Homeಮುಖಪುಟನಾಳೆ ಸಂಪೂರ್ಣ ಭಾರತ್ ಬಂದ್‌: ಹೋರಾಟನಿರತ ರೈತರ ಬೇಡಿಕೆಗಳೇನು?

ನಾಳೆ ಸಂಪೂರ್ಣ ಭಾರತ್ ಬಂದ್‌: ಹೋರಾಟನಿರತ ರೈತರ ಬೇಡಿಕೆಗಳೇನು?

ಮುಷ್ಕರವು ಬೆಳಗ್ಗೆ 6ಕ್ಕೆ ಆರಂಭವಾಗಿ ಸಂಜೆ 6ರ ತನಕವೂ ಮುಂದುವರಿಯಲಿದೆ. ಈ ಅವಧಿಯಲ್ಲಿ ಎಲ್ಲ ಅಂಗಡಿಗಳು, ಡೈರಿಗಳು ಸೇರಿದಂತೆ ಎಲ್ಲವೂ ಬಾಗಿಲು ಮುಚ್ಚಲಿವೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಕಳೆದ 4 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಹೋರಾಟವನ್ನು ತೀವ್ರಗೊಳಿಸುವ ಸಲುವಾಗಿ ಮಾರ್ಚ್ 26 ರಂದು ಭಾರತದಾದ್ಯಂತ ಸಂಪೂರ್ಣ ಭಾರತ್ ಬಂದ್‌ಗೆ ಹೋರಾಟನಿರತ ರೈತರು ಕರೆ ನೀಡಿದ್ದಾರೆ.

ಅಖಿಲ ಭಾರತ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಸೇರಿದಂತೆ ಇತರೆ ಸಾಮೂಹಿಕ ಸಂಘಟನೆಗಳ ಬೆಂಬಲವನ್ನು ಕೇಳಲಾಗಿದೆ ಎಂದು ರೈತ ಸಂಘಟನೆಗಳು ಹೇಳಿವೆ.

ರೈತರ ಚಳವಳಿಗೆ ನಾಲ್ಕು ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಮಾರ್ಚ್ 26ರಂದು ದೇಶವ್ಯಾಪಿ ಮುಷ್ಕರ ನಡೆಯಲಿದ್ದು, ಎಲ್ಲ ಅಂಗಡಿಗಳು ಹಾಗೂ ಇತರ ವ್ಯವಹಾರ ಸಂಸ್ಥೆಗಳು 12 ಗಂಟೆಗಳ ಕಾಲ ಮುಚ್ಚಲಿವೆ. ಮಾರ್ಚ್ 28ರಂದು ಹೋಳಿ ದಹನದ ವೇಳೆ ಕೃಷಿ ಕಾನೂನುಗಳ ಪ್ರತಿಗಳನ್ನು ಸುಡಲಾಗುವುದು ಎಂದು ಎಸ್ ಕೆ ಎಂ ತಿಳಿಸಿದೆ.

ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಬೆಕು, ಎಂಎಸ್‌ಪಿ ಮತ್ತು ಬೆಳೆ ಸಂಗ್ರಹಣೆ ಕುರಿತು ಕಾನೂನು ಮಾಡಬೇಕು, ರೈತರ ವಿರುದ್ಧದ ಎಲ್ಲಾ ಪೊಲೀಸ್ ಪ್ರಕರಣಗಳನ್ನು ರದ್ದುಗೊಳಿಸಬೇಕು, ವಿದ್ಯುತ್ ಬಿಲ್ ಮತ್ತು ಮಾಲಿನ್ಯ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಡೀಸೆಲ್, ಪೆಟ್ರೋಲ್ ಮತ್ತು ಅನಿಲದ ಬೆಲೆಯನ್ನು ಕಡಿಮೆ ಮಾಡಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಭಾರತ್ ಬಂದ್ ಹಮ್ಮಿಕೊಳ್ಳಲಾಗಿದೆ ಎಂದು ರೈತ ಒಕ್ಕೂಟ ಹೇಳಿದೆ.

ಇದನ್ನೂ ಓದಿ: ಬಹುಜನ ಭಾರತ: ಬಂಧನದಲ್ಲಿ ಕಳೆದುಹೋಗುವ ಮುಸಲ್ಮಾನ ಬದುಕುಗಳು- ಪರಿಹಾರ ಇಲ್ಲವೇ?

