Homeಮುಖಪುಟ#LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

#LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲು ಸೇರಿದ್ದೆ ಎಂಬ ಮೋದಿ ಹೇಳಿಕೆಗೆ ಟ್ವಿಟರ್‌ನಲ್ಲಿ ವ್ಯಾಪಕ ವ್ಯಂಗ್ಯ ವ್ಯಕ್ತವಾಗುತ್ತಿದೆ.

- Advertisement -
- Advertisement -

ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಜೈಲಿಗೆ ಹೋಗಿದ್ದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಡಾಕಾದಲ್ಲಿ ಹೇಳಿದ್ದು, ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಟ್ರೋಲ್ ಆಗುತ್ತಿದೆ.

ಬಾಂಗ್ಲಾದೇಶದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ನರೇಂದ್ರ ಮೋದಿ, “ಬಾಂಗ್ಲಾದೇಶ ವಿಮೋಚನೆಯ ಸಂದರ್ಭದ ಸ್ವಾತಂತ್ರ್ಯ ಹೋರಾಟದಲ್ಲಿ ನಾನು ಭಾಗವಹಿಸಿದ್ದೆ. ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮವು ನನ್ನ ಜೀವನದ ಪ್ರಯಾಣದಲ್ಲಿ ಒಂದು ಮಹತ್ವದ ಕ್ಷಣವಾಗಿತ್ತು. ನನ್ನ ಸಹೋದ್ಯೋಗಿಗಳು ಮತ್ತು ನಾನು ಭಾರತದಲ್ಲಿ ಸತ್ಯಾಗ್ರಹ ಮಾಡಿದ್ದೆವು. ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ಸತ್ಯಾಗ್ರಹದ ಸಮಯದಲ್ಲಿ ಜೈಲಿಗೆ ಹೋಗಲು ನನಗೆ ಅವಕಾಶ ಸಿಕ್ಕಿತು” ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಟ್ವಿಟರ್‌ನಲ್ಲಿ #lielikemodi ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡಿಂಗ್‌ ಆಗಿದೆ. ಈ ವರದಿ ಬರೆಯುವ ವೇಳೆಗೆ 2 ಲಕ್ಷಕ್ಕೂ ಹೆಚ್ಚು ಜನ ಈ ಹ್ಯಾಶ್‌ಟ್ಯಾಗ್ ಬಳಸಿ ಮೋದಿಯ ಕಾಲೆಳೆದಿದ್ದಾರೆ.

ಇದನ್ನೂ ಓದಿ: ಆಂದೋಲನ್ ಜೀವಿ ಟ್ರೆಂಡ್: ನೆಟ್ಟಿಗರು ಮೋದಿಯವರ ಹಳೆಯ ಫೋಟೊಗಳನ್ನಾಕಿ ಟ್ರೋಲ್ ಮಾಡುತ್ತಿರುವುದೇಕೆ?

ನೀರಜ್ ಎಂಬುವವರು ಟ್ವೀಟ್ ಮಾಡಿ, “ನರೇಂದ್ರ ಮೋದಿಯವರನ್ನು ಬಿಡುಗಡೆ ಮಾಡಿದ ಜೈಲರ್‌ನನ್ನು ಭಾರತ ಎಂದಿಗೂ ಕ್ಷಮಿಸುವುದಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ವಕ್ತಾರರಾದ ಶ್ರೀವತ್ಸ ಟ್ವೀಟ್ ಮಾಡಿ, “ಕ್ರಿಸ್ಟೋಫರ್ ನೋಲನ್ ಅವರ ಮನಸ್ಸಿನಲ್ಲಿ ಇನ್ಸೆಪ್ಷನ್ ಕಲ್ಪನೆಯನ್ನು ಅಳವಡಿಸಿದವರು ಮೋದಿಜಿ. ಇದು ಮನ್ ಕಿ ಬಾತ್” ಎಂದು ಬರೆದುಕೊಂಡಿದ್ದಾರೆ.

“ನರೇಂದ್ರ ಮೋದಿ ತನ್ನ ಸಹೋದ್ಯೋಗಿಗಳೊಂದಿಗೆ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವುದು” ಎಂದು ಎಡಿಟೆಡ್ ಫೊಟೋವನ್ನು ಹಂಚಿಕೊಳ್ಳಲಾಗಿದೆ.

“ಅಲೆಕ್ಸಾಂಡರ್ ಗ್ರಹಾಂಬೆಲ್ ಟೆಲಿಫೋನ್ ಅನ್ನು ಕಂಡುಹಿಡಿದಾಗ, ಮೋದಿಯವರಿಂದ ಮೂರು ಮಿಸ್ಡ್‌ ಕಾಲ್‌ಗಳು ಬಂದಿದ್ದವು” ಎಂದು ಅಮಿರ್ ಎಂಬುವವರು ವ್ಯಂಗ್ಯ ಮಾಡಿದ್ದಾರೆ.

ಹೀಗೆ ಇನ್ನೂ ಹಲವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಇದನ್ನೂ ಓದಿ: ’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

ಹೀಗೆ ಲಕ್ಷಾಂತರ ಜನ ಟ್ವಿಟರ್ ಬಳಕೆದಾರರು ವ್ಯಾಪಕವಾಗಿ ಮೋದಿಯನ್ನು ಟ್ರೋಲ್ ಮಾಡಿದ್ದಾರೆ.


ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....