Homeಮುಖಪುಟಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ಅವಹೇಳನಕಾರಿ ಹೇಳಿಕೆ: ಪ್ರಚಾರದಿಂದ ಎ ರಾಜಾಗೆ 48 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

- Advertisement -
- Advertisement -

ತಮಿಳುನಾಡು ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ತಾಯಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಡಿಎಂಕೆ ನಾಯಕ ಎ. ರಾಜಾಗೆ ಮುಂದಿನ 48 ಗಂಟೆಗಳ ಕಾಲ ಯಾವ ಚುನಾವಣಾ ಪ್ರಚಾರದಲ್ಲೂ ಭಾಗವಹಿಸುವಂತಿಲ್ಲ ಎಂದು ಚುನಾವಣಾ ಆಯೋಗ ಆದೇಶಿಸಿದೆ.

ಎ.ರಾಜಾ, ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಉದಯಾನಿಧಿ ಸ್ಟಾಲಿನ್ ಪರ ಪ್ರಚಾರ ಮಾಡುವ ವೇಳೆ ಮುಖ್ಯಮಂತ್ರಿ ಪಳನಿಸ್ವಾಮಿ ಅವರ ಜನನ ಅಕ್ರಮವಾದದ್ದು ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದು ತಮಿಳುನಾಡು ರಾಜಕೀಯದಲ್ಲಿ ವಿವಾದ ಉಂಟುಮಾಡಿತ್ತು.

ಈ ಕುರಿತು ಮಾಜಿ ಕೇಂದ್ರ ಸಚಿವ ಮತ್ತು ಡಿಎಂಕೆಯ ‘ಸ್ಟಾರ್ ಪ್ರಚಾರಕ’ರಾಗಿರುವ ಎ. ರಾಜಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರನ್ನೂ ನೀಡಲಾಗಿತ್ತು. ಈ ಸಂಬಂಧ ಇಂದು (ಏಪ್ರಿಲ್ 1) ಈ ವಿಚಾರಣೆ ನಡೆಸಿದ್ದು, “ಎ. ರಾಜಾ ಅವಹೇಳನಕಾರಿ ಹೇಳಿಕೆ ನೀಡಿರುವುದು ಸಾಬೀತಾಗಿದೆ. ಹೀಗಾಗಿ ಅವರು ಮುಂದಿನ 48 ಗಂಟೆಗಳ ಕಾಲ ಯಾವ ಚುನಾವಣಾ ಪ್ರಚಾರದಲ್ಲೂ ಭಾಗವಹಿಸುವಂತಿಲ್ಲ” ಎಂದು ಆದೇಶಿಸಿದೆ.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ: ಡಿಎಂಕೆ ಮುಖಂಡ ಎ ರಾಜಾ ಅವರಿಗೆ ಚುನಾವಣಾ ಆಯೋಗ ನೋಟಿಸ್

ಏಪ್ರಿಲ್ 6 ರಂದು ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ ಡಿಎಂಕೆ ಮುಖಂಡ ಎ.ರಾಜಾ, ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಉದಯಾನಿಧಿ ಸ್ಟಾಲಿನ್ ಪರ ಪ್ರಚಾರ ಮಾಡುವ ವೇಳೆ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು AIADMK ಮತ್ತು ಬಿಜೆಪಿ ಪ್ರತಿಭಟನೆ ನಡೆಸಿದ್ದರು. ಚುನಾವಣಾ ಪ್ರಚಾರಗಳಲ್ಲಿ ಭಾಗವಹಿಸದಂತೆ ತಡೆಯುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಇದನ್ನು ಪರಿಗಣಿಸಿದ್ದ ಚುನಾವಣಾ ಆಯೋಗ ಕಳೆದ ಬುಧವಾರವೇ ನೊಟೀಸ್​ ಜಾರಿ ಮಾಡಿತ್ತು.

