Homeಮುಖಪುಟಪುದುಚೇರಿ: ಬಿಜೆಪಿಯಿಂದ ಆಧಾರ್‌ ಮಾಹಿತಿ ಸೋರಿಕೆ-ಗಂಭೀರ ಪ್ರಕರಣ ಎಂದ ಹೈಕೋರ್ಟ್

ಪುದುಚೇರಿ: ಬಿಜೆಪಿಯಿಂದ ಆಧಾರ್‌ ಮಾಹಿತಿ ಸೋರಿಕೆ-ಗಂಭೀರ ಪ್ರಕರಣ ಎಂದ ಹೈಕೋರ್ಟ್

- Advertisement -
- Advertisement -

ಪುದುಚೇರಿ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ಆಧಾರ್‌‌ ಮಾಹಿತಿಯನ್ನು ಸೋರಿಕೆ ಮಾಡುವ ಮೂಲಕ ವೈಯಕ್ತಿಕ ಮಾಹಿತಿ ಹಾಗೂ ವಾಟ್ಸಾಪ್‌‌ ಸಂಖ್ಯೆಗಳನ್ನು ಸಂಗ್ರಹಿಸಿ ಪ್ರಚಾರ ಸಂದೇಶಗಳನ್ನು ಕಳುಹಿಸುತ್ತಿದೆ ಎಂದು ಮದ್ರಾಸ್ ಹೈಕೋರ್ಟ್‌ನಲ್ಲಿ ಪುದುಚೇರಿ ಡಿವೈಎಫ್‌ಐ ಘಟಕದ ಅಧ್ಯಕ್ಷ ಆನಂದ್‌‌ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಆರೋಪಿಸಲಾಗಿದೆ.

ಅರ್ಜಿಯನ್ನು ಕೈಗೆತ್ತಿಕೊಂಡಿರುವ ಮದ್ರಾಸ್ ಹೈಕೋರ್ಟ್, ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸಿ ಎರಡು ದಿನಗಳಲ್ಲಿ ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಇದು ಗಂಭೀರ ಅಪರಾಧವಾಗಿದ್ದು, ಚುನಾವಣಾ ಆಯೋಗದ ತನಿಖೆಯನ್ನು ಸೈಬರ್ ಸೆಲ್‌ಗೆ ಹಸ್ತಾಂತರಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ಡಿವೈಎಫ್‌ಐ ಸಲ್ಲಿಸಿದ ಅರ್ಜಿಯಲ್ಲಿ, “ಸ್ಥಳೀಯ ಬಿಜೆಪಿ ಮುಖಂಡರು ಆಧಾರ್‌ನಿಂದ ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸಿ ನಂತರ ಪ್ರತಿ ಕ್ಷೇತ್ರದಲ್ಲಿ ಬೂತ್ ಮಟ್ಟದ ವಾಟ್ಸಾಪ್ ಗುಂಪುಗಳನ್ನು ಸ್ಥಾಪಿಸಲಾಗಿದೆ. ಅನೇಕ ವಾಟ್ಸಾಪ್ ಗುಂಪುಗಳನ್ನು ಈ ರೀತಿ ನಿರ್ಮಿಸಲಾಗಿದ್ದು, ಈ ಕಾರ್ಯವು ಬೂತ್ ಆಧಾರಿತ ಮತದಾರರನ್ನು ಕೇಂದ್ರೀಕರಿಸಿದೆ. ವಿಧಾನಸಭಾ ಕ್ಷೇತ್ರಗಳ ಸಂದೇಶಗಳು ಮತ್ತು ಪ್ರಚಾರಗಳನ್ನು ಈ ಮೂಲಕ ಹಂಚಿಕೊಳ್ಳಲಾಗುಗುತ್ತಿದೆ” ಎಂದು ಹೇಳಲಾಗಿದೆ.

ಬಿಜೆಪಿ ವಾಟ್ಸಾಪ್ ಗುಂಪುಗಳ ನಿರ್ವಾಹಕರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು, ನಂತರ ಪುದುಚೇರಿ ಘಟಕ ಒಂದರ ಅಡಿಯಲ್ಲೇ ಮತದಾರರ 953 ವಾಟ್ಸಾಪ್ ಗುಂಪುಗಳಿವೆ ಎಂಬ ಆಘಾತಕಾರಿ ಮಾಹಿತಿ ಸಿಕ್ಕಿದೆ ಎಂದು ಡಿವೈಎಫ್‌ಐ ದೂರಿನಲ್ಲಿ ತಿಳಿಸಿದೆ.

ವಾಟ್ಸಾಪ್ ಮಾತ್ರವಲ್ಲದೆ ಬಿಜೆಪಿ ನಾಯಕರು ಕೂಡ ಮತದಾರರಿಗೆ ಫೋನ್ ಮಾಡಿದ್ದಾರೆ. ಫೋನ್, ಹೆಸರು, ಮತದಾನ ಕೇಂದ್ರ ಮತ್ತು ವಿಧಾನಸಭಾ ಕ್ಷೇತ್ರದಂತಹ ಮಾಹಿತಿಯನ್ನು ಫೋನ್ ಮೂಲಕ ಕೋರಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ಬಗ್ಗೆ ತನಿಖೆ ನಡೆಸಲು ವಿಶೇಷ ವಿಚಾರಣಾ ತಂಡವನ್ನು ನೇಮಿಸಬೇಕು ಮತ್ತು ಬಿಜೆಪಿ ಅಭ್ಯರ್ಥಿಗಳು ಈ ರೀತಿ ಮತಗಳನ್ನು ಕೇಳದಂತೆ ತಡೆಯಬೇಕು ಎಂದು ಡಿವೈಎಫ್‌ಐ ದೂರಿನಲ್ಲಿ ಕೋರಿದೆ.


ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ ಶಿವಮೊಗ್ಗದಲ್ಲಿ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...