Homeಮುಖಪುಟದೆಹಲಿ: ಮೀನಿನ ಅಡುಗೆಯಲ್ಲಿ ವಿಷ ಬೆರೆಸಿದ ವ್ಯಕ್ತಿ- ಎರಡು ಸಾವು, ಪತ್ನಿ ಆಸ್ಪತ್ರೆಗೆ ದಾಖಲು

ದೆಹಲಿ: ಮೀನಿನ ಅಡುಗೆಯಲ್ಲಿ ವಿಷ ಬೆರೆಸಿದ ವ್ಯಕ್ತಿ- ಎರಡು ಸಾವು, ಪತ್ನಿ ಆಸ್ಪತ್ರೆಗೆ ದಾಖಲು

ಹೆಂಡತಿ ಮನೆಯಿಂದ ಅವಮಾನಕ್ಕೆ ಒಳಗಾಗಿದ್ದರಿಂದ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಲೋ ಪಾಯಿಸನ್ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಮೀನಿನ ಅಡುಗೆಯಲ್ಲಿ ಥಾಲಿಯಮ್ (Thallium) ಎಂಬ ರಾಸಾಯನಿಕ ಬಳಸಿ ಪತ್ನಿ ಮತ್ತು ಕುಟುಂಬಕ್ಕೆ ವಿಷ ಹಾಕಿ, ಅತ್ತೆ ಮತ್ತು ಅತ್ತಿಗೆಯನ್ನು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, 37 ವರ್ಷದ ವರುಣ್ ಅರೋರಾ, ಸದ್ದಾಂ ಹುಸೇನ್ ಅವರಿಂದ ಸ್ಫೂರ್ತಿ ಪಡೆದು ಈ ವಿಷವನ್ನು ಬಳಸಿದ್ದಾರೆ ಎನ್ನಲಾಗಿದೆ. ತನ್ನ ರಾಜಕೀಯ ವಿರೋಧಿಗಳನ್ನು ಕೊನೆಗಾಣಿಸಲು ಸದ್ದಾಂ ಹುಸೇನ್ ಥಾಲಿಯಮ್ ಎಂಬ ಸ್ಲೋ ಪಾಯಿಸನ್ ಬಳಸುತ್ತಿದ್ದರು ಎನ್ನಲಾಗಿದೆ.

ಕೊಲೆಗಳ ತನಿಖೆ ಬಳಿಕ ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್‌ನಲ್ಲಿರುವ ಮನೆಯಿಂದ ಆರೋಪಿ ವರುಣ್ ಅರೋರಾನನ್ನು ಮಂಗಳವಾರ ಬಂಧಿಸಲಾಗಿದೆ. ತನಗೆ ಮಾಡಿದ್ದ ಅಪಮಾನಕ್ಕೆ ಪ್ರತಿಕಾರವಾಗಿ ಮೀನಿನ ಅಡಿಗೆಯಲ್ಲಿ ವಿಷ ಬೆರೆಸಿ ತನ್ನ ಪತ್ನಿ ಮತ್ತು ಮನೆಯವರಿಗೆ ಬಡಿಸಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಏಕಪತ್ನಿ ವ್ರತಸ್ಥ ವಿವಾದ: ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಬಹಿರಂಗಪಡಿಸಲಿ- ಸಿದ್ದರಾಮಯ್ಯ

ಆರೋಪಿ ವರುಣ್ ಅರೋರಾ, ಅತ್ತೆ ಅನಿತಾ ದೇವಿ ಶರ್ಮಾ ಅವರ ಸಾವಿನ ಬಗ್ಗೆ ವಿಧಿವಿಜ್ಞಾನದ ವರದಿಯು ಥಾಲಿಯಮ್ ಕುರುಹುಗಳನ್ನು ಬಹಿರಂಗಪಡಿಸಿದ ನಂತರ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದರು. ಜೊತೆಗೆ ಆತನ ಪತ್ನಿ ರಕ್ತದಲ್ಲಿ ವಿಷದ ಕುರುಹುಗಳು ಇದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬುದನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

