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ಬಯಸುವ ಪ್ರತಿಯೊಬ್ಬ ನಾಗರಿಕನೂ ಅಕ್ಟೋಬರ್ 10 ರ ದೆಹಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕಾಕ್ರೋಚ್ ಜನತಾ ಪಾರ್ಟಿ...

SIR ಹಗರಣ | ಪರಿಶೀಲನೆಗೆ ನಿವೃತ್ತ ನ್ಯಾಯಾಧೀಶರ ಸ್ವತಂತ್ರ ಆಯೋಗ ರಚನೆ

ಭಾರತೀಯ ಚುನಾವಣಾ ಆಯೋಗ (ಇಸಿಐ) ದೇಶದಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಸಾಂವಿಧಾನಿಕ ಸಿಂಧುತ್ವ, ವಿಧಾನ ಮತ್ತು ಅದರ ಪ್ರಭಾವವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ಗಳ ಐವರು...

ಪಶ್ಚಿಮ ಬಂಗಾಳ ಎಸ್‌ಐಆರ್; ಮತದಾರರ ಹೆಸರು ಡಿಲೀಟ್- ಮರು ನೋಂದಣಿ ಕುರಿತು ಚುನಾವಣಾ ಆಯೋಗಕ್ಕೆ ಚಿದಂಬರಂ ಪ್ರಶ್ನೆ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮತದಾರರನ್ನು ಹೊರಗಿಟ್ಟಿರುವುದನ್ನು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಪ್ರಶ್ನಿಸಿದ್ದು, ಪಟ್ಟಿಯಿಂದ...

ದೆಹಲಿ ಮತದಾರರ ಪಟ್ಟಿ ಪರಿಷ್ಕರಣೆ: 25 ಪ್ರಕರಣಗಳಲ್ಲಿ ಅಧಿಕಾರಿಗಳೇ ‘ಆಕ್ಷೇಪಕರು’! ‘ಕಾರಣ’ ನೀಡದೆ ನೋಟಿಸ್ ಜಾರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆ ಅತ್ಯಂತ ಅಪರೂಪದ ಹಾಗೂ ಕಾನೂನು ತಜ್ಞರ ಹುಬ್ಬೇರಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಕರಡು ಮತದಾರರ ಪಟ್ಟಿಯಿಂದ...

Fly Dubai ಹೈಜಾಕ್ ಯತ್ನ: ಭಾರತೀಯ ಪೈಲಟ್ ಮೇಲೆ ದಾಳಿ ಮಾಡಿದ್ದ ಸಹಪೈಲಟ್ ಉಗ್ರರ ನಂಟಿನ ಆರೋಪ

ದುಬೈಯಿಂದ ಟೆಲ್ ಅವೀವ್‌ಗೆ 170ಕ್ಕೂ ಹೆಚ್ಚು ಪ್ರಯಾಣಿಕರೊಂದಿಗೆ ತೆರಳುತ್ತಿದ್ದ 'ಫ್ಲೈದುಬೈ' ವಿಮಾನವನ್ನು ಹೈಜಾಕ್ ಮಾಡಲು ಹಾಗೂ ಅಪಘಾತಕ್ಕೀಡು ಮಾಡಲು ಯತ್ನಿಸಿದ ಆರೋಪ ಎದುರಿಸುತ್ತಿರುವ ಸಹಪೈಲಟ್ ಹಮಾಮ್ ಅಲ್‌ಹಮಾಮಿ ಕುರಿತು ಮತ್ತಷ್ಟು ಆಘಾತಕಾರಿ ಮಾಹಿತಿಗಳು...

ಪ್ರತಿಭಟನಾಕಾರರನ್ನು ಬಂಧಿಸುವಂತೆ ಸಿಎಂ ಫಡ್ನವೀಸ್‌ಗೆ ಅಭಿಜೀತ್ ಸವಾಲು

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಶಿವಾಜಿ ಪಾರ್ಕ್‌ನಲ್ಲಿ ಜಮಾಯಿಸಿರುವ ಪ್ರತಿಭಟನಾಕಾರರನ್ನು ಬಂಧಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಸಿ‌ಜೆ‌ಪಿ (ಕಾಕ್ರಾಚ್ ಜನತಾ ಪಾರ್ಟಿ) ನಾಯಕ ಅಭಿಜೀತ್...

ಕರ್ನಾಟಕ ಎಸ್‌ಐಆರ್‌ನಲ್ಲಿ ಫಾರ್ಮ್ 7 ದುರುಪಯೋಗ ಆರೋಪ: ಖಾಸಗಿ ವ್ಯಕ್ತಿಗಳ ಆಕ್ಷೇಪಣೆ ಸ್ಥಗಿತಕ್ಕೆ ಸಚಿವ ರಿಜ್ವಾನ್ ಅರ್ಷದ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆಯೇ ಫಾರ್ಮ್ 7 ಬಳಸಿ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪ ಮತ್ತಷ್ಟು ತೀವ್ರಗೊಂಡಿದೆ. ರಾಜ್ಯ...