Homeಅಂತರಾಷ್ಟ್ರೀಯಜಾರ್ಜ್ ಫ್ಲಾಯ್ಡ್ ಹತ್ಯೆಯ ಪ್ರಧಾನ ಆರೋಪಿ ‘ಡೆರೆಕ್ ಚೌವಿನ್’‌ ವಿಚಾರಣೆ ಪ್ರಾರಂಭ

ಜಾರ್ಜ್ ಫ್ಲಾಯ್ಡ್ ಹತ್ಯೆಯ ಪ್ರಧಾನ ಆರೋಪಿ ‘ಡೆರೆಕ್ ಚೌವಿನ್’‌ ವಿಚಾರಣೆ ಪ್ರಾರಂಭ

- Advertisement -
- Advertisement -

ಅಮೆರಿಕದಲ್ಲಿ ಕಳೆದ ಮೇನಲ್ಲಿ ಆಫ್ರಿಕನ್-ಅಮೆರಿಕನ್ ವ್ಯಕ್ತಿ ಜಾರ್ಜ್ ಫ್ಲಾಯ್ಡ್‌ನನ್ನು ಹತ್ಯೆ ಮಾಡಿದ ಆರೋಪಿ ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ ವಿಚಾರಣೆ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ಐಎಎನ್‌ಎಸ್ ವರದಿ ಮಾಡಿದೆ.

ಸೋಮವಾರದ ವಿಚಾರಣೆಯಲ್ಲಿ ಆರಂಭಿಕ ಹೇಳಿಕೆಗಳನ್ನು ಪಡೆಯಲಾಗಿದೆ. ಹತ್ಯೆಗೀಡಾದ ಫ್ಲಾಯ್ಡ್ ಕುಟುಂಬದ ಸದಸ್ಯರು ಮತ್ತು ಅವರ ಕಾನೂನು ತಂಡದ ತಂಡವು ಮಿನ್ನಿಯಾಪೋಲಿಸ್ ನ್ಯಾಯಾಲಯದ ಮುಂದೆ ಎಂಟು ನಿಮಿಷ 46 ಸೆಕೆಂಡುಗಳ ಕಾಲ ಹೇಳಿಕೆ ನೀಡಿತು.

ಇದನ್ನೂ ಓದಿ: ಟ್ರಂಪ್ ಸೋತರೂ, ಟ್ರಂಪ್‌ಯಿಸಂ ಉಳಿದಿದೆ: ಆದರೂ ಯುವ ಅಮೆರಿಕ ಭರವಸೆ ಮೂಡಿಸಿದೆ

ಆರೋಪಿ ಡೆರೆಕ್ ಚೌವಿನ್‌ ಜಾರ್ಜ್ ಫ್ಲಾಯ್ಡ್‌ ಅವರ ಕುತ್ತಿಗೆಗೆ ಮಂಡಿಯನ್ನುಟ್ಟು ಹತ್ಯೆ ಮಾಡಿದ್ದನು. ಘಟನೆ ನಡೆಯುತ್ತಿದ್ದಾಗ ಜಾರ್ಜ್ ಫ್ಲಾಯ್ಡ್‌ ನನಗೆ ಉಸಿರಾಡಲು ಸಾಧ್ಯವಾಗುತ್ತಿಲ್ಲ ಎಂದು ಮನವಿ ಮಾಡಿದ್ದರು. ಘಟನಾ ಸ್ಥಳದಲ್ಲಿ ಇದ್ದ ಸಾರ್ವಜನಿಕರು ಕೂಡಾ ಈ ಬಗ್ಗೆ ಅವರಿಗೆ ಹೇಳಿದ್ದರು. ಆದರೆ ಪೊಲೀಸ್ ಅಧಿಕಾರಿಯೂ ಇದನ್ನು ಗಣನೆಗೆ ತೆಗೆದುಕೊಂಡಿರಲಿಲ್ಲ.

“ಇದು ಜಾರ್ಜ್ ಫ್ಲಾಯ್ಡ್ ವಿಚಾರಣೆಯಲ್ಲ. ಇದು ಡೆರೆಕ್ ಚೌವಿನ್ ಅವರ ವಿಚಾರಣೆಯಾಗಿದೆ. ನಾವು ಅದರ ಬಗ್ಗೆ ಮಾತನಾಡುವಾಗಲೆಲ್ಲಾ ಅದನ್ನು ಉಲ್ಲೇಖಿಸಬೇಕು ಮತ್ತು ಮಾತನಾಡಬೇಕು” ಎಂದು ಅಟಾರ್ನಿ ಜಸ್ಟಿನ್ ಮಿಲ್ಲರ್ ಹೇಳಿದ್ದಾರೆ.