“ಹೆಚ್ಚಿನ ವಿಚಾರಣೆಯ ಸಮಯದಲ್ಲಿ, ಮೃತ ಅನಿತಾ ಅವರ ಕಿರಿಯ ಮಗಳಾದ ಪ್ರಿಯಾಂಕಾ ಕೂಡ ಬಿ.ಎಲ್. ಕಪೂರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಫೆಬ್ರವರಿ 15 ರಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  ಆರೋಪಿಯ ಮಾವ ದೇವೇಂದರ್ ಮೋಹನ್ ಶರ್ಮಾ ಅವರ ದೇಹದಲ್ಲೂ ಥಾಲಿಯಮ್ ವಿಷದ ಲಕ್ಷಣಗಳು ಕಂಡುಬಂದಿವೆ.  ಅಲ್ಲದೆ, ಹೆಚ್ಚಿನ ವಿಚಾರಣೆಯಲ್ಲಿ ಅವರ ಮನೆಯ ಕೆಲಸದಾಕೆ ಕೂಡ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ” ಎಂದು ಉಪ ಪೊಲೀಸ್ ಆಯುಕ್ತ ಉರ್ವಿಜಾ ಗೋಯೆಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಎಲ್ಲಾ ಘಟನೆಗಳು ಥಾಲಿಯಮ್ ವಿಷದತ್ತ ಗಮನಸೆಳೆದಿದ್ದ ಕಾರಣ, ಪೊಲೀಸರು ಫೋರೆನ್ಸಿಕ್ ತಂಡವನ್ನು ಮೃತರ ಮನೆಗೆ ಕಳುಹಿಸಿದ್ದರು. ಅಲ್ಲಿ ಥಾಲಿಯಮ್ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ತನಿಖೆಯ ಸಮಯದಲ್ಲಿ, ಆರೋಪಿ ಅರೋರಾ ಜನವರಿ ಅಂತ್ಯದಲ್ಲಿ ಕುಟುಂಬವನ್ನು ಭೇಟಿ ಮಾಡಿದ್ದರು. ಆಗ ಅವರಿಗೆ ಮೀನಿನ ಖಾದ್ಯ ತಂದಿದ್ದರು. ಸತತ ವಿಚಾರಣೆ ನಡೆಸಿದ ನಂತರ ಆತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ವರುಣ್ ಅರೋರಾ ಥಾಲಿಯಮ್ ಸಂಗ್ರಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಅದನ್ನು ಅನಿತಾ (ಅತ್ತೆ), ದಿವ್ಯಾ (ಹೆಂಡತಿ), ದೇವೇಂದರ್ ಮೋಹನ್ ಶರ್ಮಾ (ಮಾವ) ಮತ್ತು ಪ್ರಿಯಾಂಕಾ (ಅತ್ತಿಗೆ) ಗೆ ನೀಡಿದ್ದಾಗಿ ಅವರು ಹೇಳಿದ್ದಾರೆ. ಹೆಂಡತಿ ಮನೆಯಿಂದ ಅವಮಾನಕ್ಕೆ ಒಳಗಾಗಿದ್ದರಿಂದ ಪ್ರತೀಕಾರ ತೀರಿಸಿಕೊಳ್ಳಲು ಈ ಸ್ಲೋ ಪಾಯಿಸನ್ ನೀಡಿದ್ದರು. ಇದಲ್ಲದೆ, ಆರೋಪಿ ವರುಣ್ ಅರೋರಾ ಅವರ ಮನೆಯಲ್ಲಿ ಥಾಲಿಯಮ್   ಕಂಡುಬಂದಿದೆ “ಎಂದು ಪೊಲೀಸರು ಹೇಳಿದ್ದಾರೆ.


ಇದನ್ನೂ ಓದಿ: ’ಮಮತಾ ಬರ್ಮುಡಾ ಧರಿಸಲಿ’ ಎಂಬ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿಕೆಗೆ ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...