Homeಮುಖಪುಟಸದನದಲ್ಲಿ ಸಿಡಿ ಗಲಾಟೆ: ಏಕಪತ್ನಿ ವ್ರತಸ್ಥರ ಪ್ರಶ್ನೆ - ಬಿಜೆಪಿ, ಕಾಂಗ್ರೆಸ್ ಗದ್ದಲ

ಸದನದಲ್ಲಿ ಸಿಡಿ ಗಲಾಟೆ: ಏಕಪತ್ನಿ ವ್ರತಸ್ಥರ ಪ್ರಶ್ನೆ – ಬಿಜೆಪಿ, ಕಾಂಗ್ರೆಸ್ ಗದ್ದಲ

- Advertisement -
- Advertisement -

ವಿಧಾನಸಭಾ ಅಧಿವೇಶನದಲ್ಲಿ ಕಳೆದ ಕೆಲ ದಿನಗಳಿಂದ ಸಿಡಿ ಪ್ರಕರಣದ್ದೇ ಸದ್ದು. ಬೇರೆಲ್ಲಾ ವಿಷಯಗಳ ಚರ್ಚೆಯನ್ನು ಬಿಜೆಪಿಯವರ ಸಿಡಿ ಪ್ರಕರಣ ಹಾಳು ಮಾಡಿದೆ. ಕಾಂಗ್ರೆಸ್ ಸದಸ್ಯರು ಸಿಡಿಗಳನ್ನು ಕೈಯಲ್ಲಿ ಹಿಡಿದು ಇಂದು ಕೂಡ ಧರಣಿ ನಡೆಸಿದ್ದಾರೆ.

ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣದಲ್ಲಿ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಸದಸ್ಯರು ಕಲಾಪ ನಡೆಯದಂತೆ ಘೋಷಣೆ ಕೂಗಿದ್ದಾರೆ. ಧಿಕ್ಕಾರಗಳ ನಡುವೆಯೇ ಮುಖ್ಯಮಂತ್ರಿಗಳು ತಮ್ಮ ಮಾತು ಮುಂದುವರೆಸಿದ್ದರು.

ರಮೇಶ್ ಜಾರಕಿಹೊಳಿ ಜೊತೆಗೆ, ತಮ್ಮ ವಿರುದ್ಧದ ಸುದ್ದಿ ಪ್ರಕಟಿಸಬಾರದು ಎಂದು ನ್ಯಾಯಾಲಯದಿಂದ ಆದೇಶ ತಂದಿದ್ದ 6 ಮಂದಿ ಸಚಿವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಇದಕ್ಕೆ ಪ್ರತಿಕ್ರಿಯಿಸಿದ್ದ ಸಚಿವರಾದ ಸುಧಾಕರ್‌ ಮತ್ತು ಬಿ.ಸಿ.ಪಾಟೀಲ್ ‘ಬೇರೆಯವರೇನು ಏಕಪತ್ನಿ ವ್ರತಸ್ಥರಾ..?, ‘ಎಲ್ಲರೂ ಶ್ರೀರಾಮಚಂದ್ರರಲ್ಲ’ ಎಂದಿದ್ದರು.

ಇದನ್ನೂ ಓದಿ: ‘ಬಾಂಬೆ ತಂಡ’ದ ಶಾಸಕರ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ: ಸಿಎಂಗೆ ಕುಮಾರಸ್ವಾಮಿ ಪ್ರಶ್ನೆ

ಸಚಿವರ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಕರ್ನಾಟಕ ಕಾಂಗ್ರೆಸ್, #BJPblueBoys ಬಂಡತನದ ಮೂಲಕ ತಮ್ಮ ನೈತಿಕ ದಿವಾಳಿತನ ಪ್ರದರ್ಶಿಸಿದ್ದಾರೆ ಎಂದು ಟ್ವೀಟ್ ಮಾಡಿದೆ.

