Homeಕರೋನಾ ತಲ್ಲಣದೇಶದ ಅತಿಹೆಚ್ಚು ಕೊರೊನಾ ಪ್ರಕರಣಗಳಿರುವ 10 ಜಿಲ್ಲೆಗಳಲ್ಲಿ 8 ಮಹಾರಾಷ್ಟ್ರಕ್ಕೆ ಸೇರಿದವು- ಆರೋಗ್ಯ ಇಲಾಖೆ

ದೇಶದ ಅತಿಹೆಚ್ಚು ಕೊರೊನಾ ಪ್ರಕರಣಗಳಿರುವ 10 ಜಿಲ್ಲೆಗಳಲ್ಲಿ 8 ಮಹಾರಾಷ್ಟ್ರಕ್ಕೆ ಸೇರಿದವು- ಆರೋಗ್ಯ ಇಲಾಖೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ದಿನೇ ದಿನೇ ಅಧಿಕಗೊಳ್ಳುತ್ತಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ದೇಶದ 10 ಜಿಲ್ಲೆಗಳಲ್ಲಿ 8 ಜಿಲ್ಲೆಗಳು ಮಹಾರಾಷ್ಟ್ರದಲ್ಲಿಯೇ ಇವೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಪರಿಸ್ಥಿತಿಯ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿದೆ. ದೇಶದ ಅತಿ ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿರುವ 10 ಜಿಲ್ಲೆಗಳಲ್ಲಿ ಮಹಾರಾಷ್ಟ್ರ ಹೆಚ್ಚು ಪಾಲು ಹೊಂದಿದೆ ಎಂದಿದ್ದಾರೆ.

“ದೇಶಾದ್ಯಂತ ಪುಣೆ, ಮುಂಬೈ, ನಾಗ್ಪುರ, ಥಾಣೆ, ನಾಸಿಕ್, ಔರಂಗಾಬಾದ್, ಬೆಂಗಳೂರು ನಗರ, ನಾಂದೇಡ್, ದೆಹಲಿ ಮತ್ತು ಅಹ್ಮದ್‌ನಗರಗಳು ಹೆಚ್ಚು ಕೊರೊನಾ ಸಕ್ರಿಯ ಪ್ರಕರಣಗಳನ್ನು ಹೊಂದಿರುವ 10 ಜಿಲ್ಲೆಗಳಾಗಿವೆ” ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕೇರಳ: ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯ ಕಾರನ್ನು ತಡೆದು ಪತಿಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ…

RT-PCR ಪರೀಕ್ಷೆಗಳನ್ನು ಹೆಚ್ಚಿಸಲು, ಸೋಂಕಿತರನ್ನು ಪರಿಣಾಮಕಾರಿಯಾಗಿ ಮತ್ತು ತ್ವರಿತವಾಗಿ ಪ್ರತ್ಯೇಕಿಸಲು, ಅವರ ಸಂಪರ್ಕದಲ್ಲಿದ್ದವರನ್ನು ಪತ್ತೆಹಚ್ಚಲು ಅವಶ್ಯಕ ಕ್ರಮಗಳನ್ನು ರಾಜ್ಯ ಸರ್ಕಾರಗಳು ಮಾಡಬೇಕು ಎಂದಿದೆ. ಕೊರೊನಾ ನಿಯಮಾವಳಿಗಳನ್ನು ಅನುಸರಿಸಲು ಸಾರ್ವಜನಿಕರಿಗೆ ತಿಳಿಸುವುದು ಮತ್ತು ಲಸಿಕೆ ವಿತರಣೆಯನ್ನು ಸಮರ್ಪಕವಾಗಿ ಮಾಡಲು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಆದರೆ, ಇಲ್ಲಿಯವರೆಗೆ ನಾವು ಮಹಾರಾಷ್ಟ್ರ ಸರ್ಕಾರದಿಂದ ಯಾವುದೇ ನಿರ್ದಿಷ್ಟ ಮನವಿ ಸ್ವೀಕರಿಸಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಉಲ್ಬಣ ಹಿನ್ನೆಲೆ ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಜನ ಸೇರುವುದನ್ನು ತಡೆಯಲಾಗಿದೆ. ಕೊರೊನಾ ನಿಯಮಗಳ ಪಾಲನೆ ಕಡ್ಡಾಯ ಮಾಡಲಾಗಿದೆ.

ಜನರು ಕೊರೊನಾ ನಿಯಮಾವಳಿಗಳನ್ನು ಅನುಸರಿಸದ ಕಾರಣ ಲಾಕ್‌ಡೌನ್ ವಿಧಿಸುವ ಯೋಜನೆಯನ್ನು ಸಿದ್ಧಪಡಿಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಭಾನುವಾರ ಸಿಎಂ ಕಚೇರಿಯ ಅಧಿಕೃತ ಹೇಳಿಕೆ ತಿಳಿಸಿತ್ತು.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...