Homeಮುಖಪುಟ'ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ' ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

‘ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ’ ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ ಎನ್ನತ್ತಾರೆ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಚಿನ್ನದುರೈ...

- Advertisement -
- Advertisement -

ಚುನಾವಣೆಯಲ್ಲಿ ನಿಂತು ಗೆಲ್ಲಬೇಕು ಎಂದರೆ, ಸ್ಪರ್ಧಿಸುವವನು ಹಣವಂತನಾಗಿದ್ದರೆ ಮಾತ್ರ ಸಾಧ್ಯ ಎನ್ನುವ ಮಾತನ್ನು ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಮ್ಯನಿಸ್ಟ್ ಪಕ್ಷದ ಅಭ್ಯರ್ಥಿ ಚಿನ್ನದುರೈ ಸುಳ್ಳು ಮಾಡಲು ಹೊರಟಿದ್ದಾರೆ. ಪುದುಕೋಟ್ಟೈ ಜಿಲ್ಲೆಯ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದಿಂದ ಕಮ್ಯುನಿಸ್ಟ್ (ಮಾರ್ಕ್ಸಿಸ್ಟ್‌) ಪಕ್ಷದಿಂದ ಯಾವುದೇ ಆಸ್ತಿಯಿಲ್ಲದ, ಚಳವಳಿಯ ಹಿನ್ನೆಲೆಯಿರುವ ವ್ಯಕ್ತಿಯೊಬ್ಬರನ್ನು ಕಣಕ್ಕಿಳಿಸಲಾಗಿದೆ. ಇದು ಈ ಚುನಾವಣೆಯಲ್ಲಿ ಅತ್ಯಂತ ವಿಶೇಷವೆನಿಸಿದೆ.

ಮೂಲತಃ ಗಂಧರ್ವಕೋಟ್ಟೈನವರಾದ ಚಿನ್ನದುರೈ ಕಾರ್ಮಿಕರಾಗಿದ್ದಾಗಿನಿಂದಲೂ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಸಿಐಟಿಯುನಲ್ಲಿ ಸಕ್ರಿಯ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈಗ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಕಾಮ್ರೇಡ್ ಟಾಕೀಸ್ ಎನ್ನುವ ಯೂಟ್ಯೂಬ್ ಚಾನೆಲ್ ಇವರ ಸಂದರ್ಶನ ಮಾಡಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ಹೆಂಚಿನ ಮನೆಯಲ್ಲಿ ವಾಸಿಸುತ್ತಿರುವ ಇವರ ಬಳಿಯಿರುವ ಆಸ್ತಿ ಒಂದು ಟಾಟಾ ಏಸ್ ಮಾತ್ರ. ಇದನ್ನು ಚಿನ್ನದುರೈ ಅವರ ಮಗ ಬಾಡಿಗೆಗೆ ಓಡಿಸುತ್ತಾರೆ. ಇದೇ ಇವರ ಕುಟುಂಬದ ಮೂಲ ಆದಾಯ.