“ಇಂದು ಮಹತ್ವದ ವಿಚಾರಣೆ ಪ್ರಾರಂಭವಾಗುತ್ತಿದೆ. ಎಲ್ಲರಿಗೂ ಸಮಾನತೆ ಮತ್ತು ನ್ಯಾಯಕ್ಕಾಗಿ ಅಮೆರಿಕ ಎಷ್ಟು ದೂರ ಬಂದಿದೆ ಎಂಬುದರ ಬಗ್ಗೆ ಜನಾಭಿಪ್ರಾಯ ಸಂಗ್ರಹವಾಗಲಿದೆ” ಎಂದು ನಾಗರಿಕ ಹಕ್ಕುಗಳ ವಕೀಲ ಬೆನ್ ಕ್ರಂಪ್ ಸೋಮವಾರ ನ್ಯಾಯಾಲಯದ ಹೊರಗೆ ಹೇಳಿದ್ದಾರೆ.

ಇದನ್ನೂ ಓದಿ: ‘ಮೇಕ್ ಅಮೆರಿಕ ಗ್ರೇಟ್ ಅಗೈನ್’ v/s ‘ಬ್ಲ್ಯಾಕ್ಸ್ ಲೈವ್ಸ್ ಮ್ಯಾಟರ್’

“ಈ ಕೊಲೆ ಪ್ರಕರಣವು ವಾದಿಸಲು ಅಷ್ಟೇನೂ ಕಠಿಣವಲ್ಲ, ಜಾರ್ಜ್ ಫ್ಲಾಯ್ಡ್ ಅವರ ಚಿತ್ರಹಿಂಸೆ ವೀಡಿಯೊವನ್ನು ನೋಡಿದರೆ ಸಾಕು” ಎಂದು ಬೆನ್ ಕ್ರಂಪ್ ಹೇಳಿದ್ದಾರೆ.

ಮೇ 25, 2020 ರಂದು ಈ ಅಮಾನವೀಯ ನಡೆದಿದ್ದು, ಘಟನೆಯ ನಂತರ ಆರೋಪಿಯನ್ನು ಪೊಲೀಸ್ ಇಲಾಖೆಯಿಂದ ವಜಾ ಮಾಡಿತ್ತು. ಘಟನೆಯ ವೀಡಿಯೋ ವೈರಲ್ ಆಗಿದ್ದು ವಿಶ್ವದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿ ‘ಬ್ಲಾಕ್‌ ಲೈವ್ಸ್ ಮ್ಯಾಟರ್‌’ ಚಳವಳಿ ಪ್ರಾರಂಭವಾಗಿತ್ತು.

ಘಟನಾ ಸ್ಥಳದಲ್ಲಿದ್ದ ಇತರ ಮೂವರು ಮಾಜಿ ಅಧಿಕಾರಿಗಳಾದ ಜೆ. ಅಲೆಕ್ಸಾಂಡರ್ ಕುಯೆಂಗ್, ಥಾಮಸ್ ಲೇನ್ ಮತ್ತು ಟೌ ಥಾವೊ ಕೂಡ ಹತ್ಯೆಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಅವರ ವಿಚಾರಣೆ ಆಗಸ್ಟ್‌ನಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ವರ್ಣಬೇಧ ನೀತಿಯ ಬಲಿಪಶು ಜಾರ್ಜ್ ಫ್ಲಾಯ್ಡ್ ಕುಟುಂಬಕ್ಕೆ 196 ಕೋಟಿ ರೂ. ಪರಿಹಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಆಟೋ ಚಾಲಕನಾಗಿ ಕೆಲಸ ಮಾಡುವ ತಂದೆಯೊಬ್ಬರು ಕೈಯಲ್ಲಿ ಸಿಹಿ ತಿಂಡಿಯ ಪೆಟ್ಟಿಗೆಯೊಂದಿಗೆ ಮನೆಗೆ ಹೆಜ್ಜೆ ಹಾಕುತ್ತಾರೆ. ಅದನ್ನು ನೋಡಿದ ಮಗಳು, "ಏನಪ್ಪಾ ವಿಶೇಷ, ಇವತ್ತು ಹುಟ್ಟುಹಬ್ಬನಾ, ಹಬ್ಬನಾ ಅಥವಾ ಕುಟುಂಬದ ಸಂಭ್ರಮನಾ?" ಎಂದು...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...