Homeಕರ್ನಾಟಕಸಂತ್ರಸ್ತ ಯುವತಿ ನನ್ನನ್ನು ಭೇಟಿಯಾಗಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಸಂತ್ರಸ್ತ ಯುವತಿ ನನ್ನನ್ನು ಭೇಟಿಯಾಗಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

- Advertisement -
- Advertisement -

ಸಿಡಿ ಪ್ರಕರಣದ ಸಂತ್ರಸ್ತ ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು. ಆದರೆ ನಾವು ಭೇಟಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾವು ರಾಜಕಾರಣಿಗಳು ಹಾಗೂ ನೀವು ಮಾಧ್ಯಮದವರು ಸಾರ್ವಜನಿಕ ಜೀವನದಲ್ಲಿ ಇರುವವರು. ಯಾವುದೇ ಪಕ್ಷದ ರಾಜಕಾರಣಿ ಆದರೂ ನೊಂದವರಿಗೆ, ಕಷ್ಟ ಅಂತಾ ಬಂದವರಿಗೆ ಸಹಾಯ ಮಾಡುವ ಪ್ರವೃತ್ತಿ ಹೊಂದಿರುತ್ತಾರೆ. ಹಾಗೇ ಆ ಹೆಣ್ಣು ಮಗಳು ನನ್ನ ಭೇಟಿಗೆ ಪ್ರಯತ್ನಿಸಿದ್ದೆ ಅಂತಾ ಹೇಳಿದ್ದಾಳೆ. ಸಂಕಷ್ಟ ಹೇಳಿಕೊಂಡು ಬಂದವರಿಗೆ ನಾವು ಸಹಾಯ ಮಾಡುತ್ತೇವೆ. ದಿನ ಬೆಳಗಾದರೆ ನನ್ನ ಮನೆ ಬಳಿ ಬಂದು ನೋಡಿ. ಅನೇಕರು ಹಣಕಾಸು ಸಮಸ್ಯೆ, ಸರ್ಕಾರದಿಂದ ತೊಂದರೆ, ಕೌಟುಂಬಿಕ ಸಮಸ್ಯೆ ಹೇಳಿಕೊಂಡು ಬರುತ್ತಾರೆ. ಅದೇ ರೀತಿ ಯಾರು ಬೇಕಾದರೂ ಬಂದು ಭೇಟಿ ಮಾಡಬಹುದು” ಎಂದು ಹೇಳಿದ್ದಾರೆ.

ಒಂದು ವೇಳೆ ನಮ್ಮಿಂದ ಯಾರಿಗಾದರೂ ತೊಂದರೆಯಾದರೆ ಆಡಳಿತ ಪಕ್ಷದವರ ಬಳಿ ಹೋಗುತ್ತಾರೆ. ಅದೇ ರೀತಿ ಆ ಯುವತಿ ಬಂದಿರ ಬಹುದು. ನಾನು ಆಕೆಯನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಒಂದು ವೇಳೆ ಆಕೆ ಬಂದರೂ ನಾನು ಪರಿಶೀಲನೆ ಮಾಡುತ್ತೇನೆ. ನಮ್ಮ ಸರ್ಕಾರದ ಶಾಸಕರನ್ನು ಸೆಳೆಯುತ್ತೇವೆ ಎಂದಾಗ ಅವರನ್ನು ಟ್ರ್ಯಾಕ್ ಮಾಡಿದ್ದು ನಿಜ. ಯಾರು ಯಾರ ಜತೆ ಮಾತನಾಡುತ್ತಿದ್ದಾರೆ, ಎಲ್ಲಿ ಹೋಗುತ್ತಿದ್ದಾರೆ ಎಂದು ಗಮನಿಸಿದ್ದೆವು. ಆದರೆ ಇದು ಅವರ ವೈಯಕ್ತಿಕ ವಿಚಾರ. ಅದರ ಅವಶ್ಯಕತೆ ನಮಗಿಲ್ಲ ಎಂದು ಹೇಳಿದರು.

