Homeಮುಖಪುಟಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳದ ಎಡ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ

ಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳದ ಎಡ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ

- Advertisement -
- Advertisement -

ಪಾಲಕ್ಕಾಡ್‌ನಲ್ಲಿ ಮಂಗಳವಾರ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಕೇರಳದ ಆಡಳಿತಾರೂಢ LDF ಸರ್ಕಾರವು ‘ಕೆಲವು ಚಿನ್ನದ ತುಂಡುಗಳಿಗಾಗಿ’ ರಾಜ್ಯದ ಜನರಿಗೆ ದ್ರೋಹ ಮಾಡಿದೆ” ಎಂದು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ, “ಮುಂಬರುವ ರಾಜ್ಯ ಚುನಾವಣೆಗಳಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಲು ಬೇಕಾಗಿ ನಾನು ನಿಮ್ಮ ನಡುವೆ ಬಂದಿದ್ದೇನೆ. ಜುದಾಸ್‌ ಕೆಲವು ಬೆಳ್ಳಿ ತುಂಡುಗಳಿಗೆ ಏಸು ಕ್ರಿಸ್ತನಿಗೆ ದ್ರೋಹ ಮಾಡಿದನು. ಎಲ್‌ಡಿಎಫ್‌ ಕೆಲವು ಚಿನ್ನದ ತುಂಡುಗಳಿಗೆ ಕೇರಳಕ್ಕೆ ದ್ರೋಹ ಮಾಡಿದೆ” ಎಂದು ಪಾಲಕ್ಕಾಡ್‌‌ನಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಹೇಳಿದ್ದಾರೆ.

ಬಿಜೆಪಿಯ ಸ್ಟಾರ್ ಪ್ರಚಾರಕರಾದ ಮೋದಿ, “ರಾಜ್ಯದಲ್ಲಿ ಆಡಳಿತಾರೂಢ ಎಲ್ಡಿಎಫ್ ಮತ್ತು ವಿರೋಧ ಪಕ್ಷ ಯುಡಿಎಫ್ ಪರಸ್ಪರ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

“ಹಲವು ವರ್ಷಗಳಿಂದ, ಕೇರಳ ರಾಜಕಾರಣದ ಅತ್ಯಂತ ಕೆಟ್ಟ ರಹಸ್ಯವೆಂದರೆ ಯುಡಿಎಫ್ ಮತ್ತು ಎಲ್‌ಡಿಎಫ್‌ ನಡುವಿನ ಸ್ನೇಹಪರ ಒಪ್ಪಂದ. ಏನಿದು ಮ್ಯಾಚ್‌ ಫಿಕ್ಸಿಂಗ್‌ ಎಂದು ಇದೀಗ ಮೊದಲ ಬಾರಿಗೆ ಕೇರಳದ ಮತದಾರರು ಕೇಳುತ್ತಿದ್ದಾರೆ. ಯುಡಿಎಫ್ ಮತ್ತು ಎಲ್‌ಡಿಎಫ್ ಅವರನ್ನು ಹೇಗೆ ದಾರಿ ತಪ್ಪಿಸಿದೆ ಎಂದು ಜನರು ನೋಡುತ್ತಿದ್ದಾರೆ” ಮೋದಿ ಹೇಳಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಒಂದೇ; ಅವರು ಕೇಂದ್ರದ ಯುಪಿಎ -1 ರಲ್ಲೂ ಪಾಲುದಾರರಾಗಿದ್ದರು. ಎಡಪಂಥೀಯರು ಕಾಂಗ್ರೆಸ್‌ಗೆ ಸಂಚಿಕೆ ಆಧಾರಿತ ಬೆಂಬಲವನ್ನು ನೀಡುತ್ತಲೇ ಇದ್ದಾರೆ. ಆದರೆ ಕೇರಳದಲ್ಲಿ ಚುನಾವಣೆಯ ಸಂದರ್ಭದಲ್ಲಿ ಅವರು ಪರಸ್ಪರರ ವಿರುದ್ಧ ಆರೋಪ ಪತ್ಯಾರೋಪಗಳನ್ನು ಮಾಡುತ್ತಾರೆ” ಎಂದು ಅವರು ಹೇಳಿದ್ದಾರೆ.

ಎಲ್‌ಡಿಎಫ್ ಮತ್ತು ಯುಡಿಎಫ್‌‌ ಎರಡೂ ಮೈತ್ರಿಕೂಟಗಳು ಕೇರಳದ ಪ್ರವಾಸೋದ್ಯಮ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ನಡೆಯುವ ‘ಬಂದ್’ಗಳ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನಿ, ಯುಡಿಎಫ್ ಮತ್ತು ಎಲ್‌ಡಿಎಫ್ ಹೆಚ್ಚಿನ ಸಂಖ್ಯೆಯ ರಸ್ತೆ ತಡೆಗಳನ್ನು ನಡೆಸಿ ಅಭಿವೃದ್ಧಿಯ ವೇಗವನ್ನು ನಿಧಾನಗೊಳಿಸುತ್ತಿದೆ ಹೇಳಿದ್ದಾರೆ.

ಕೇರಳ ವಿಧಾನಸಭೆ ಚುನಾವಣೆ 2021 ರ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ನಡೆಯಲಿದೆ. ಫಲಿತಾಂಶಗಳು ಮೇ 2 ರಂದು ಪ್ರಕಟವಾಗಲಿದೆ.

ಇದನ್ನೂ ಓದಿ: ಉಪ ಕುಲಪತಿ ಹುದ್ದೆ ಕೊಡಿಸುವುದಾಗಿ 17.5 ಲಕ್ಷ ವಂಚನೆ – ರಾಮಸೇನೆಯ ಸಂಸ್ಥಾಪಕ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...