ಚೆಪಾಕ್-ತಿರುವಳ್ಳಿಕೇಣಿಯಲ್ಲಿ ಪ್ರಚಾರ ಮಾಡುತ್ತಿದ್ದ ಸಂದರ್ಭದಲ್ಲಿ, “ಪಳನಿಸ್ವಾಮಿ ಸಿಎಂ ಆಗುವ ಮುಂಚೆ ಯಾರಿಗೂ ಗೊತ್ತಿರಲಿಲ್ಲ. ಅವರು ಪಕ್ಷ ಬೆಳೆಸದೆ ಅಧಿಕಾರಕ್ಕೆ ಬಂದಿದ್ದಾರೆ. ಹಾಗಾಗಿ ಅವರ ಜನನ ಅಕ್ರಮ ಮತ್ತು ಅಕಾಲಿಕ” ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದಕ್ಕೂ ಮೊದಲು ಮುಖ್ಯಮಂತ್ರಿಯನ್ನು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅವರ ಚಪ್ಪಲಿಗಿಂತ ಒಂದು ರೂಪಾಯಿ ಕಡಿಮೆ ಎಂದು ಕರೆದಿದ್ದರು.

ಹಾಗಾಗಿ ಡಿಎಂಕೆ ನಾಯಕ ಎ.ರಾಜಾ ವಿರುದ್ಧ ಐಪಿಸಿಯ ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 294 ಬಿ (ಸಾರ್ವಜನಿಕ ಸ್ಥಳದಲ್ಲಿ ಕೆಟ್ಟ ಭಾಷೆ) ಮತ್ತು ಜನರ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 127 (ಚುನಾವಣಾ ಸಭೆಗಳಲ್ಲಿ ಅಡಚಣೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆದರೆ ಘಟನೆ ಕುರಿತು ಕ್ಷಮೆಯಾಚಿಸರುವ ಎ ರಾಜಾ, “ನಾನು ನನ್ನ ಹೇಳಿಕೆಯನ್ನು ಪುನರುಚ್ಚರಿಸುತ್ತೇನೆ. ನನ್ನ ಭಾಷಣವು ಇಬ್ಬರು ನಾಯಕರ ವಿರುದ್ಧದ ವೈಯಕ್ತಿಕ ಟೀಕೆ ಅಲ್ಲ. ನನ್ನ ಭಾಷಣವು ಸಾರ್ವಜನಿಕ ಜೀವನದಲ್ಲಿರುವ ಇಬ್ಬರು ವ್ಯಕ್ತಿಗಳ ಹೋಲಿಕೆಯಾಗಿದೆ” ಎಂದಿದ್ದರು.

“ನನ್ನ ಮಾತುಗಳಿಂದ ಮುಖ್ಯಮಂತ್ರಿಗಳಿಗೆ ನೋವುಂಟಾಗಿದೆ ಎಂದು ಮಾಧ್ಯಮಗಳಲ್ಲಿ ಓದಿ ನನಗೆ ನೋವಾಗಿದೆ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಆದರೂ ನಾನು ಈ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ. ಇದಲ್ಲದೆ, ರಾಜಕೀಯ ಕಾರಣಗಳನ್ನು ಬಿಟ್ಟು, ಇದರಿಂದ ಅವರಿಗೆ ನೋವುಂಟಾಗಿದ್ದರೆ, ಮನಃಪೂರ್ವಕವಾಗಿ ಕ್ಷಮೆಯಾಚಿಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದು ಎ.ರಾಜಾ ಹೇಳಿದ್ದರು. ಆದರೆ, ಇದೀಗ ಅವರನ್ನು ಮುಂದಿನ 48 ಗಂಟೆಗಳ ಕಾಲ ಚುನಾವಣಾ ಪ್ರಚಾರದಿಂದಲೇ ನಿಷೇಧಿಸಲಾಗಿರುವುದು ಡಿಎಂಕೆ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿ ಪರಿಣಮಿಸಲಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ಕುಮಾರಸ್ವಾಮಿ 10 ಕೋಟಿ ಹಣ ಪಡೆದ ಆರೋಪ: ಬಹಿರಂಗ ಚರ್ಚೆಗೆ ಆಹ್ವಾನಿಸಿದ ಜಮೀರ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...