Homeಮುಖಪುಟನಾನು ಕರುಣಾನಿಧಿ ಮಗ ಎಂಬುದನ್ನು ಮರೆಯದಿರಿ, ನಿಮ್ಮ ಬೆದರಿಕೆಗೆ ಬಗ್ಗುವುದಿಲ್ಲ: ಐಟಿ ದಾಳಿಗೆ ಎಂ.ಕೆ ಸ್ಟಾಲಿನ್...

ನಾನು ಕರುಣಾನಿಧಿ ಮಗ ಎಂಬುದನ್ನು ಮರೆಯದಿರಿ, ನಿಮ್ಮ ಬೆದರಿಕೆಗೆ ಬಗ್ಗುವುದಿಲ್ಲ: ಐಟಿ ದಾಳಿಗೆ ಎಂ.ಕೆ ಸ್ಟಾಲಿನ್ ಪ್ರತಿಕ್ರಿಯೆ

ನಾನು ನನ್ನ ಹೆಸರಿನಲ್ಲಿರುವ ಎಲ್ಲಾ ಆಸ್ತಿಯನ್ನು ಅಮಿತ್‌ ಶಾರವರ ಮಗ ಜಯ್‌ಶಾರವರ ಹೆಸರಿಗೆ ಬರೆದುಕೊಡುತ್ತೇನೆ. ಅವರು ಅದೇ ರೀತಿ ಮಾಡಲು ಸಿದ್ದರಿದ್ದಾರ? - ಉದಯನಿಧಿ ಸ್ಟಾಲಿನ್

- Advertisement -
- Advertisement -

ನಾನು ಎಂ.ಕೆ ಸ್ಟಾಲಿನ್. ತುರ್ತು ಪರಿಸ್ಥಿತಿಯನ್ನು ಎದುರಿಸಿದವನು. ನಿಮ್ಮ ಈ ಐಟಿ ದಾಳಿಗೆ ಬೆದರುವವನಲ್ಲ, ನಾವು ಎಐಎಡಿಎಂಕೆ ನಾಯಕರಲ್ಲ ಎಂಬುದನ್ನು ನರೇಂದ್ರ ಮೋದಿಯವರು ಮರೆಯಬಾರದು ಎಂದು ಡಿಎಂಕೆ ಮುಖಂಡ ಸ್ಟಾಲಿನ್ ತಮ್ಮ ಅಳಿಯ ಮತ್ತು ಮಗಳ ಮನೆ ಮೇಲಿನ ಐಟಿ ದಾಳಿಗೆ ಪ್ರತಿಕ್ರಿಯಿಸಿದ್ದಾರೆ.

ಪೆರಂಬಲೂರ್‌ನಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, “ನಾನು ಇಂದು ಬೆಳಿಗ್ಗೆ ಚನ್ನೈನಿಂದ ತಿರುಚಿಗೆ ಬಂದಿದ್ದೇನೆ. ಚನ್ನೈನಲ್ಲಿನ ನನ್ನ ಮಗಳ ಮನೆ ಮೇಲೆ ಐಟಿ ದಾಳಿ ನಡೆದಿದೆ ಎಂಬ ಸುದ್ದಿ ತಿಳಿಯಿತು. ನರೇಂದ್ರ ಮೋದಿ ಸರ್ಕಾರ ತಮಿಳುನಾಡಿನಲ್ಲಿ ಎಐಎಡಿಎಂಕೆ ಸರ್ಕಾರವನ್ನು ಉಳಿಸಲು ಶತಪ್ರಯತ್ನ ಮಾಡುತ್ತಿದೆ. ನಾನು ನರೇಂದ್ರ ಮೋದಿಯವರಿಗೆ ಹೇಳಲು ಬಯಸುತ್ತೇನೆ, ಇದು ಡಿಎಂಕೆ ಪಕ್ಷ ಎಂಬುದನ್ನು ಮರೆಯಬೇಡಿ. ನಾನು ಕಲೈಜ್ಞರ್ (ಕರುಣಾನಿಧಿ)ಯವರ ಮಗ. ನಾನು ಯಾವುದಕ್ಕೂ ಹೆದರುವುದಿಲ್ಲ” ಎಂದು ಸ್ಟಾಲಿನ್ ಸವಾಲು ಹಾಕಿದ್ದಾರೆ.