ಈ ಕುರಿತು ಸ್ವತಃ ಚಿನ್ನದುರೈ ಅವರೇ ಹೇಳಿರುವಂತೆ, “ನಾನು ನಾಮಪತ್ರ ಸಲ್ಲಿಸಲು ಹೋದಾಗ ಆಸ್ತಿ ವಿವರಗಳನ್ನು ಸಲ್ಲಿಸಬೆಕಾಗಿತ್ತು. ಜೊತೆಗೆ ಐಟಿ ವಿವರಗಳನ್ನು ಸಲ್ಲಿಸಬೇಕಾಗಿತ್ತು. ಆದರೆ ನನ್ನ ಬಳಿ ಆಸ್ತಿಯೆ ಇಲ್ಲದಿರುವುದರಿಂದ ಅದರ ವಿವರಗಳನ್ನು ಸಲ್ಲಿಸಿರಲಿಲ್ಲ. ಆದರೆ ಆಸ್ತಿ ವಿವರಗಳನ್ನು ಸಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಬಿಡದೇ ಒತ್ತಾಯ ಮಾಡುತ್ತಿದ್ದರು. ನಂತರ ನಮ್ಮ ಊರಿನ ಡಿಎಂಕೆ ಮುಖಂಡರು ಬಂದು ನೇರವಾಗಿ ಹೇಳಿದ ನಂತರ ನನಗೆ ತೊಂದರೆ ಕೊಡುವುದನ್ನು ನಿಲ್ಲಿಸಿದರು. ಠೇವಣಿ ಕಟ್ಟಲೂ ಸಹ ನನ್ನ ಬಳಿ ಹಣವಿರಲಿಲ್ಲ. ಊರಿನ ಮುಖಂಡರು, ಡಿಎಂಕೆ ಮುಖಂಡರು ಮತ್ತು ಇನ್ನೂ ಕೆಲವು ಸ್ನೇಹಿತರು ಸೇರಿ ಹಣ ಕಟ್ಟಿದರು. ಇದನ್ನು ನೋಡಿದಾಗ ನನಗೆ ಜನಸೇವೆ ಮಾಡಲು ಇನ್ನಷ್ಟು ಹುರುಪು ಹೆಚ್ಚಾಯಿತು” ಎನ್ನುತ್ತಾರೆ.

“ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ. ಆದರೆ ಕೆಲವರೆಲ್ಲಾ, ‘ನಿನ್ನ ಗಂಡ ಎಂಎಲ್‌ಎ ಆಗುತ್ತಾನಲ್ಲ. ನೀನ್ಯಾಕೆ ಆಡು ಮೇಯಿಸಲು ಬರುತ್ತೀಯ’ ಎಂದು ನನ್ನ ಹೆಂಡತಿಗೆ ಕೇಳುತ್ತಾರೆ. ಆದರೆ ಆಕೆ ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳದೆ ಪ್ರತಿನಿತ್ಯ ತನ್ನ ಕಾಯಕ ಮಾಡುತ್ತಾಳೆ. ಆದರೆ ನಮ್ಮ ಮುಖಂಡರು ಹೇಳುವಂತೆ, ನಾನು ಚುನಾವಣೆಯಲ್ಲಿ ಗೆದ್ದು 5 ವರ್ಷ ಸಂಪೂರ್ಣವಾಗಿ ಶಾಸಕನಾಗಿ ನನ್ನ ಜನರಿಗೆ ಸೇವೆ ಮಾಡಿದ ನಂತರವೂ ನಾನು ಹೀಗೇ ಇರುತ್ತೇನೆ” ಎಂದು ಆಶ್ವಾಸನೆ ನೀಡಿದ್ದಾರೆ.

“ನನ್ನ ಕ್ಷೇತ್ರದ ಬಹುಪಾಲು ಹಳ್ಳಿಗಳಿಗೆ ಬಸ್ ವ್ಯವಸ್ಥೆಯಿಲ್ಲ. ರಸ್ತೆಯೇ ಇಲ್ಲದಿರುವಾಗ ಬಸ್ ವ್ಯವಸ್ಥೆ ಇರಲು ಹೇಗೆ ಸಾಧ್ಯ. ಹಾಗಾಗಿ ಮೂಲಭೂತವಾಗಿ ಒಂದು ಹಳ್ಳಿಗೆ ಸಿಗಬೇಕಾದ ಯಾವುದೇ ಸೌಕರ್ಯಗಳೂ ಸಹ ಸಿಗುತ್ತಿಲ್ಲ. ಇದನ್ನು ಒದಗಿಸುವುದು ನನ್ನ ಆದ್ಯತೆ. ಇದರಲ್ಲಿ ಶಿಕ್ಷಣ ಮತ್ತು ಆರೋಗ್ಯದಂತಹ ವಿಷಯಗಳಿಗೆ ಮೊದಲ ಆದ್ಯತೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

