ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾಗಿರುವ 1200 ಕೋಟಿಗೆ ಸಂಬಂಧಿಸಿದಂತೆ ಕಾನೂನು ಮೀರಿ ಮುಖ್ಯಮಂತ್ರಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಬುಧವಾರ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
“ಗ್ರಾಮೀಣ ಸುಮಾರ್ಗ ಯೋಜನೆಗೆ ಪದೇ ಪದೇ ಮನವಿ ಮಾಡ್ತಿದ್ದೇನೆ. ಆದರೆ ಇನ್ನೂ ಆಡಳಿತಾತ್ಮಕ ಅನುಮೋದನೆ ಕೊಟ್ಟಿಲ್ಲ. ಯಡಿಯೂರಪ್ಪನವರು 32 ಬಿಜೆಪಿ ಶಾಸಕರಿಗೆ ತಲಾ 20 ರಿಂದ 23 ಕೋಟಿ ರೂಪಾಯಿಗಳನ್ನು, 42 ಬಿಜೆಪಿ ಶಾಸಕರಿಗೆ ತಲಾ 10 ಕೋಟಿ ರೂಪಾಯಿಗಳನ್ನು, ಕಾಂಗ್ರೆಸ್‌ನ 30 ಮಂದಿ ಶಾಸಕರಿಗೆ 5 ಕೋಟಿ ರೂಪಾಯಿಗಳನ್ನು ಹಾಗೂ ಜೆಡಿಎಸ್‌ನ 18 ಮಂದಿ ಶಾಸಕರಿಗೆ ಸರ್ಕಾರದಿಂದ ತಲಾ 5 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡವಂತೆ ಆದೇಶ ಹೊರಡಿಸಿದ್ದಾರೆ” ಎಂದು ಈಶ್ವರಪ್ಪ ಆರೋಪಿಸಿದ್ದರು.
ಇದನ್ನೂ ಓದಿ: ಮುಖ್ಯಮಂತ್ರಿ ವಿರುದ್ದವೇ ರಾಜ್ಯಪಾಲರಿಗೆ ದೂರು ನೀಡಿದ ಸಚಿವ ಈಶ್ವರಪ್ಪ!
ಮುಖ್ಯಮಂತ್ರಿಗಳ @BSYBJP ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ.
ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು.
1/10 pic.twitter.com/jwM0PGi9BX— Siddaramaiah (@siddaramaiah) April 1, 2021
“ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ, ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಬಿಜೆಪಿ ಮುಖಂಡರ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಮೈತ್ರಿ ಸರ್ಕಾರದ ಶಾಸಕರಿಗೆ ಯಡಿಯೂರಪ್ಪ ಹಣದ ಆಮಿಷ: ತನಿಖೆಗೆ ಆದೇಶಿಸಿದ ಕೋರ್ಟ್
“ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ಈ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ ಮೂಲಕ ಬಹಿರಂಗ ಗೊಳಿಸಿದ್ದಾರೆ. ನಮ್ಮ ಸರ್ಕಾರ 10% ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ ನೀವೇ ರಾಜ್ಯ ಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ’ ಎಂದು ವ್ಯಂಗ್ಯವಾಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, “ನಾ ಖಾವುಂಗಾ, ನಾ ಖಾನೆ ದೂಂಗಾ” ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು “ಮೈ ಬಿ ಖಾವೂಂಗಾ, ತುಮ್ ಬಿ ಖಾವೋ” (ನಾನು ತಿನ್ನುತ್ತೇನೆ, ನೀವು ತಿನ್ನಿ) ಎಂದು ಬದಲಿಸಿ ಬಿಡಿ ಎಂದು ಮೋದಿಯವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.
“ಆಪರೇಷನ್ ಕಮಲ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ. ರಾಜ್ಯದ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಸಬೇಕು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ನಿಮಗೆ ಅಧಿಕಾರ ಸಿಕ್ಕಿದ್ದು ಅಲ್ಪನಿಗೆ ಐಶ್ವರ್ಯ ಸಿಕ್ಕಂತಾಗಿದೆ: ಸಿಎಂ v/s ಈಶ್ವರಪ್ಪ ಬಗ್ಗೆ ಕಾಂಗ್ರೆಸ್



Mana maryade elaada BJP
Joothe Pradhana mantri yelaru mannu tinake hogi 3bitoru Bluejpyavaru thuuu nim mukhake nayi uuche ooyaaa