Homeಕರ್ನಾಟಕAPMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

APMC ತಿದ್ದುಪಡಿ ಕಾಯ್ದೆಯ ದುಷ್ಪರಿಣಾಮ ಆರಂಭ: 16% ಇಳುವರಿ ಹೆಚ್ಚಾಗಿದ್ದರೂ ತೊಗರಿಬೇಳೆ ದರ ಏರಿಕೆ

ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು ಇನ್ನೂ ಹೆಚ್ಚಾಗುವ ನಿರೀಕ್ಷೆಯಿದೆ.

- Advertisement -
- Advertisement -

ಇಂಧನ ಮತ್ತು ಅಡುಗೆ ಅನಿಲ ಬೆಲೆಗಳು ಏರಿಯಾಗಿದ್ದು ಜನಸಾಮಾನ್ಯರು ಈಗಾಗಲೇ ಕಷ್ಟಪಡುತ್ತಿದ್ದಾರೆ. ಇದೀಗ ಸಾಮಾನ್ಯ ಜನರ ಪ್ರೋಟೀನ್‌ಯುಕ್ತ ಆಹಾರವಾದ ತೊಗರಿ ಬೇಳೆ ಬೆಲೆಗಳೂ ನಿಧಾನವಾಗಿ ಏರಿಕೆಯಾಗುತ್ತಿದೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದ ನಂತರ ಹಲವಾರು ಖಾಸಗಿ ವ್ಯಾಪಾರಿಗಳು ತೊಗರಿ ಬೇಳೆಯನ್ನು ನೇರವಾಗಿ ರೈತರಿಂದ ಖರೀದಿಸಿ ಅದನ್ನು ‘ಸಂಗ್ರಹಿಸಲು’ ಪ್ರಾರಂಭಿಸಿದ್ದಾರೆ ಎನ್ನಲಾಗಿದ್ದು, ಪರಿಣಾಮವಾಗಿ, ತೊಗರಿ ಬೇಳೆ ಬೆಲೆ ದುಬಾರಿಯಾಗತೊಡಗಿದೆ.

ಅಷ್ಟೇ ಅಲ್ಲದೆ 2020 ರಲ್ಲಿ ಭಾರಿ ಮತ್ತು ಅಕಾಲಿಕ ಮಳೆ ಹಾಗೂ ಎಪಿಎಂಸಿ ಕಾಯ್ದೆಯ ತಿದ್ದುಪಡಿಯು ಕರ್ನಾಟಕದಾದ್ಯಂತ ದ್ವಿದಳ ಧಾನ್ಯಗಳ ತೀವ್ರ ಕೊರತೆಯನ್ನು ಉಂಟುಮಾಡಿದೆ ಎನ್ನಲಾಗಿದೆ. ದ್ವಿದಳ ಧಾನ್ಯಗಳ ಅತಿದೊಡ್ಡ ಉತ್ಪಾದಕ ರಾಜ್ಯವಾದ ಕರ್ನಾಟಕವೊಂದರಲ್ಲೇ, ಕಳೆದ ವರ್ಷ ಸುರಿದ ಅಕಾಲಿಕ ಮಳೆಯಿಂದಾಗಿ 66% ತೊಗರಿ ಕೊಯ್ಲು ಹಾಳಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಅಸ್ಥಿರ ಅಡಿಕೆ ಮಾರುಕಟ್ಟೆಯೂ, ಕಂಗೆಟ್ಟ ತೋಟಿಗರೂ!

ಈ ಕೊರತೆಯಿಂದಾಗಿ ಈಗಾಗಲೇ ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕಿಲೋ ತೊಗರಿ ಬೇಳೆಯ ಬೆಲೆಯು 100 ರಿಂದ 110 ರೂ.ಗಳಿಗೆ ತಲುಪಿದೆ. ಮುಂಬರುವ ಯುಗಾದಿ ಹಬ್ಬಕ್ಕಿಂತ ಮುಂಚೆಯೆ ಈ ಬೆಲೆಗಳು 140 ರಿಂದ 150 ರೂ.ಗೆ ತಲುಪುವ ನಿರೀಕ್ಷೆಯಿದೆ.

ಕಾಯ್ದೆಗೆ ತಿದ್ದುಪಡಿ ಮಾಡಿದಾಗಿನಿಂದ ಎಪಿಎಂಸಿಗೆ ಸರಬರಾಜಾಗುತ್ತಿದ್ದ ತೊಗರಿ ಬೇಳೆಯು 50% ಷ್ಟು ಕುಸಿತ ಕಂಡಿದೆ ಎಂದು ಕಲಬುರಗಿ ಎಪಿಎಂಸಿ ಕಾರ್ಯದರ್ಶಿ ಶೈಲಾಜಾ ಎಂ.ವಿ ತಿಳಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿದೆ. ಈ ಎಪಿಎಂಸಿ ಮಾರುಕಟ್ಟೆಯು ಪ್ರತಿವರ್ಷ ಸರಾಸರಿ 15 ಲಕ್ಷ ಕ್ವಿಂಟಾಲ್ ತೊಗರಿ ಬೇಳೆ ಖರೀದಿಸುತ್ತದೆ.

ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ (ಎಚ್‌ಕೆಸಿಸಿಐ) ಮಾಜಿ ಅಧ್ಯಕ್ಷ ಅಮರನಾಥ್ ಸಿ. ಪಾಟೀಲ್ ಅವರ ಪ್ರಕಾರ, “ಕೆಲವು ವ್ಯಾಪಾರಿಗಳು ಈಗಾಗಲೇ ಏಜೆಂಟರ ಮೂಲಕ ದ್ವಿದಳ ಧಾನ್ಯಗಳನ್ನು ರೈತರಿಂದ ನೇರವಾಗಿ ಖರೀದಿಸುತ್ತಿದ್ದಾರೆ. ಅದನ್ನು ಸಂಗ್ರಹಣೆ ಮಾಡುದಕ್ಕಾಗಿ ನೆರೆಯ ಮಹಾರಾಷ್ಟ್ರದ ಲಾತೂರ್‌ಗೆ ಸಾಗಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಿದ್ದುಪಡಿ ಕಾಯ್ದೆಗೆ ಮುಚ್ಚಲಿವೆ ಎಪಿಎಂಸಿಗಳು; ಲಕ್ಷಾಂತರ ಕಾರ್ಮಿಕರು ಬೀದಿಪಾಲು ಸಾಧ್ಯತೆ!