“ಬೇರೆಯವರೇನು ಏಕಪತ್ನಿ ವ್ರತಸ್ಥರಾ? ಎಂದಿರುವ ಡಾ.ಕೆ.ಸುಧಾಕರ್‌, ಎಲ್ಲರೂ ಶ್ರೀರಾಮಚಂದ್ರರಲ್ಲ ಎಂದಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ಈ ಸಮರ್ಥನೆಗಳ ಮೂಲಕ ಬಿಜೆಪಿಗರು ತಾವು ಕಂಡವರ ಮನೆಯ ಹೆಣ್ಣುಮಕ್ಕಳನ್ನ ಮಂಚಕ್ಕೆ ಕರೆದು ಅತ್ಯಾಚಾರ ಮಾಡುವವರು ಎನ್ನುವುದನ್ನ ಒಪ್ಪಿಕೊಂಡಿದ್ದಾರೆ” ಎಂದು ಕಿಡಿಕಾರಿದೆ.

ಜೊತೆಗೆ #BJPblueBoys ಬಂಡತನದ ಮೂಲಕ ತಮ್ಮ ನೈತಿಕ ದಿವಾಳಿತನ ಪ್ರದರ್ಶಿಸಿದ್ದಾರೆ ಎಂದು ಹೊಸ ಹ್ಯಾಶ್‌ಟ್ಯಾಗ್ ಬಳಸಿದೆ.

ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಬೇಕು. ಸಂತ್ರಸ್ತ ಯುವತಿಗೆ ನ್ಯಾಯ ನೀಡಬೇಕು ಎಂದಿರುವ ಕಾಂಗ್ರೆಸ್, ಪ್ರಕರಣದ ತನಿಖೆಯನ್ನು ಸ್ವತಂತ್ರ ಸಂಸ್ಥೆ ನಡೆಸಬೇಕು ಎಂದು ಆಗ್ರಹಿಸಿದೆ.

’ರಾಜಕೀಯಕ್ಕೆ ರಾಮನ ಹೆಸರು ಬಳಸುವ ನೀವು, ರಾಮನ ಆದರ್ಶ ಏಕೆ ಪಾಲಿಸುತ್ತಿಲ್ಲ? ಕಳಂಕಿತರಾದ 6 ಸಿಡಿ ಸಚಿವರ ರಾಜೀನಾಮೆ ಪಡೆದು ರಾಮನ ಮೇಲೆ ನಿಮಗಿರುವ ನೈಜ ಗೌರವ ನಿರೂಪಿಸಿ ಎಂದು ಕರ್ನಾಟಕ ಬಿಜೆಪಿಯನ್ನು ಆಗ್ರಹಿಸಿದೆ. ತನಿಖೆ ಎಂಬ “ಅಗ್ನಿಪರೀಕ್ಷೆ”ಯಲ್ಲಿ ಗೆದ್ದು ಪವಿತ್ರರು ಎಂದು ಈ ಆರು ಮಂದಿ ಸಿಡಿ ಸಚಿವರು ಸಾಬೀತುಪಡಿಸಲಿ’ ಎಂದಿದೆ.

‌ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ಯುವತಿಯೊಬ್ಬರಿಗೆ ಕೆಲಸದ ಆಮಿವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿಡಿಯೋ ಸಿ.ಡಿ ಜೊತೆಗೆ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಚಿವರಾದ ಡಾ. ಕೆ. ಸುಧಾಕರ್, ಎಸ್​.ಟಿ. ಸೋಮಶೇಖರ್, ನಾರಾಯಣ ಗೌಡ, ಶಿವರಾಮ್ ಹೆಬ್ಬಾರ್, ಬಿ.ಸಿ ಪಾಟೀಲ್, ಭೈರತಿ ಬಸವರಾಜ್ ತಮ್ಮ ವಿರುದ್ಧ ಯಾವುದೆ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು.


ಇದನ್ನೂ ಓದಿ: ಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...