Homeಮುಖಪುಟಅವಹೇಳನಕಾರಿ ಹೇಳಿಕೆ: ಡಿಎಂಕೆ ಮುಖಂಡ ಎ ರಾಜಾ ಅವರಿಗೆ ಚುನಾವಣಾ ಆಯೋಗ ನೋಟಿಸ್

ಅವಹೇಳನಕಾರಿ ಹೇಳಿಕೆ: ಡಿಎಂಕೆ ಮುಖಂಡ ಎ ರಾಜಾ ಅವರಿಗೆ ಚುನಾವಣಾ ಆಯೋಗ ನೋಟಿಸ್

- Advertisement -
- Advertisement -

ತಮಿಳುನಾಡು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಜನನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂಬ ಕಾರಣಕ್ಕೆ ಡಿಎಂಕೆ ಮುಖಂಡ ಎ. ರಾಜಾ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.

ಮಾಜಿ ಕೇಂದ್ರ ಸಚಿವ ಮತ್ತು ಡಿಎಂಕೆಯ ‘ಸ್ಟಾರ್ ಪ್ರಚಾರಕ’ರಾಗಿರುವ ಎ. ರಾಜಾ ಅವರನ್ನು ಬುಧವಾರ ಸಂಜೆ 6 ಗಂಟೆಯೊಳಗೆ ನೋಟಿಸ್‌ಗೆ ಪ್ರತಿಕ್ರಿಯಿಸುವಂತೆ ಆದೇಶಿಸಲಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಮಾರ್ಚ್ 31 ರಂದು 6 ಗಂಟೆ ಅಥವಾ ಅದಕ್ಕೂ ಮುನ್ನ ನಿಮ್ಮ ನಿಲುವನ್ನು ಆಯೋಗಕ್ಕೆ ತಿಳಿಸುವಂತೆ ಅವಕಾಶ ನೀಡಿದೆ. ಒಂದು ವೇಳೆ ಅದು ವಿಫಲವಾದರೆ ಆಯೋಗವು ನಿಮಗೆ ಯಾವುದೇ ಮುನ್ಸೂಚನೆ ನೀಡದೆ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ ಡಿಎಂಕೆ ಮುಖಂಡ ಎ.ರಾಜಾ, ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಉದಯಾನಿಧಿ ಸ್ಟಾಲಿನ್ ಪರ ಪ್ರಚಾರ ಮಾಡುವ ವೇಳೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು AIADMK ಮತ್ತು ಬಿಜೆಪಿ ಪ್ರತಿಭಟನೆ ನಡೆಸಿದ್ದರು. ಚುನಾವಣಾ ಪ್ರಚಾರಗಳಲ್ಲಿ ಭಾಗವಹಿಸದಂತೆ ತಡೆಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ ಆಯೋಗವು ಈಗ ನೋಟಿಸ್ ನೀಡಿದೆ.

ಇದನ್ನೂ ಓದಿ: ಸರ್ಕಾರ ಎಂದರೆ ದೇಶ ಅಲ್ಲ… ದೇಶವೆಂಬುದು ಸರ್ಕಾರಕ್ಕಿಂತ ದೊಡ್ಡದು: ಡಿ ಉಮಾಪತಿ

ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ, ’ಪಳನಿಸ್ವಾಮಿ ಜನನ ಅಕ್ರಮ ಸಂಬಂಧದಿಂದ ಮತ್ತು ಅಕಾಲಿಕ ಜನನ’ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೂ ಮೊದಲು ಮುಖ್ಯಮಂತ್ರಿಯನ್ನು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರ ಚಪ್ಪಲಿಗಿಂತ ಒಂದು ರೂಪಾಯಿ ಕಡಿಮೆ ಎಂದು ಕರೆದಿದ್ದರು.

ಹಾಗಾಗಿ ಎ.ರಾಜಾ ವಿರುದ್ಧ ಐಪಿಸಿಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 294 ಬಿ (ಸಾರ್ವಜನಿಕ ಸ್ಥಳದಲ್ಲಿ ಕೆಟ್ಟ ಭಾಷೆ) ಮತ್ತು ಜನರ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 127 (ಚುನಾವಣಾ ಸಭೆಗಳಲ್ಲಿ ಅಡಚಣೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆದರೆ ಘಟನೆ ಕುರಿತು ಕ್ಷಮೆಯಾಚಿಸರುವ ಎ ರಾಜಾ, “ನಾನು ನನ್ನ ಹೇಳಿಕೆಯನ್ನು ಪುನರುಚ್ಚರಿಸುತ್ತೇನೆ. ನನ್ನ ಭಾಷಣವು ಇಬ್ಬರು ನಾಯಕರ ವಿರುದ್ಧದ ವೈಯಕ್ತಿಕ ಟೀಕೆ ಅಲ್ಲ. ನನ್ನ ಭಾಷಣವು ಸಾರ್ವಜನಿಕ ಜೀವನದಲ್ಲಿರುವ ಇಬ್ಬರು ವ್ಯಕ್ತಿಗಳ ಹೋಲಿಕೆಯಾಗಿದೆ” ಎಂದಿದ್ದರು.

“ನನ್ನ ಮಾತುಗಳಿಂದ ಮುಖ್ಯಮಂತ್ರಿಗಳಿಗೆ ನೋವುಂಟಾಗಿದೆ ಎಂದು ಮಾಧ್ಯಮಗಳಲ್ಲಿ ಓದಿ ನನಗೆ ನೋವಾಗಿದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಆದರೂ ನಾನು ಈ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ. ಇದಲ್ಲದೆ, ರಾಜಕೀಯ ಕಾರಣಗಳನ್ನು ಬಿಟ್ಟು, ಇದರಿಂದ ಅವರಿಗೆ ನೋವುಂಟಾಗಿದ್ದರೆ, ಮನಃಪೂರ್ವಕವಾಗಿ ಕ್ಷಮೆಯಾಚಿಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದು ಎ.ರಾಜಾ ಹೇಳಿದ್ದರು.


ಇದನ್ನೂ ಓದಿ: ಸಿಎಂ ಪಳನಿಸ್ವಾಮಿ ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆ ಕೇಳಿದ ಡಿಎಂಕೆ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...