ತಮಿಳುನಾಡು ಚುನಾವಣೆಗೆ 4 ದಿನ ಬಾಕಿ ಇರುವಂತೆ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಮಗಳು ಸೆಂಥಮರಾಯ್, ಅಳಿಯ ಸಬರೀಸನ್ ವಾಸಿಸುತ್ತಿರುವ ನೀಲಂಗರೈನಲ್ಲಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಅವರ ನಾಲ್ಕು ಮನೆಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಏಪ್ರಿಲ್ 06 ರಂದು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ಈ ಐಟಿ ದಾಳಿ ನಡೆದಿರುವುದು ಹಲವರು ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ ತಿಂಗಳಷ್ಟೇ ಡಿಎಂಕೆ ಹಿರಿಯ ಮುಖಂಡ ಮತ್ತು ಅಭ್ಯರ್ಥಿ ಇ.ವಿ ವೇಲುರವರ ಮನೆ ಮೇಲೆ ಐಟಿ ದಾಳಿ ನಡೆದಿತ್ತು.

ಚುನಾವಣೆ ಹತ್ತಿರದಲ್ಲಿ ನಡೆದ ಐಟಿ ದಾಳಿಯನ್ನು ಖಂಡಿಸಿರುವ ಡಿಎಂಕೆ, “ಐಟಿ ಇಲಾಖೆಯು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ” ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತೆರಿಗೆ ಅಧಿಕಾರಿಗಳು “ಎಐಎಡಿಎಂಕೆ-ಬಿಜೆಪಿಯ ಚುನಾವಣಾ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಡಿಎಂಕೆ ಆರೋಪಿಸಿದ್ದು, ತೆರಿಗೆ ಇಲಾಖೆಯನ್ನು ಉನ್ನತ ಸ್ಥಾನಕ್ಕೆ ತರಲು ಚುನಾವಣಾ ಸಂಸ್ಥೆಯನ್ನು ಒತ್ತಾಯಿಸಿದೆ.

ಇನ್ನು ಚುನಾವಣಾ ಪ್ರಚಾರದಲ್ಲಿ ಮಾತನಾಡಿರುವ ಸ್ಟಾಲಿನ್ ಮಗ ಉದಯನಿಧಿ ಸ್ಟಾಲಿನ್, “ನಾನು ನನ್ನ ಹೆಸರಿನಲ್ಲಿರುವ ಎಲ್ಲಾ ಆಸ್ತಿಯನ್ನು ಅಮಿತ್‌ ಶಾರವರ ಮಗ ಜಯ್‌ಶಾರವರ ಹೆಸರಿಗೆ ಬರೆದುಕೊಡುತ್ತೇನೆ. ಅವರು ಅದೇ ರೀತಿ ಮಾಡಲು ಸಿದ್ದರಿದ್ದಾರ?” ಎಂದು ಸವಾಲು ಹಾಕಿದ್ದಾರೆ.

“ಅಮಿತ್ ಷಾ ಅವರ ಕೆಲಸವೆಂದರೆ ಇತರರನ್ನು ಬೆದರಿಸುವುದು ಮತ್ತು ಚುನಾಯಿತ ಸರ್ಕಾರಗಳನ್ನು ಉರುಳಿಸುವುದು… ನಾನು ಅವರಿಗೆ ಹೆದರುವುದಿಲ್ಲ, ನಾನು ಕಲೈಜ್ಞರ್ (ಕರುಣಾನಿಧಿ) ಯವರ ಮೊಮ್ಮಗ” ಎಂದು ಉದಯನಿಧಿ ಕಿಡಿಕಾರಿದ್ದಾರೆ.


ಇದನ್ನೂ ಓದಿ: ತಮಿಳುನಾಡು: ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಅಳಿಯನ ಮನೆ ಮೇಲೆ ಐಟಿ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...