ರಕ್ಷಣೆ ನೀಡುವುದು ಸರ್ಕಾರದ ಕೆಲಸ. ಪೊಲೀಸ್ ಇಲಾಖೆಯಲ್ಲಿ ಉತ್ತಮ ಅಧಿಕಾರಿಗಳಿದ್ದಾರೆ. ಅವರಿಗೆ ಅವರದೇ ಆದ ಘನತೆ ಇದೆ. ಅವರು ಸೂಕ್ತ ರಕ್ಷಣೆ ನೀಡುತ್ತಾರೆ. ಯುವತಿ ಪೋಷಕರು ಯಾರ ಬಳಿ ಇದ್ದಾರೆ ಅಂತಾ ನನಗೆ ಗೊತ್ತಿಲ್ಲ. ಅದು ಆ ಯುವತಿಗೇ ಗೊತ್ತು. ನಾನು ಅದನ್ನು ಯಾಕೆ ಟ್ರ್ಯಾಕ್ ಮಾಡಲಿ ಎಂದು ಸ್ಪಷ್ಟನೆ ನೀಡಿದರು.


ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ಒಂದು ಜಾತ್ಯತೀತ ದೇಶ’: ದಿಯಾ ಮಿರ್ಜಾ ವಿಡಿಯೋ ಕುರಿತ ಬಿಜೆಪಿ ನಾಯಕರ ಟೀಕೆಗೆ ಬಾಂಬೆ ಹೈಕೋರ್ಟ್ ಆಕ್ಷೇಪ : ವಿಡಿಯೋ ಮರುಸ್ಥಾಪಿಸಲು ಬಿಎಂಸಿಗೆ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಪಟಾಕಿ ಸಿಡಿಸದಂತೆ ದೀಪಾವಳಿ ಹಬ್ಬದ ಮುನ್ನ ನಾಗರಿಕರಲ್ಲಿ ನಟಿ ದಿಯಾ ಮಿರ್ಜಾ ಮನವಿ ಮಾಡಿಕೊಂಡಿದ್ದ ವಿಡಿಯೋ ವಿರುದ್ಧ ಕೆಲವು ರಾಜಕಾರಣಿಗಳು ಮಾಡಿದ ಟೀಕೆಗಳನ್ನು ಬಾಂಬೆ ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಮೂರ್ತಿ ಗಿರೀಶ್...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ‘ಕುಮಾರಸ್ವಾಮಿ ಸಮ್ಮುಖದಲ್ಲೇ ವಿಡಿಯೋ ಅಪ್‌ಲೋಡ್’; ವರದಿಯ ಶೇ.10ರಷ್ಟನ್ನೇ ಬಹಿರಂಗಪಡಿಸಿದ್ದೇವೆ ಎಂದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತಿರುವು ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ...

ಕರ್ನಾಟಕ ಎಸ್‌ಐಆರ್‌ನ ಹಲವು ಅವಾಂತರಗಳು ಬಯಲು : ಸಂಪೂರ್ಣ ಮೌನ ಪಾಲಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಚುನಾವಣಾ ಆಯೋಗ, 2026ರ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಕೈತೊಳೆದುಕೊಂಡಿದೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತ...

ವಕ್ಫ್ ತಿದ್ದುಪಡಿ ಕಾಯ್ದೆ 2025: ಸೀಮಿತ 5 ಅರ್ಜಿಗಳ ನಿಯಮ ತೆರವು; ಹೊಸ ರಿಟ್ ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ!

