Homeಕರ್ನಾಟಕಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

ಸಿಡಿ ಹಗರಣ: SIT ನಿಷ್ಪಕ್ಷಪಾತ ತನಿಖೆ ಅನುಮಾನವೆಂದು ಗೃಹಮಂತ್ರಿಗಳಿಗೆ ಪತ್ರ ಬರೆದ ನಾವೆದ್ದು ನಿಲ್ಲದಿದ್ದರೇ ವೇದಿಕೆ

"ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು"

- Advertisement -
- Advertisement -

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆ ವಿಷಯದಲ್ಲಿ ರಾಜಕೀಯ ನಾಯಕರು ಮಾಧ್ಯಮಗಳು ಸೇರಿದಂತೆ ಹಲವರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವುದನ್ನು ವಿರೋಧಿಸಿ ನಾವೆದ್ದು ನಿಲ್ಲದಿದ್ದರೇ ಮಹಿಳಾ ವೇದಿಕೆ ಗೃಹ ಮಂತ್ರಿಗಳಿಗೆ ಬಹಿರಂಗ ಪತ್ರ ಬರೆದಿದೆ.

ಸಂವಿಧಾನವನ್ನು ಜಾರಿಗೆ ತರುವ ಮತ್ತು ಮಹಿಳೆಯರ ಸುರಕ್ಷೆಯನ್ನು ಖಾತ್ರಿಪಡಿಸುವ ಜವಾಬ್ದಾರಿ ಯಾವುದೇ ಸರಕಾರದ್ದಾಗಿರುತ್ತದೆ. ಮತ್ತು ಸರಕಾರದ ಸಚಿವರು, ಶಾಸಕರು ಈ ವಿಷಯಗಳಲ್ಲಿ ಮಾದರಿಗಳಾಗಿ ನಿಲ್ಲಬೇಕು. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಘಟನೆಗಳು ಅದಕ್ಕೆ ವ್ಯತಿರಿಕ್ತವಾಗಿವೆ ಎಂದು ವೇದಿಕೆ ಆಕ್ರೋಶ ಹೊರ ಹಾಕಿದೆ.

ಪ್ರಕರಣದ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡವೊಂದನ್ನು ನೇಮಿಸಿದೆ. ದುರಂತವೆಂದರೆ ಈ ತನಿಖಾ ತಂಡ ಒಂದು ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಬಯಲಿಗೆಳೆಯುವ ಸಂಭವ ಕಡಿಮೆ ಇದೆ ಎಂಬ ಅನುಮಾನವನ್ನು ವೇದಿಕೆ ಹೊರಹಾಕಿದೆ. ಪ್ರಕರಣವನ್ನು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ಮಾಡಿ ಅಮೂಲಾಗ್ರ ಶೋಧನೆಯನ್ನು ಜನರ ಮುಂದಿಡುವ ಹೊಣೆಗಾರಿಕೆ ಎಸ್.ಐ.ಟಿ.ಯದಾಗಬೇಕು. ಆದರೆ ಮೊದಲ ದಿನದಿಂದಲೇ ಅದು ಸತ್ಯ ಶೋಧನೆಯ ಬದಲು ಸಂಚು ಬಯಲು ಮಾಡುವ ಜಾಡು ಹಿಡಿದಿದೆ ಎಂದು ವೇದಿಕೆ ಆರೋಪಿಸಿದೆ.

ಇದನ್ನೂ ಓದಿ: ಕೋರ್ಟ್‌ಗೆ ಹಾಜರಾದ ಸಂತ್ರಸ್ತ ಯುವತಿ: ಅರೆಸ್ಟ್ ಆಗುವರೆ ರಮೇಶ್ ಜಾರಕಿಹೊಳಿ?

ಈ ಹಿನ್ನೆಲೆಯಲ್ಲಿ ನಾವೆದ್ದು ನಿಲ್ಲದಿದ್ದರೇ ವೇದಿಕೆ ಪ್ರಕರಣ ಕುರಿತು ನ್ಯಾಯಯುತ ತನಿಖೆಗೆ ಆಗ್ರಹಿಸಿ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.

1. ಪ್ರಕರಣದ ಆರೋಪಿ ಮತ್ತು ಅವರ ಬೆಂಬಲಿಗರು ಆಳುವ ಪಕ್ಷದ ಭಾಗ ಮತ್ತು ಪ್ರಭಾವೀ ವ್ಯಕ್ತಿಯಾಗಿರುವುದರಿಂದ ಸರಕಾರದ ಅಧೀನದಲ್ಲಿ ಕೆಲಸ ಮಾಡಬೇಕಾಗಿರುವ ವಿಶೇಷ ತನಿಖಾ ತಂಡ ನಿಷ್ಪಕ್ಷಪಾತ ತನಿಖೆ ನಡೆಸಲಾರದು ಎಂಬ ಬಲವಾದ ಅನುಮಾನಗಳಿವೆ. ಈ ಕಾರಣದಿಂದ ಈ ಪ್ರಕರಣದ ತನಿಖೆಯನ್ನು ಉಚ್ಛ ನ್ಯಾಯಾಲಯದ ಸುಪರ್ದಿಯಲ್ಲಿ ನಡೆಸಬೇಕು.

