Homeಮುಖಪುಟ`1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

`1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

- Advertisement -
- Advertisement -

‘ಕಾಂಟ್‌ ಟೇಕ್ ದಿಸ್ ಶಿಟ್ ಎನಿಮೋರ್’ ಎಂಬ ಸಾಕ್ಷ್ಯಚಿತ್ರಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಗೆದ್ದಿರುವ ಭಾರತೀಯ ಪತ್ರಕರ್ತ ವಿನೋದ್ ಕಪ್ರಿ ಅವರ ಹೊಸ ಸಾಕ್ಷ್ಯಚಿತ್ರ, ‘1232 ಕಿ.ಮೀ’ ಮಾರ್ಚ್‌‌ 24 ರ ಬುಧವಾರದಂದು ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಗೊಂಡಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ದೇಶಾದ್ಯಂತ ಸಿಕ್ಕಿಬಿದ್ದ ವಲಸೆ ಕಾರ್ಮಿಕರ ದುಃಸ್ಥಿತಿಯನ್ನು ಆಧರಿಸಿದ ಈ ಚಿತ್ರವು  ಕನ್ನಡ, ತಮಿಳು‌, ಮಲಯಾಳಂ, ತೆಲುಗು, ಮರಾಠಿ, ಬಾಂಗ್ಲಾ, ಹಿಂದಿ ಭಾಷೆಯಲ್ಲಿ ಲಭ್ಯವಿದೆ.

ಲಾಕ್‌ಡೌನ್‌ ಸಮಯದಲ್ಲಿ ಯಾವುದೇ ಸಾರಿಗೆ ವ್ಯವಸ್ಥೆ, ಆಹಾರ ಮತ್ತು ಆಶ್ರಯವಿಲ್ಲದೆ ಉಳಿದುಕೊಂಡಿದ್ದ ಏಳು ವಲಸೆ ಕಾರ್ಮಿಕರ ಕಷ್ಟಕರ ಪ್ರಯಾಣವನ್ನು ಈ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ. ಈ ಏಳು ಮಂದಿ ಕಾರ್ಮಿಕರು ಘಾಜಿಯಾಬಾದ್‌ನಿಂದ ಬಿಹಾರದ ಸಹರ್ಸಾಗೆ 1232 ಕಿ.ಮೀ ಸೈಕಲ್ ತುಳಿದುಕೊಂಡು ಹೋಗಿದ್ದರು.

ಇದನ್ನೂ ಓದಿ: ಬೆಳ್ಳಿಚುಕ್ಕಿ: ಪಶ್ಚಿಮದಲ್ಲಿ ಹುಟ್ಟುವ ಸೂರ್ಯ ಮತ್ತು ಒಂದು ವರ್ಷಕ್ಕೂ ದೀರ್ಘವಾದ ಒಂದು ದಿನ!

ವಾರದ ಹಿಂದೆಯೆ ಟೀಸರ್‌ ಅನ್ನು ಬಿಡುಗಡೆಗೊಳಿಸಲಾಗಿದ್ದು, ಅದು ರಸ್ತೆಗಳು, ಹೆದ್ದಾರಿಗಳು ಮತ್ತು ರಾಜ್ಯದ ಗಡಿಗಳಲ್ಲಿ ಸಿಕ್ಕಿಹಾಕಿಕೊಂಡಿರುವಂತಹ ವಲಸೆ ಕಾರ್ಮಿಕರ ಸಮಸ್ಯೆಗಳನ್ನು ಎತ್ತಿ ತೋರಿಸುತ್ತದೆ. ಹೃದಯ ವಿದ್ರಾವಕ ದೃಶ್ಯವಿರುವ ಟೀಸರ್‌ಗಳನ್ನು ಇಲ್ಲಿ ನೋಡಬಹುದು.

ವಿನೋದ್‌ ಕಪ್ರಿ ಅವರ ವಲಸೆ ಕಾರ್ಮಿಕರ ಜೊತಗಿನ ಪ್ರಯಾಣವು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳ ಪುಸ್ತಕಗಳಾಗಿಯು ಪ್ರಕಟಗೊಳ್ಳಲಿದೆ. ಪುಸ್ತಕಗಳು ಕ್ರಮವಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಕಟವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರವು 21 ದಿನಗಳ ಕಾಲ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ ಮಾರ್ಚ್‌ 24 ರಂದೆ ಈ ಚಿತ್ರವನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿದೆ.