ಕೇವಲ ಮಧ್ಯಂತರ ಅರ್ಜಿದಾರರಾಗಿ ವಾದ ಮಂಡಿಸಲು ಸಾಧ್ಯವಿಲ್ಲ ಎಂದ ಪೀಠ: 2027ರ ಜನವರಿಯಲ್ಲಿ ಅಂತಿಮ ವಿಸ್ತೃತ ವಿಚಾರಣೆ! ಕೇಂದ್ರ ಸರ್ಕಾರದ ವಿವಾದಾತ್ಮಕ ‘ವಕ್ಫ್ (ತಿದ್ದುಪಡಿ) ಕಾಯ್ದೆ 2025’ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಡೆಯುತ್ತಿರುವ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

ಯುಪಿ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರಗಳೇ ಬದಿಗೊತ್ತಿದ ‘SIR’ ಪಟ್ಟಿಯನ್ನು ಕರ್ನಾಟಕ ಸರ್ಕಾರವೂ ಕೈಬಿಡಬೇಕು! ಕೇಂದ್ರ ಚುನಾವಣಾ ಆಯೋಗವು ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಲಕ್ಷಾಂತರ...

ಬಿಡದಿ ಟೌನ್‌ಶಿಪ್ : 2 ಗ್ರಾಮಗಳ 1,895 ಎಕರೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮಗಳಲ್ಲಿ, ಪ್ರಸ್ತಾವಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' (GBIT) ಯೋಜನೆಗಾಗಿ 1,895 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ...

ಪಂಜಾಬ್ : ಮೂವರು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ; ವಿಧಾನಸಭೆ ಚುನಾವಣೆಗೆ ಮುನ್ನ ಮಹತ್ವದ ಬೆಳವಣಿಗೆ

ಪಂಜಾಬ್ ವಿಧಾನಸಭಾ ಚುನಾವಣೆಗೆ (2027) ಮುನ್ನ ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸೋಮವಾರ (ನ.2) ಮೂವರು ಶಾಸಕರಾದ ಹರ್ಮೀತ್ ಸಿಂಗ್ ಪಠಾನ್‌ಮಜ್ರಾ, ಚೇತನ್ ಸಿಂಗ್ ಜೌರಾಮಜ್ರಾ ಮತ್ತು...

‘ಹೆಸರುಗಳನ್ನು ತೆಗೆದುಹಾಕುವುದು ಕಳ್ಳತನವಲ್ಲ’; ಎಸ್‌ಐಆರ್ ಬಗ್ಗೆ ಪ್ರತಿಪಕ್ಷಗಳು ಗೊಂದಲ ಹರಡುತ್ತಿವೆ: ಸಂಬಿತ್ ಪಾತ್ರ

ವಾರಾಣಸಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ಪುರಿ ಸಂಸದ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಮತದಾರರ ಪಟ್ಟಿಯಿಂದ...

ರಾಮಮಂದಿರ ದೇಣಿಗೆ ದುರುಪಯೋಗ: ವಿಚಾರಣೆಯನ್ನು ಸ್ಥಳೀಯ ನ್ಯಾಯಾಲಯಕ್ಕೆ ಬಿಟ್ಟ ಸುಪ್ರೀಂ: ಆರೋಪಗಳ ಅರ್ಹತೆ ಬಗ್ಗೆ ಪ್ರತಿಕ್ರಿಯೆ ಇಲ್ಲ

ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ದುರುಪಯೋಗವಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಕ್ತಾಯಗೊಳಿಸಿದೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಕರಣದ ತನಿಖೆ ಪೂರ್ಣಗೊಳಿಸಿ ಆರೋಪಪಟ್ಟಿ...

ಎಸ್‌ಐಆರ್ ಅಂತಿಮ ಮತದಾರರ ಪಟ್ಟಿ ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಜನಪರ ಸಂಘಟನೆಗಳ ಒತ್ತಾಯ

ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿರುವ ಎಸ್‌ಐಆರ್‌ (ಎಸ್‌ಐಆರ್) ಅಂತಿಮ ಮತದಾರರ ಪಟ್ಟಿಯನ್ನು ಕರ್ನಾಟಕ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸಬೇಕು ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಈ ಪಟ್ಟಿಯನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು...