Homeಮುಖಪುಟಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, 150 ರೋಗಿಗಳ ಸ್ಥಳಾಂತರ

ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, 150 ರೋಗಿಗಳ ಸ್ಥಳಾಂತರ

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಕಾರ್ಡಿಯಾಲಜಿ ವಿಭಾಗದಲ್ಲಿ ಭಾನುವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 150 ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕನಿಷ್ಠ ಏಳು ಅಗ್ನಿಶಾಮಕ ದಳ ವಾಹನಗಳನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸ್ಟೇಷನ್ ಹೌಸ್ ಅಧಿಕಾರಿ ಅಶ್ವನಿ ಪಾಂಡೆ ಹೇಳಿದ್ದಾರೆ. ಇಡೀ ಆಸ್ಪತ್ರೆ ಹೊಗೆಯಿಂದ ತುಂಬಿದ್ದ ಕಾರಣ, ರೋಗಿಗಳು ಮತ್ತು ಸಿಬ್ಬಂದಿಯನ್ನು ಹೊರತೆಗೆಯಲು ತುರ್ತು ವಿಭಾಗದ ಕಿಟಕಿಯನ್ನು ಮುರಿಯಲಾಗಿದೆ ಎಂದು ಪಾಂಡೆ ಹೇಳಿದ್ದಾರೆ.

ಕಾನ್ಪುರ ಪಟ್ಟಣದಲ್ಲಿರುವ ಗಣೇಶ್ ಶಂಕರ್ ವಿದ್ಯಾರ್ಥಿ ವೈದ್ಯಕೀಯ ಕಾಲೇಜಿನ ಭಾಗವಾದ ಎಲ್‌ಪಿಎಸ್ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿಯಲ್ಲಿ ಕನಿಷ್ಠ 146 ರೋಗಿಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ – ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

“ಆಸ್ಪತ್ರೆಯಲ್ಲಿ ಸದ್ಯಕ್ಕೆ ಬೆಂಕಿ ನಿಯಂತ್ರಣದಲ್ಲಿದೆ. ಬೆಂಕಿ ಹರಡಲು ಪ್ರಾರಂಭವಾದ ತಕ್ಷಣ 146 ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಒಂಬತ್ತು ರೋಗಿಗಳು ಇನ್ನೂ ಐಸಿಯುನಲ್ಲಿದ್ದಾರೆ ಆದರೆ ಅವರು ವೈದ್ಯಕೀಯವಾಗಿ ಸುರಕ್ಷಿತವಾಗಿದ್ದಾರೆ. ಇಲ್ಲಿಯವರೆಗೆ ಯಾವುದೇ ಸಾವು- ನೋವು ವರದಿಯಾಗಿಲ್ಲ” ಎಂದು ಕಾನ್ಪುರ ಪೊಲೀಸ್ ಕಮಿಷನರ್ ಅಸೀಮ್ ಅರುಣ್ ಮಾಹಿತಿ ನೀಡಿದ್ದಾರೆ.

ಘಟನೆ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. “ಕಾನ್ಪುರದ ಕಾರ್ಡಿಯಾಲಜಿ ವಿಭಾಗದ ಕಟ್ಟಡದಲ್ಲಿನ ಬೆಂಕಿ ಅವಘಡದ ಬಗ್ಗೆ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದಾರೆ. ಬೇರೆಡೆ ಸ್ಥಳಾಂತರಿಸಿದ ಎಲ್ಲ ರೋಗಿಗಳಿಗೆ ತಕ್ಷಣದ ಆರೈಕೆ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾಡಳಿತದಿಂದ ವರದಿ ಕೇಳಿದ್ದಾರೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಎಲ್‌ಪಿಎಸ್ ಕಾರ್ಡಿಯಾಲಜಿ ಕಾನ್ಪುರ ಪ್ರದೇಶದ ಹೃದಯ ಕಾಯಿಲೆಗೆ ಸಂಬಂಧಿಸಿದ ಅತಿದೊಡ್ಡ ಆಸ್ಪತ್ರೆಯಾಗಿದೆ. ಈ ಆಸ್ಪತ್ರೆಯಲ್ಲಿ 15 ಜಿಲ್ಲೆಗಳ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇತ್ತೀಚೆಗೆ ತುರ್ತು ವಿಭಾಗವನ್ನು ಮತ್ತಷ್ಟು ಆಧುನೀಕರಣ ಮಾಡಲಾಗಿತ್ತು.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...