“ನನಗೆ ಆಗ ತಿಂಗಳಿಗೆ ಕೇವಲ 50 ರೂ. ಸಂಬಳವಿತ್ತು. ಇದರ ಜೊತೆ 20 ರೂ.ಗಳನ್ನು ಸೇರಿಸಿ 70 ರೂ. ಸಂಬಳ ಕೊಡಿ ಎಂದು ಕೇಳಿದೆ. ಮಾಲೀಕ ಒಪ್ಪಲಿಲ್ಲ. ಆಗ ಸಿಐಟಿಯು ಸಂಘಟನೆ ಸೇರಿದೆ. ಆಗ ನನ್ನ ವಯಸ್ಸು 21. ಸಂಘಟನೆ ಸೇರಿದ ನಂತರ ನನ್ನ ಜೊತೆಗಿನ ಕಾರ್ಮಿಕರ ಹಕ್ಕುಗಳಿಗಾಗಿ ಸಾಕಷ್ಟು ಹೋರಾಟ ಮಾಡಿದ್ದೇನೆ. ಇದಕ್ಕಾಗಿ 3 ಬಾರಿ ಜೈಲಿಗೂ ಹೋಗಿದ್ದೇನೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, “ತಮಿಳು ನೆಲದಲ್ಲಿ ಬಿಜೆಪಿಯನ್ನು ತಳವೂರಲು ಬಿಡಬಾರದು ಎನ್ನುವುದೇ ನಮ್ಮ ಮೈತ್ರಿಯ ಗುರಿಯಾಗಿದೆ. ಜೊತೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆ ಪಕ್ಷವನ್ನು 234 ಕ್ಷೇತ್ರಗಳಲ್ಲಿಯೂ ಸೋಲಿಸಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ. ಯಾಕೆಂದರೆ ಈ ಸರ್ಕಾರ ಕೃಷಿಕರಿಗೆ, ಕೃಷಿ ಕಾರ್ಮಿಕರಿಗಾಗಿ ಏನನ್ನೂ ಮಾಡಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಅನೈತಿಕ ಕಾನೂನುಗಳ ವಿರುದ್ಧ ದನಿಯೆತ್ತಿಲ್ಲ. ಅಪಾಯದಲ್ಲಿರುವ ತಮಿಳಿನ ಅಸ್ಮಿತೆಗಾಗಿ ಯಾವುದೇ ಕ್ರಮ ಕೈಗೊಂಡಿಲ್ಲ” ಎನ್ನುತ್ತಾರೆ.

ಇವರನ್ನು ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ ಕಮ್ಯನಿಸ್ಟ್ ಪಕ್ಷವು ತಾನು ತಳಸಮುದಾಯದ ಪರ ಎಂಬುದನ್ನು ಸಾಬೀತುಪಡಿಸಿದೆ.

ಪಂಚರಾಜ್ಯ ಚುನಾವಣೆಗಳು ಘೋಷಣೆಯಾಗಿದ್ದು, ಏಪ್ರಿಲ್ ತಿಂಗಳಿನಲ್ಲಿ ಮತದಾನ ನಡೆದು, ಮೇ ತಿಂಗಳಿನಲ್ಲಿ ಫಲಿತಾಂಶ ಹೊರಬೀಳಲಿದೆ.

ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್-ಕಮ್ಯುನಿಸ್ಟ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಎಐಎಡಿಎಂಕೆ ಪಕ್ಷವನ್ನು ಸೋಲಿಸಬೇಕು ಎಂಬ ಪಣತೊಟ್ಟಿವೆ. ಹಾಗಾಗಿ ತಮಿಳುನಾಡಿನ 234 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ಆಯ್ಕೆಯನ್ನು ಬಹಳ ಎಚ್ಚರದಿಂದ ಮಾಡಿದೆ.


ಇದನ್ನೂ ಓದಿ: ಸಂಪರ್ಕದ ಮೂಲಕ ಕೊರೊನಾ : ಭಾರತದಲ್ಲೇ ಅತಿ ಹೆಚ್ಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...