Homeಮುಖಪುಟಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಹುಮತ ಗಳಿಸಲಿದೆ ಎಂದ ಅಮಿತ್ ಶಾ

ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಹುಮತ ಗಳಿಸಲಿದೆ ಎಂದ ಅಮಿತ್ ಶಾ

- Advertisement -
- Advertisement -

ಮಾರ್ಚ್ 27 ರಂದು ಮೊದಲ ಹಂತದ ಮತದಾನ ಮುಗಿಸಿರುವ ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಬಿಜೆಪಿ ಬಹುಮತದ ಸ್ಥಾನಗಳನ್ನು ಪಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಅಸ್ಸಾಂನ 47 ಮತ್ತು ಪಶ್ಚಿಮ ಬಂಗಾಳದ 30 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಗೆ ಶನಿವಾರ ಮೊದಲ ಹಂತದ ಮತದಾನ ನಡೆದಿದೆ. ಎರಡು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಬಹುಮತದ ಸ್ಥಾನಗಳನ್ನು ಪಡೆಯಲಿದೆ. ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 200 ಕ್ಕೂ ಹೆಚ್ಚು ಸ್ಥಾನಗಳನ್ನು ಸುಲಭವಾಗಿ ಗೆಲ್ಲುತ್ತದೆ ಎಂಬುದನ್ನು ಅಲ್ಲಿಂದ ಪಡೆದ ಪ್ರತಿಕ್ರಿಯೆಗಳ ಆಧಾರದ ಮೇಲೆ ಹೇಳುತ್ತೇನೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಮೊದಲ ಹಂತದಲ್ಲಿ, ಬಂಗಾಳದ 30 ಸ್ಥಾನಗಳಲ್ಲಿ 26 ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಸ್ಥಾನಗಳು ಇನ್ನು ಹೆಚ್ಚಾಗಬಹುದು. ಅಸ್ಸಾಂನ 47 ಸ್ಥಾನಗಳಲ್ಲಿ 37 ಕ್ಕೂ ಹೆಚ್ಚು ಸ್ಥಾನಗಳನ್ನು ಪಕ್ಷವು ಗೆಲ್ಲುತ್ತದೆ ಎಂಬ ಸ್ಪಷ್ಟ ಸೂಚನೆಗಳನ್ನು ನಾವು ಪಡೆದುಕೊಂಡಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಶಾಮೀಲಾಗಿದೆ: ಆಡಿಯೋ ಬಿಡುಗಡೆ ಮಾಡಿದ ಟಿಎಂಸಿ

“ಬಂಗಾಳದಲ್ಲಿ ಮೊದಲ ಹಂತದ ಮತದಾನದಲ್ಲಿ 26 ಸ್ಥಾನಗಳನ್ನು ಗೆದ್ದ ನಂತರ, ವಿಧಾನಸಭೆಯಲ್ಲಿ 200 ಸ್ಥಾನಗಳನ್ನು ಗೆಲ್ಲುವುದು ನಮಗೆ ತುಂಬಾ ಸುಲಭ ಎಂದು ನಾನು ನಂಬುತ್ತೇನೆ. ಪಕ್ಷದ ಕಾರ್ಯಕರ್ತರಲ್ಲಿ ಮತ್ತು ನನಗೆ ಈ ಬಗ್ಗೆ ಸಂಪೂರ್ಣ ನಂಬಿಕೆ ಇದೆ” ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಶೇಕಡಾ 84 ಕ್ಕಿಂತ ಹೆಚ್ಚು ಮತ್ತು ಅಸ್ಸಾಂನಲ್ಲಿ ಶೇಕಡಾ 79 ಕ್ಕಿಂತ ಹೆಚ್ಚು ಮತದಾನ ಆಗಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಅಮಿತ್ ಶಾ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಭಾಗವಹಿಸಿದ್ದಕ್ಕಾಗಿ ಎರಡೂ ರಾಜ್ಯಗಳ ಜನರಿಗೆ ಧನ್ಯವಾದ ತಿಳಿಸಿದ್ದಾರೆ.

ಇತ್ತ, ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸುವ ಬಿಜೆಪಿ ಮುಖಂಡರ ನಡುವಿನ ಫೋನ್ ಮಾತುಕತೆ ಆಡಿಯೋವನ್ನು ಟಿಎಂಸಿ ಬಿಡುಗಡೆ ಮಾಡಿದ್ದು ದೊಡ್ಡ ಕೋಲಾಹಲಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಕೇಂದ್ರದ ಸರ್ವಾಧಿಕಾರಿ ಧೋರಣೆ ಹೇಳಿಕೆ: ಮಾಧುಸ್ವಾಮಿ ಅಭಿನಂದಿಸಿದ ಕಾಂಗ್ರೆಸ್ – ತೇಜಸ್ವಿ ಸೂರ್ಯ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....