Homeಮುಖಪುಟತೈಲ ಬೆಲೆ 18 ಪೈಸೆ ಇಳಿಕೆ: ಇಷ್ಟೊಂದು ಹಣ ಉಳಿಸಿ ಏನು ಮಾಡುತ್ತೀರಿ- ರಾಹುಲ್ ವ್ಯಂಗ್ಯ

ತೈಲ ಬೆಲೆ 18 ಪೈಸೆ ಇಳಿಕೆ: ಇಷ್ಟೊಂದು ಹಣ ಉಳಿಸಿ ಏನು ಮಾಡುತ್ತೀರಿ- ರಾಹುಲ್ ವ್ಯಂಗ್ಯ

ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸೆಲ್ ಬೆಲೆಯನ್ನು 17/18 ಪೈಸೆ ಇಳಿಸಿದೆ- ರಾಹುಲ್

- Advertisement -
- Advertisement -

ಪೆಟ್ರೋಲ್-ಡೀಸೆಲ್ ಬೆಲೆಯನ್ನು 17/18 ಪೈಸೆ ಇಳಿಕೆ ಕಂಡಿರುವುದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸೆಲ್ ಬೆಲೆಯನ್ನು 17/18 ಪೈಸೆ ಇಳಿಸಿದೆ. ಇಷ್ಟು ಪ್ರಮಾಣದ ಹಣ ಉಳಿಸಿ ನೀವು ಏನು ಮಾಡುತ್ತೀರಿ?” ಎಂದು ವ್ಯಂಗ್ಯವಾಡಿದ್ದಾರೆ.

ದೇಶದಲ್ಲಿ ತೈಲ ಬೆಲೆ ಒಂದೇ ಸಮನೆ ಏರುತ್ತಾ ಬಂದು ನೂರರ ಗಡಿಯಲ್ಲಿ ನಿಂತಿದೆ. ಇದರ ವಿರುದ್ಧ ದೇಶದಾದ್ಯಂತ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ರಾಹುಲ್ ಗಾಂಧಿ ಕೂಡ ಕಟುವಾಗಿ ಟೀಕಿಸಿದ್ದರು.

ಇದನ್ನೂ ಓದಿ: ಕೇಂದ್ರದ ಸರ್ವಾಧಿಕಾರಿ ಧೋರಣೆ ಹೇಳಿಕೆ: ಮಾಧುಸ್ವಾಮಿ ಅಭಿನಂದಿಸಿದ ಕಾಂಗ್ರೆಸ್ – ತೇಜಸ್ವಿ ಸೂರ್ಯ ಆಕ್ಷೇಪ

ಈ ವಾರದ ಆರಂಭದಲ್ಲಿ, ಬಿಜೆಪಿ ನೇತೃತ್ವದ ಸರ್ಕಾರದ ಆರ್ಥಿಕ ನೀತಿಗಳನ್ನು ದೂಷಿಸುತ್ತಾ, ಇದು ನಿರುದ್ಯೋಗ ಮತ್ತು ಬಡತನವನ್ನು ಹೆಚ್ಚಿಸಿದೆ ಎಂದು ಆರೋಪಿಸಿದ್ದರು.

ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿದಂತೆ 5 ರಾಜ್ಯಗಳಲ್ಲಿ ಒಟ್ಟು 824 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿವೆ.

ಈ ರಾಜ್ಯಗಳಲ್ಲಿ ಮತದಾನವು ಮಾರ್ಚ್ 27 ರಂದು ಪ್ರಾರಂಭವಾಗಿ ಏಪ್ರಿಲ್ 29 ಕ್ಕೆ ಕೊನೆಗೊಳ್ಳುತ್ತದೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆಯ ಮತ ಎಣಿಕೆ ಮೇ 2 ರಂದು ನಡೆಯಲಿದೆ.

ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಯ 2.7 ಲಕ್ಷ ಮತಗಟ್ಟೆಗಳಲ್ಲಿ 18.68 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.

ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತವು ಶನಿವಾರ ಮುಕ್ತಾಯಗೊಂಡಿದೆ.


ಇದನ್ನೂ ಓದಿ: ‘ಆಕೆ’ ವಿಜಯ್ ಮಲ್ಯನೋ ಇಲ್ಲ ನೀರವ್ ಮೋದಿಯೋ? – ಸಿಡಿ ಪ್ರಕರಣದ ಕುರಿತು ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

0
ಕೋವಿಡ್ -19 ವಿರುದ್ಧದ 'ಕೋವಿಶೀಲ್ಡ್‌' ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. TTS ಅಥವಾ...