ಚಿತ್ರವನ್ನು ನಿರ್ಮಿಸಿರುವ ಪತ್ರಕರ್ತ ವಿನೋದ್‌‌ ಕಪ್ರಿ, ಕಳೆದ ವರ್ಷ ಲಾಕ್‌ಡೌನ್‌ ಘೋಷಣೆಯಾದಾಗ ವಲಸೆ ಕಾರ್ಮಿಕರೊಂದಿಗೆ ತಾವು ಕೂಡಾ ಪ್ರಯಾಣಿಸಿ ವಲಸೆ ಕಾರ್ಮಿಕರ ಸಂಕಷ್ಟಗಳನ್ನು ಸೆರೆ ಹಿಡಿದಿದ್ದಾರೆ.

ಇದನ್ನೂ ಓದಿ: ‘ಸೀರೆ ಧರಿಸಿ ಕಾಲು ಪ್ರದರ್ಶಿಸುವುದು ಬಂಗಾಳಿ ಸಂಸ್ಕೃತಿಯಲ್ಲ’- ‘ಬರ್ಮುಡಾ’ ಹೇಳಿಕೆ ಸಮರ್ಥಿಸಿದ ಬಿಜೆಪಿ ಅಧ್ಯಕ್ಷ

ಈ ಬಗ್ಗೆ ಕಳೆದ ವರ್ಷ ಮೇ 5 ರಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ಟ್ವೀಟ್ ಮಾಡಿದ್ದ ವಿನೋದ್, “1232 ಕಿಲೋಮೀಟರ್‌ಗಳು. ಗಾಜಿಯಾಬಾದ್‌ನಿಂದ ಬಿಹಾರದ ಸಹರ್ಸಾಗೆ ಪ್ರಾರಂಭವಾದ ನನ್ನ ಜೀವನದ ಕಠಿಣ ಮತ್ತು ಮರೆಯಲಾಗದ ಪ್ರಯಾಣವನ್ನು ಪೂರ್ಣಗೊಳಿಸಿದೆ. ನಾನು 7 ವಲಸೆ ಕಾರ್ಮಿಕರೊಂದಿಗೆ 1232 ಕಿಲೋಮೀಟರ್ ದೂರವನ್ನು ಕ್ರಮಿಸಿದ್ದು, ಈ ವಲಸೆ ಕಾರ್ಮಿಕರು ತಮ್ಮ ಗ್ರಾಮಗಳಿಗೆ ತಲುಪಲು ಬೈಸಿಕಲ್ ಮೂಲಕ ಸವಾರಿ ಮಾಡುತ್ತಿದ್ದರು” ಎಂದು ಟ್ವೀಟ್ ಮಾಡಿದ್ದರು.

ಈ ಮೂಲಕ ಅವರು ತನ್ನ ಹೊಸ ಚಿತ್ರವು ನಿರ್ಮಾಣ ಹಂತದಲ್ಲಿದೆ, ಅದರ ಹೆಸರು ‘1232 ಕಿ.ಮೀ.’ ಎಂದು ಹೇಳಿಕೊಂಡಿದ್ದರು. ಈ ಟ್ವೀಟ್‌ನಲ್ಲಿ ಅವರು ಸಾಕ್ಷ್ಯಚಿತ್ರದ ಏಳು ವಲಸೆ ಕಾರ್ಮಿಕರು ಹಾಗೂ ಚಿತ್ರದ ಇತರ ದೃಶ್ಯಗಳ ಚಿತ್ರಗಳನ್ನು ಟ್ವಟರ್‌ನಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ: ದ್ವೇಷ ಬಿತ್ತುವವರಿಗೆ ಮತ ನೀಡಬೇಡಿ: ಪಶ್ಚಿಮ ಬಂಗಾಳದ ಸಿನಿಮಾ, ರಂಗಭೂಮಿ ಕಲಾವಿದರ ಹಾಡು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...