Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP...

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 25 ಕೋಟಿ ಅವ್ಯವಹಾರ: ಸಚಿವ ಸುಧಾಕರ್‌ಗೆ ಕೋಟ್ಯಂತರ ರೂ ಕಿಕ್‌ಬ್ಯಾಕ್- AAP ಆರೋಪ

- Advertisement -
- Advertisement -

ಕರ್ನಾಟಕ ಡ್ರಗ್ ಅಂಡ್ ಲಾಜಿಸ್ಟಿಕ್‌, ವೇರ್‌ಹೌಸಿಂಗ್ ಸೊಸೈಟಿಯಲ್ಲಿ 39 ಕೋಟಿ ಹಗರಣ ನಡೆದಿದ್ದು, ಆರೋಗ್ಯ ಸಚಿವ ಸುಧಾಕರ್ ಅವರ ಅಣತಿಯಂತೆ ಆಪ್ತ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಇದರಲ್ಲಿ ಸಚಿವರಿಗೆ ಕೋಟ್ಯಾಂತರ ರೂ ಕಿಕ್‌ಬ್ಯಾಕ್‌ ಸಂದಾಯವಾಗಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರದ ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದ ಪ್ರೆಸ್ ಕ್ಲಬ್ ನಲ್ಲಿ‌ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಸರ್ಕಾರಿ ಆಸ್ಪತ್ರೆಗಳಲ್ಲಿ ಬಡರೋಗಿಗಳಿಗೆ ಸೌಲಭ್ಯ ನೀಡಲು ಖರೀದಿಸುವ ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಉಪಕರಣಗಳ ಟೆಂಡರ್ ಅನ್ನು ಆಪ್ತ ಕಂಪನಿಗೆ ನೀಡುವ ಉದ್ದೇಶದಿಂದ ಸಚಿವರ ಅಣತಿಯಂತೆ ಇಲಾಖೆ ಅಧಿಕಾರಿಗಳು ಭಾರಿ ಅಕ್ರಮ ನಡೆಸಿದ್ದಾರೆ‌” ಎಂದು ದೂರಿದ್ದಾರೆ.

ಟೆಂಡರ್ ನಂ. KDL/EQPT/ TND/LE-3 ಭಾಗ HAE/103/2020-21 (IND-720) ದಿನಾಂಕ 23/09/2020 ಮತ್ತು ಟೆಂಡರ್ ನಂ. KDL/EQPT/ Re-TND/LE-5 ಭಾಗ HA/104/2020-21 (IND-721) ದಿನಾಂಕ 23/09/2020 ರಂತೆ ಒಂದು ಅಲ್ಪಾವದಿ ಟೆಂಡರ್ ಅನ್ನು ರದ್ದು ಮಾಡಿ ರೀ ಟೆಂಡರ್ ಮಾಡುವಾಗ, ಟೆಂಡರ್ ಸ್ಪೆಸಿಫಿಕೇಶನ್ ಬದಲಿಸಲು ಅವಕಾಶವಿಲ್ಲ. ಹೀಗಿರುವಾಗ ಏಕೆ ಬದಲಾವಣೆ ಮಾಡಿದ್ದಾರೆ? ಟೆಂಡರ್ ನಲ್ಲಿ ಕೇವಲ ಒಂದೇ ಬಿಡ್ ಬಂದರೂ ಅದನ್ನು ಆಯ್ಕೆ ಸಮಿತಿ ಹೇಗೆ ಪರಿಗಣಿಸಿದೆ? ಇದರಲ್ಲಿ ಸುಧಾಕರ್ ಪಡೆದಿರುವ ಕಿಕ್ ಬ್ಯಾಕ್ ಎಷ್ಟು? ಎಂದು ಪ್ರಶ್ನಿಸಿದ್ದಾರೆ.

ಜೈವಿಕ ರಸಾಯನ ಶಾಸ್ತ್ರ ಮತ್ತು ಹೆಮಟೋಲಜಿ ಒಂದು ಉಪಕರಣವನ್ನು ದೆಹಲಿ ಸರ್ಕಾರ 1,80,540 ಕ್ಕೆ ಖರೀದಿಸಿದೆ. ಹಿಮಾಚಲ ಪ್ರದೇಶ ಸರ್ಕಾರ 1,30,000 ಕ್ಕೆ ಖರೀದಿಸಿದೆ ಮತ್ತು ದೆಹಲಿಯ ಮುನಿಸಿಪಾಲಿಟಿ 1,44,000 ಕ್ಕೆ ಖರೀದಿಸಿದೆ. ಹೀಗಿರುವಾಗ ನಮ್ಮ ಕರ್ನಾಟಕ ಸರ್ಕಾರ ಉಪಕರಣ ಒಂದಕ್ಕೆ 2,96,180 ನೀಡಿ ಖರೀದಿ ಆದೇಶ ಮಾಡಿದೆ. ಒಟ್ಟಾರೆ 1195 ಉಪಕರಣ ಖರೀದಿ ಮಾಡಬೇಕಾಗಿರುವುದರಿಂದ ನಮ್ಮ ಸರ್ಕಾರ 19.85 ಕೋಟಿ ಹೆಚ್ಚುವರಿಯಾಗಿ ನೀಡಬೇಕಾಗಿದೆ ಎಂದು ಆಪ್ ಆರೋಪಿಸಿದೆ.