ಮುಷ್ಕರವು ಬೆಳಗ್ಗೆ 6ಕ್ಕೆ ಆರಂಭವಾಗಿ ಸಂಜೆ 6ರ ತನಕವೂ ಮುಂದುವರಿಯಲಿದೆ. ಈ ಅವಧಿಯಲ್ಲಿ ಎಲ್ಲ ಅಂಗಡಿಗಳು, ಡೈರಿಗಳು ಸೇರಿದಂತೆ ಎಲ್ಲವೂ ಬಾಗಿಲು ಮುಚ್ಚಲಿವೆ. ಹೋಳಿಯ ದಿನ 3 ಕೃಷಿ ಕಾಯ್ದೆಗಳ ಪ್ರತಿಯನ್ನು ಸುಟ್ಟು ಹಾಕಲಾಗುವುದು. ಸರ್ಕಾರವು ಕೃಷಿ ಕಾಯ್ದೆಗಳನ್ನು ರದ್ದು ಮಾಡಿ, ಕನಿಷ್ಠ ಬೆಂಬಲ ಬೆಲೆಗೆ ಲಿಖಿತ ಖಾತರಿ ನೀಡುವ ವಿಶ್ವಾಸ ನಮಗಿದೆ ಎಂದು ಗಂಗಾನಗರ್ ಕಿಸಾನ್ ಸಮಿತಿಯ ರಂಜಿತ್ ರಾಜು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.

ಕನಿಷ್ಟ ಬೆಂಬಲೆ ಬೆಲೆ ನಿಗದಿಗೊಳಿಸುವಂತೆ ಮತ್ತು 3 ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಳ್ಳುವಂತೆ ದೇಶದಾದ್ಯಂತ ಇರುವ ರೈತರು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ 2020ರ ನವೆಂಬರ್ ತಿಂಗಳಿನಿಂದಲೂ ಹೋರಾಟ ಮಾಡುತ್ತಿದ್ದಾರೆ.

ಈ ಕುರಿತು ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳಾಗಿವೆ. ಆದರೆ ಅವುಗಳೆಲ್ಲವೂ ವಿಫಲವಾಗಿವೆ. ನಂತರ ಜ. 26 ರಂದು ಟ್ರ್ಯಾಕ್ಟರ್‌ ರ್ಯಾಲಿಗೆ ರೈತರು ಕರೆ ನೀಡಿದ್ದರು. ಆ ಸಂದರ್ಭದಲ್ಲಿ ನಡೆದ ಕೆಲವು ಅಹಿತಕರ ಘಟನೆಗಳಿಂದ ರೈತ ಹೋರಾಟಕ್ಕೆ ಸ್ವಲ್ಪ ಹಿನ್ನಡೆಯಾಗಿತ್ತು. ಆದರೆ ರಾಕೆಶ್ ಟಿಕಾಯತ್ ಭಾವನಾತ್ಮಕ ಭಾಷಣ ಮಾಡಿದ ನಂತರ ಉತ್ತರ ಭಾರತದಾದ್ಯಂತ ಪ್ರತಿ ಹಳ್ಳಿಗಳಲ್ಲೂ ಮಹಾ ಪಂಚಾಯತ್‌ಗಳನ್ನು ನಡೆಸಿ ಲಕ್ಷಾಂತರ ರೈತ ಬೆಂಬಲಿಗರನ್ನು ಒಟ್ಟಗೂಡಿಸಲಾಗುತ್ತಿದೆ. ಅಂದಿನಿಂದ ರೈತ ಹೋರಾಟ ಮತ್ತಷ್ಟು ಚುರುಕು ಪಡೆದುಕೊಂಡಿದೆ.

ರೈತ ಹೋರಾಟವನ್ನು ಹತ್ತಿಕ್ಕಲು ಸರ್ಕಾರವು ಹಲವು ಅನೈತಿಕ ಮಾರ್ಗಗಳನ್ನು ಪರೋಕ್ಷವಾಗಿ ಅನುಸರಿಸುತ್ತಿದೆ. ಆದರೆ ಹೋರಾಟವನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಿಲ್ಲ. ಈಗ ರೈತರು ಮತ್ತೊಮ್ಮೆ ದೇಶದಾದ್ಯಂತ ಬಂದ್ ಮಾಡಲು ಕರೆ ನೀಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಆರ್‌ಎಸ್‌ಎಸ್ ಅನ್ನು ‘ಸಂಘ ಪರಿವಾರ’ ಎಂದು ಕರೆಯುವುದು ಸರಿಯಲ್ಲ- ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...