2. ನಿರ್ಭಯಾ ಕಾನೂನು/ಕ್ರಿಮಿನಲ್ ಲಾ ತಿದ್ದುಪಡಿಯ ಪ್ರಕಾರ ಅತ್ಯಾಚಾರದ ಪ್ರಕರಣಗಳಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಕಡ್ಡಾಯವಾಗಿ ಅನ್ವಯಿಸಬೇಕು.

3. ಕಾನೂನು ದೇಶದ ಎಲ್ಲ ಜನರಿಗೆ ಒಂದೇ ಆಗಿರುವುದರಿಂದ ಈ ಪ್ರಕರಣದ ಆರೋಪಿಯನ್ನೂ ಕೂಡಾ ಕಟ್ಟುನಿಟ್ಟಾದ ಕಾನೂನು ಪ್ರಕ್ರಿಯೆಗೆ ಒಳಪಡಿಸಬೇಕು.

4.  ದೂರುದಾರರಿಗೆ ಸೂಕ್ತ ರಕ್ಷಣೆ ಒದಗಿಸಬೇಕು.

5. ಪ್ರಕರಣವು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದ್ದು ರಾಜಕೀಯ ಮೇಲಾಟದಲ್ಲಿ ಮಹಿಳೆಯರನ್ನು ಕೀಳಾಗಿ ಬಳಸಿಕೊಳ್ಳುವುದಕ್ಕೆ ಲಗಾಮು ಹಾಕಬೇಕು.

6. ಪ್ರಕರಣದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು.

7. ಸಚಿವರೊಬ್ಬರ ಮೇಲೆ ಬಂದ ಆರೋಪವನ್ನು ತಳ್ಳಿ ಹಾಕುವ ಮತ್ತದನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಹಿಳೆಯರ ಹಾಗೂ ಆ ಮೂಲಕ ಶಾಸನ ಸಭೆಯ ಘನತೆಗೆ ಕುಂದುಂಟು ಮಾಡುವಂತೆ ಮಾತನಾಡಿದ ಸಚಿವ ಡಾ.ಸುಧಾಕರ್ ರವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಕ್ಷೇತ್ರದಲ್ಲಿರುವವರು ಸಾರ್ವಜನಿಕರಿಗೆ ಉತ್ತರದಾಯಿತ್ವವನ್ನು ಹೊಂದಿರುತ್ತಾರೆ. ಅವರು ಶಾಸನಸಭೆಯ ಕಲಾಪಗಳನ್ನು ಜನರ ಪ್ರಶ್ನೆಗಳ ಆಧಾರದಲ್ಲಿ ಚರ್ಚೆಗೆ ಮೀಸಲಿಡದೇ ಮನ ಬಂದಂತೆಲ್ಲ ವರ್ತಿಸುವುದು ಸರಿಯಲ್ಲ. ಇದು ಅವರ ಖಾಸಗಿ ಸಂಗತಿಗಳಲ್ಲ.

8. ಸುದ್ದಿ ಮಾಧ್ಯಮಗಳು ಮಹಿಳಾವಿರೋಧಿ, ಸೆಕ್ಸೀಸ್ಟ್ ನೆಲೆಯಲ್ಲಿ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವುದನ್ನು ಪ್ರೆಸ್ ಕೌನ್ಸಿಲ್ ಗಂಭೀರವಾಗಿ ಪರಿಗಣಿಸಬೇಕು.

ಈ ಬೇಡಿಕೆಗಳನ್ನು ನಾವೆದ್ದು ನಿಲ್ಲದಿದ್ದರೇ ವೇದಿಕೆ ಪರವಾಗಿ ವಿಮಲಾ. ಕೆ.ಎಸ್. ಲಕ್ಷ್ಮಿ ಕೆ.ಎಸ್. (ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ) ಮಮತಾ ಯಜಮಾನ್ (ಗಮನ ಮಹಿಳಾ ಸಂಘಟನೆ), ಗಾಂಧಿಮತಿ ( ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆ) ಸರ್ಕಾರದ ಮುಂದಿಟ್ಟಿದ್ದಾರೆ.


ಇದನ್ನೂ ಓದಿ: ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...