5 Parts ಹೆಮಟಾಲಜಿ ಸೆಲ್ ಕೌಂಟರ್ ಖರೀದಿಗೆ ಆಯ್ಕೆಯಾದ ಕಂಪನಿ ಸಿಸ್ಮೆಕ್ಸ್. ಕೇರಳ ಸರ್ಕಾರಕ್ಕೆ ಇದೇ ಸಂಸ್ಥೆ 4.60 ಲಕ್ಷಕ್ಕೆ ಮಾರಾಟ‌ ಮಾಡಿದ್ದು, ಕರ್ನಾಟಕ ಸರ್ಕಾರಕ್ಕೆ 8.35 ಲಕ್ಷಕ್ಕೆ ವ್ಯಾಪಾರ ಕುದುರಿಸಿದೆ. 165 ಉಪಕರಣಕ್ಕೆ 6.18 ಕೋಟಿಯಷ್ಟು ಹೆಚ್ಚುವರಿ ಭರಿಸಬೇಕಾಗಿದೆ ಎಂದು ಆಪ್ ಕಿಡಿಕಾರಿದೆ. ಈ ಎರಡು ಉಪಕರಣಗಳ ಖರೀದಿಯಲ್ಲಿ ಸುಮಾರು 25 ಕೋಟಿ ಗೂ ಹೆಚ್ಚು ಮೊತ್ತವನ್ನು ಸರಕಾರವು ಹೆಚ್ಚಾಗಿ ಪಾವತಿಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಸಿಸ್ಮೆಕ್ಸ್ ಎಂಬ ಕಂಪನಿಯು ಈ ಎರಡು ರೀತಿಯ ಉಪಕರಣವನ್ನು ಬೇರೆ ರಾಜ್ಯಕ್ಕೆ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಿದೆ. ಆದರೆ ನಮ್ಮ ರಾಜ್ಯಕ್ಕೆ ಡಬಲ್ ರೇಟ್ ನಲ್ಲಿ ಮಾರಿದ್ದರೂ ಇಲಾಖೆ ಕಣ್ಣುಮುಚ್ಚಿ ಕುಳಿತು ಖರೀದಿ ಆದೇಶ ನೀಡಿದ್ದಾದರೂ ಏಕೆ? ಕೊವಿಡ್ ಸಂದರ್ಭದಲ್ಲಿ ಎಲ್ಲಾ ಖರೀದಿಗಳನ್ನು ತರಾತುರಿಯಲ್ಲಿ ಮಾಡಬೇಕು ಎಂಬ ನೆಪ ಹೇಳಿ, ಸಚಿವರು ಮತ್ತು ಅಧಿಕಾರಿಗಳು ಪ್ರತಿ ಖರೀದಿಯಲ್ಲಿ ಕೋಟಿ ಕೋಟಿ ಬಾಚಿಕೊಂಡಿದ್ದಾರೆ. ಇದರ ಸತ್ಯಾಸತ್ಯತೆ ಹೊರಬರಬೇಕಾದರೆ ಸಮಗ್ರವಾಗಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಮೋಹನ್ ದಾಸರಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವೈರಸ್‌ಗೆ ಲಸಿಕೆ ಎಲ್ಲಿಂದ ತರುವುದು?: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು 'ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್'ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ...

ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ ‘ಜಾತ್ಯತೀತ ಜನತಾದಳ’ ನಾಯಕ ಕುಮಾರಸ್ವಾಮಿ

ಭಗವದ್ಗೀತೆಯನ್ನು 'ಪವಿತ್ರ ಗ್ರಂಥ' ಎಂದಿರುವ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ, ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಭಗವದ್ಗೀತೆ ಬೋಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೇಂದ್ರ ಶಿಕ್ಷಣ...

‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಆರ್‌ಟಿ) ಪಠ್ಯಪುಸ್ತಕವನ್ನು 'ಲವ್ ಜಿಹಾದ್' ಪಿತೂರಿಯೊಂದಿಗೆ ಜೋಡಿಸುವ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಮಂಗಳವಾರ (ಡಿಸೆಂಬರ್...

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಪ್ರಪ್ರಥಮ ‘ಫಿಫಾ ಶಾಂತಿ’ ಪ್ರಶಸ್ತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಹೊಸ ಫಿಫಾ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ನೀಡಲಾಯಿತು. ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಬಹಿರಂಗವಾಗಿ ಆಸೆ ವ್ಯಕ್ತಪಡಿಸಿದ್ದ ಅವರಿಗೆ, ಹೊಸದಾಗಿ ರಚಿಸಲಾದ ಫಿಫಾ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಟ್ರಂಪ್...

ಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ

ಬುದ್ಧನ ತತ್ವಗಳು, ಬಸವ- ಅಲ್ಲಮರ ಚಿಂತನೆಗಳು, ಬಾಬಾ ಸಾಹೇಬರ ವಿಚಾರಗಳು , ನಮ್ಮ ಸಂವಿಧಾನದ ದಿಕ್ಸೂಚಿಗಳು ಹಾಗೂ ಕಳೆದ 75 ವರ್ಷಗಳಿಂದ ಸ್ಕ್ಯಾಂಡಿನೇವಿಯನ್ ದೇಶಗಳು ಒಂದು ಮಟ್ಟಿಗೆ ಸಾಧಿಸಿದ ಆಧುನಿಕ‌ ಮಾನವೀಯ‌- ವೈಜ್ಞಾನಿಕ...