ಖಾಸಗಿ ಕಂಪನಿಗಳು ಈಗಾಗಲೇ ಕಮಲಾಪುರದ ಎನ್‌ಜಿಒ ಮೂಲಕ ರೈತರನ್ನು ಖರೀದಿಗಾಗಿ ಕಾಯ್ದಿರಿಸಿದ್ದವು ಎಂದು ಕರ್ನಾಟಕ ತೊಗರಿ ಬೆಳೆಗಾರರ ​​ಸಂಘದ ಅಧ್ಯಕ್ಷ ಬಸವರಾಜ್ ಇಂಗಿನ್ ಹೇಳಿದ್ದಾರೆ. “ಇನ್ನೂ ಕೆಲವರು ಲಾತೂರ್ ಮಾರುಕಟ್ಟೆಯಲ್ಲಿ ಉತ್ಪನ್ನಗಳನ್ನು ಉತ್ತಮ ಬೆಲೆಗೆ ನೇರವಾಗಿ ಮಾರಾಟ ಮಾಡುತ್ತಿದ್ದಾರೆ. ಸುಮಾರು 50 ಟ್ರಕ್ ಲೋಡ್ ತೊಗರಿ ಮಹಾರಾಷ್ಟ್ರಕ್ಕೆ ಹೋಗುತ್ತಿತ್ತು, ಈಗ ಅದು ಹೆಚ್ಚಾಗಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕೃಷಿ ಬೆಲೆ ನಿಗದಿ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಅವರು, “ಕಳೆದ ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಈ ವರ್ಷ 16% ದಷ್ಟು ತೊಗರಿ ಬೇಳೆ ಇಳುವರಿ ಹೆಚ್ಚಾಗಿದೆ. ಉತ್ಪಾದನೆ ಜಾಸ್ತಿಯಾದರೆ ಬೆಲೆಗಳು ಕಡಿಯಾಗಬೇಕಿತ್ತು, ಆದರೆ ಇಲ್ಲಿ ಹಾಗಾಗುತ್ತಿಲ್ಲ. ಯಾಕೆಂದರೆ ಎಪಿಎಂಸಿಗೆ ಈ ಹಿಂದೆ ಬರುತ್ತಿದ್ದ ತೊಗರಿ ಬೇಳೆ ಕಾಲು ಭಾಗ ಕಡಿಮೆಯಾಗಿದೆ. ಇದೆಲ್ಲಾ ಕಾಯ್ದೆ ತಿದ್ದುಪಡಿಯ ಪರಿಣಾಮವಾಗಿದೆ. ತಿದ್ದುಪಡಿಯಾಗಿ ಇನ್ನೂ ವರ್ಷವಾಗಿಲ್ಲ ಆದರೆ ಈಗಲೇ ಕಾಲು ಭಾಗ ತೊಗರಿ ಕಡಿಮೆಯಾಗಿದೆ. ಇದು ಪ್ರಾರಂಭ ಮಾತ್ರ, ಈ ಪರಿಸ್ಥಿತಿ ಇನ್ನೂ ಜಾಸ್ತಿಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಹೀಗಾಗಿದೆ ಎಂಬುವುದು ಸರಿಯಾದ ಕಾರಣವಲ್ಲ. ಯಾಕೆಂದರೆ ಕಲಬುರಗಿ ಜಿಲ್ಲೆಯಲ್ಲಿ ಮಾತ್ರವೆ ಅಕಾಲಿಕ ಮಳೆ ಆಗಿದೆ. ಇದು ನೇರವಾಗಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಎಪಿಎಂಸಿಯನ್ನು ದುರ್ಬಲ ಮಾಡಿರುವುದು ಮುಖ್ಯಕಾರಣ. ಅಲ್ಲದೆ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಯನ್ನು ಕಿತ್ತು ಹಾಕಿರುವುದರಿಂದ ಆಹಾರ ಬೆಳೆಗಳನ್ನು ಎಷ್ಟು ಬೇಕಾದರೂ ಕೂಡಿಟ್ಟುಕೊಳ್ಳಬುದುದು, ಕಾಳ ಸಂತೆ ಮಾಡಬುದಾಗಿದೆ. ಹೀಗಾಗಿ ಈಗಾಗಲೆ ದೊಡ್ಡ ದೊಡ್ಡ ಕಂಪೆನಿಗಳು ಹೊರಗಡೆಯಿಂದ ಖರೀದಿ ಮಾಡಿದ್ದಾರೆ, ಕೂಡಿಟ್ಟಿದ್ದಾರೆ ಇದರಿಂದಾಗಿ ಬೆಲೆ ಏರಿಕೆ ಪ್ರಾರಂಭವಾಗಿದೆ” ಕಮ್ಮರಡಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಏನಿವು ಮೂರು ಕೃಷಿ ಕಾಯಿದೆಗಳು – ಮರು ಓದು

ತೊಗರಿ ಮಿಲ್ಸ್ ಅಸೋಸಿಯೇಷನ್‌ನ ಶಿವಶರಣಪ್ಪ ಮಾತನಾಡಿ, “ಪೂರೈಕೆಯ ಕೊರತೆಯಿಂದಾಗಿ ಹಲವಾರು ಗಿರಣಿಗಳು ಕೆಲಸವನ್ನು ನಿಲ್ಲಿಸಿವೆ” ಎಂದು ಹೇಳಿದ್ದಾರೆ.

ಕಲಬುರಗಿ ಜಿಲ್ಲೆ ಒಂದೇ ಕರ್ನಾಟಕದ ತೊಗರಿ ಬೇಳೆ ಉತ್ಪಾದನೆಯಲ್ಲಿ ಸುಮಾರು 50% ದಿಂದ 60% ದಷ್ಟು ಕೊಡುಗೆ ನೀಡುತ್ತದೆ.

ಬೆಂಗಳೂರು ಸಗಟು ಆಹಾರ ಧಾನ್ಯಗಳು ಮತ್ತು ಬೇಳೆಕಾಳುಗಳ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಮೇಶ್ ಚಂದ್ರ ಲಾಹೋತಿ, “ಮುಂದಿನ ಋತುವಿನವರೆಗೆ ಕೊರತೆ ಉಳಿಯುವ ಸಾಧ್ಯತೆಯಿದೆ, ಇದರಿಂದಾಗಿ ಬೆಲೆಗಳು 150 ರೂ.ಗೆ ಏರಿಕೆಯಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಾಯನ್ಸ್‌ನಿಂದ MSP ಗಿಂತಲೂ ಅಧಿಕ ಬೆಲೆಗೆ ಭತ್ತ ಕೊಳ್ಳುವಿಕೆ: ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...