Homeಮುಖಪುಟಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

- Advertisement -
- Advertisement -

ದೇಶ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನರೇಂದ್ರ ಮೋದಿ ಸರಕಾರವು ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರಗಳನ್ನು ಮತ್ತು ಸಚಿವಾಲಯಗಳನ್ನು ಖಾಸಗೀಯವರಿಗೆ ಮಾರಲು ಮುಂದಾಗಿದೆ. ಆದರೆ ಈ ಖಾಸಗೀಕರಣದೆಡೆಗಿನ ನೀತಿಯನ್ನು ಮೋದಿ ಸರ್ಕಾರದ ಹಲವಾರು ಪ್ರಮುಖ ಸಚಿವಾಲಯಗಳು ವಿರೋಧಿಸಿದ್ದವು ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಈ ಖಾಸಗೀಕರಣ ಪ್ರಕ್ರಿಯೆ ಕುರಿತು ಏಳು ತಿಂಗಳ ಅವಧಿಯಲ್ಲಿ ನಡೆದ ಪತ್ರವ್ಯವಹಾರವನ್ನು ಅವಲೋಕನ ಮಾಡಿ ವರದಿಯೊಂದನ್ನು ತಯಾರಿಸಲಾಗಿದೆ. ಅದರಲ್ಲಿ ಪ್ರಮುಖ ಸಚಿವಾಲಯಗಳು ಬೃಹತ್ ವಿರೋಧ ಮತ್ತು ಕಳವಳಗಳ ಹೊರತಾಗಿಯೂ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಿದ 2021-22ರ ಕೇಂದ್ರ ಬಜೆಟ್‌ನಲ್ಲಿ ಖಾಸಗೀಕರಣದ ಪರವಾದ ಹೊಸ ಸಾರ್ವಜನಿಕ ವಲಯ ಉದ್ಯಮ ನೀತಿಯನ್ನು ಘೋಷಿಸಿದ್ದಾರೆ.

ಮೇ 2020 ರಲ್ಲಿ ಕೊರೊನಾ ಸಾಂಕ್ರಾಮಿಕದ ಮಧ್ಯೆ ಸರ್ಕಾರದ ಆರ್ಥಿಕ ಪ್ಯಾಕೇಜಿನ ಭಾಗವಾಗಿ ಇದನ್ನು ಮೊದಲು ಘೋಷಿಸಲಾಯಿತು. ಹಣಕಾಸು ಸಚಿವಾಲಯದ ಹೂಡಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಇಲಾಖೆಗೆ ಈ ನೀತಿಯನ್ನು ರೂಪಿಸುವ ಕಾರ್ಯವನ್ನು ವಹಿಸಲಾಯಿತು.

ಜುಲೈ 6 ರಂದು ನೀತಿ ಆಯೋಗ್ ಸೇರಿದಂತೆ ನಲವತ್ತೊಂಬತ್ತು ಸಚಿವಾಲಯಗಳು, ಇಲಾಖೆಗಳು ಅದಕ್ಕೆ ಪ್ರತಿಕ್ರಿಯಿಸಲು ಕೇಳಲಾಯಿತು ಮತ್ತು ಅವರ ಪ್ರತಿಕ್ರಿಯೆ ಮತ್ತು ಸಲಹೆಯನ್ನು ನೀಡಲು ಎರಡು ವಾರಗಳ ಕಾಲಾವಕಾಶ ನೀಡಲಾಯಿತು.

ಯಾವುದೇ ಮಹತ್ವದ ಪ್ರತಿಕ್ರಿಯೆ‌ಗಳನ್ನು ನೀಡದೆ 21 ಸಚಿವಾಲಯಗಳು ಮತ್ತು ಇಲಾಖೆಗಳು ನೀತಿಯನ್ನು ಬೆಂಬಲಿಸಿದರೆ, ಏಳು ಇಲಾಖೆಗಳು ತಮ್ಮಿಂದ ನಿಯಂತ್ರಿಸಲ್ಪಡುವ ಕ್ಷೇತ್ರಗಳು ಕಾರ್ಯತಂತ್ರದ ಪಟ್ಟಿಯಲ್ಲಿ ಇರಬೇಕೆಂದು ಬಯಸಿದ್ದರೆ, ಏಳು ಗುಂಪುಗಳು ನೀತಿಯಿಂದ ವಿನಾಯಿತಿ ಕೋರಿವೆ.

ಈ ಸಂದರ್ಭದಲ್ಲಿ ಮೂರು ಇಲಾಖೆಗಳು ಷರತ್ತುಬದ್ಧ ಅನುಮೋದನೆ ನೀಡಿವೆ ಮತ್ತು 10 ಇಲಾಖೆಗಳು ಖಾಸಗೀಕರಣಕ್ಕೆ ಬಲವಾದ ಅಸಮ್ಮತಿ ಸೂಚಿಸಿ ಸಲಹೆಗಳು ಮತ್ತು ಪ್ರತಿಕ್ರಿಯೆ ‌ಗಳನ್ನು ಕಳುಹಿಸಿವೆ ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಇತರ ಇಲಾಖೆಗಳೊಂದಿಗೆ ಬಾಹ್ಯಾಕಾಶ ಇಲಾಖೆ 2020 ರ ಜುಲೈ 24 ರಂದು ಪತ್ರವೊಂದನ್ನು ಬರೆದಿದ್ದು, ಅದರ ನಿಯಂತ್ರಣದಲ್ಲಿರುವ ಎರಡು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಆಂಟ್ರಿಕ್ಸ್ ಕಾರ್ಪ್ ಮತ್ತು ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಅನ್ನು ಖಾಸಗೀಕರಣಕ್ಕಾಗಿ ಪರಿಗಣಿಸಬಾರದು ಎಂದು ಒತ್ತಾಯಿಸಿದೆ.

ಆರೋಗ್ಯ ಸಚಿವಾಲಯವೂ ಆರೋಗ್ಯ ರಕ್ಷಣೆಯನ್ನು ಕಾರ್ಯತಂತ್ರದ ಪಟ್ಟಿಯ ಕ್ಷೇತ್ರವಾಗಿ ಸೇರಿಸದಿರುವುದನ್ನು ವಿರೋಧಿಸಿ ಪತ್ರ ಬರೆದಿದೆ. ಸರ್ಕಾರಿ ಸ್ವಾಮ್ಯದ ಘಟಕದ ಉಪಸ್ಥಿತಿಯ ಅಗತ್ಯವಿರುವ “ಆರೋಗ್ಯ ಸೇವೆಗಳನ್ನು ಕಾರ್ಯತಂತ್ರದ ವಲಯವಾಗಿ ಸೇರಿಸಲು ಒಳಪಟ್ಟಿರುತ್ತದೆ” ಎಂಬ ಉದ್ದೇಶಿತ ಖಾಸಗೀಕರಣ ನೀತಿಯನ್ನು ಅದು ಬೆಂಬಲಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...